ಕೊರೊನಾ ಕಡಿವಾಣಕ್ಕೆ ಇಂದಿನಿಂದ ಕಠಿಣ ಕರ್ಫ್ಯೂ

Team Udayavani, May 10, 2021, 11:01 PM IST

10-19

ಶಿವಮೊಗ್ಗ: ಜಿಲ್ಲೆಯಾದ್ಯಂತ ಸೋಮವಾರದಿಂದ ಕಟ್ಟುನಿಟ್ಟಿನಿಂದ ಕೊರೊನಾ ಕರ್ಫ್ಯೂ ಜಾರಿಯಾಗಲಿದ್ದು, ಜನರು ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿ ನಡೆದುಕೊಂಡು ಹೋಗಿ ಖರೀದಿಸಲು ಮಾತ್ರ ಅವಕಾಶವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಸಂಘಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಆಸ್ಪತ್ರೆಗೆ ತೆರಳುವಂತಹ ಅಗತ್ಯ ಸಂದರ್ಭದಲ್ಲಿ ಮಾತ್ರ ವಾಹನ ಬಳಸಬಹುದಾಗಿದೆ. ಸ್ಥಳೀಯವಾಗಿ ಇರುವ ಮೆಡಿಕಲ್‌ ಶಾಪ್‌ಗ್ಳಿಗೂ ನಡೆದುಕೊಂಡೇ ಹೋಗಬೇಕು.

ಇತರ ಕಾರಣಗಳಿಗೆ ರಸ್ತೆಗೆ ಬರುವ ವಾಹನವನ್ನು ಲಾಕ್‌ಡೌನ್‌ ಮುಗಿಯುವ ತನಕ ಜಪ್ತಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು. ಸ್ಥಳೀಯವಾಗಿ ಗುರುತಿಸಲಾಗಿರುವ ಝೋನ್‌ ವ್ಯಾಪ್ತಿಯಲ್ಲಿ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಪ್ರತಿ ಝೋನ್‌ನಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಿ ಸಂಚಾರ ನಿಬಂìಧಿ ಸಲಾಗುವುದು.

ಲಾಕ್‌ಡೌನ್‌ ಬಿಗಿಯಾಗಿ ಜಾರಿಗೊಳಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ನಗರದ ಎಲ್ಲಾ ವಾರ್ಡ್‌ಗಳಲ್ಲಿ ತರಕಾರಿ ಹಣ್ಣುಗಳನ್ನು ಮಾರಾಟ ಮಾಡಲು ಹಾಪ್ಸ್‌ಕಾಮ್ಸ್‌ಗೆ 70 ವಾಹನಗಳನ್ನು ಒದಗಿಸಲಾಗಿದೆ. ಈ ಎಲ್ಲಾ ವಾಹನಗಳು ಬೆಳಗ್ಗೆ 6ರಿಂದ 12ರವರೆಗೆ ವಾಹನ ಸಂಚರಿಸಿ ತರಕಾರಿ ಮಾರಾಟ ಮಾಡಲಿದೆ. ಎಪಿಎಂಸಿಯಲ್ಲಿ ಸಗಟು ಮಾರಾಟಕ್ಕೆ ಮಾತ್ರ ಅವಕಾಶವಿದೆ. ಎಪಿಎಂಸಿ ಹೊರಗೆ ಪ್ರಸ್ತುತ ನಡೆಯುತ್ತಿರುವ ಚಿಲ್ಲರೆ ಮಾರಾಟವನ್ನು ನಿಷೇಧಿಸಲಾಗಿದೆ. ತಳ್ಳುಗಾಡಿ ಮಾರಾಟಕ್ಕೆ ಸಹ ಬೆಳಿಗ್ಗೆ 6ರಿಂದ 12ರವರೆಗೆ ಅವಕಾಶ ನೀಡಲಾಗುವುದು. ಗ್ರಾಮೀಣ ಭಾಗದಲ್ಲಿ ವಾರದಲ್ಲಿ ಎರಡು ದಿನ ವಾಹನಗಳ ಮೂಲಕ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.

ಇದಕ್ಕೂ ಮುನ್ನ ಅಧಿಕಾರಿಗಳ ಸಭೆ ನಡೆಸಿದ ಈಶ್ವರಪ್ಪ, ಮೆಗ್ಗಾನ್‌ ಆಸ್ಪತ್ರೆಯ ಒಳಗೆ ಕೋವಿಡ್‌ ರೋಗಿಗಳ ಬಳಿ ಅವರ ಸಂಬಂ ಧಿಕರು ತೆರಳಲು ಅವಕಾಶ ನೀಡಬಾರದು. ಬೆಳಗ್ಗೆ ವಾಕಿಂಗ್‌ ಹೋಗಲು ಅನುಮತಿ ಇರುವುದಿಲ್ಲ. ಎಲ್ಲಾ ಉದ್ಯಾನವನ, ಸ್ಟೇಡಿಯಂ ಮುಚ್ಚಬೇಕು. ಮದುವೆಗೆ ಒಟ್ಟು 40ಮಂದಿಗೆ ಮಾತ್ರ ಅವಕಾಶವಿದ್ದು, ಅಗತ್ಯ ಪಾಸುಗಳನ್ನು ತಹಶೀಲ್ದಾರ್‌ ಕಚೇರಿಯಿಂದ ಪಡೆಯಬೇಕು. ಗಡಿಭಾಗದಲ್ಲಿರುವ ಜಮೀನುಗಳಿಗೆ ಕೃಷಿ ಚಟುವಟಿಕೆಗಳಿಗೆ ತೆರಳಲು ಅನುಮತಿ ನೀಡುವ ಕುರಿತು ಪರಿಶೀಲನೆ ನಡೆಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುವುದನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು. ಕಾರ್ಮಿಕರನ್ನು ಸಣ್ಣ ಗುಂಪುಗಳಲ್ಲಿ ವಿಂಗಡಿಸಿ ಸಾಮಾಜಿಕ ಅಂತರ ಪಾಲಿಸಿಕೊಂಡು ಕಾಮಗಾರಿ ಅನುಷ್ಟಾನಗೊಳಿಸಬೇಕು ಎಂದು ಅವರು ಸೂಚನೆ ನೀಡಿದರು.

ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ಕುಮಾರ ಬಂಗಾರಪ್ಪ, ಆಯನೂರು ಮಂಜುನಾಥ್‌, ರುದ್ರೇಗೌಡ, ಪ್ರಸನ್ನ ಕುಮಾರ್‌, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌, ಜಿಪಂ ಸಿಇಒ ಎಂ.ಎಲ್‌. ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ ಇದ್ದರು.

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

8

Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ

6-hosanagar

Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.