ಕೋವಿಡ್ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್’
Team Udayavani, May 11, 2021, 2:29 AM IST
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆಯನ್ನು ನಿಯಂತ್ರಿಸಲು, ಕೋವಿಡ್ ಸೋಂಕಿತರಾಗಿ ಹೋಂ ಐಸೋಲೇಶನ್‌ನಲ್ಲಿ ಇರುವವರಿಗೆ ಕಡ್ಡಾಯವಾಗಿ ಉಚಿತ ಅಗತ್ಯ ಮಾತ್ರೆಗಳನ್ನು ಒಳಗೊಂಡ ಕಿಟ್‌ಗಳನ್ನು ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸೋಮವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಕೋವಿಡ್ ಸ್ಥಿತಿ ಗತಿಯ ಕುರಿತು ಪ್ರಗತಿ ಪರಿಶೀಲನ ಸಭೆ ನಡೆಸಿ ಮಾತನಾಡಿದ ಅವರು ಪ್ರತೀ ದಿನ ಹೋಂ ಐಸೋಲೇಶನ್‌ನಲ್ಲಿರುವವರನ್ನು ಭೇಟಿ ಮಾಡಿ ಅವರ ಆರೋಗ್ಯ ಪರಶೀಲನೆ ಕುರಿತು ವರದಿ ಪಡೆಯಬೇಕು ಎಂದರು.
ಆಕ್ಸಿಜನ್ ಪೂರೈಕೆ
ಜಿಲ್ಲೆಯಲ್ಲಿ ಆಕ್ಸಿಜನ್ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಬಹ್ರೈನ್ ಮತ್ತು ಕುವೈಟ್‌ನಿಂದ ಬರುವ ಆಕ್ಸಿಜನ್‌ನಲ್ಲಿ ಸಹ ಜಿಲ್ಲೆಗೆ ಸಾಕಷ್ಟು ಪ್ರಮಾಣದ ಆಕ್ಸಿಜನ್ ಸರಬರಾಜು ಮಾಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಹೊಸದಾಗಿ 1,500 ಎಲ್‌ಪಿಎಂ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಸರಕಾರದಿಂದ ಅನುಮತಿ ದೊರೆತಿದೆ ಎಂದರು.
ರೆಮಿಡಿಸಿವಿರ್ ಪೂರೈಕೆ
ಜಿಲ್ಲೆಗೆ 480 ರೆಮಿಡಿಸಿವರ್ ಸರಬರಾಜು ಮಾಡಿದ್ದು, ಇನ್ನೂ ಹೆಚ್ಚುವರಿಯಾಗಿ 1000 ರೆಮಿಡಿಸಿವರ್ ಸರಬರಾಜು ಮಾಡುವಂತೆ ಸೂಚನೆ ನೀಡಲಾಗಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.