ಸೇವೆಗೆ ಸಿದ್ಧವಾಗಿರುವ ‘ಆಕ್ಸಿಜನ್ ಆನ್ ವ್ಹೀಲ್ಸ್’ ಬಸ್ : ಡಿಸಿಎಂ ಸವದಿ
Team Udayavani, May 11, 2021, 6:40 PM IST
ಬೆಂಗಳೂರು : ಕೋವಿಡ್ ಪಿಡುಗು ಅಧಿಕವಾಗಿ ಸಾರ್ವಜನಿಕರು ಆಕ್ಸಿಜನ್ ಗಾಗಿ ಪರಿತಪಿಸುವುದನ್ನು ತಪ್ಪಿಸಲು ಖಾಸಗಿ ಸ್ವಯಂ ಸೇವಾ ಸಂಸ್ಥೆಯ ಸಹಭಾಗಿತ್ವದಲ್ಲಿ ಬಿ.ಎಂ.ಟಿ.ಸಿ. ಸಂಸ್ಥೆಯು ಪ್ರಾಯೋಗಿಕವಾಗಿ ಮೊಬೈಲ್ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿಯವರು ತಿಳಿಸಿದ್ದಾರೆ.
ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ನೀಡುವುದು ವಿಳಂಬವಾಗಿ ತೀವ್ರ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಬಸ್ಸಿನಲ್ಲಿಯೇ ತುರ್ತು ಆಕ್ಸಿಜನ್ ಸೌಲಭ್ಯ ಒದಗಿಸಲು ಈ ನೂತನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಇದನ್ನೂ ಓದಿ : ರಸ್ತೆ ಮಧ್ಯ ಉರುಳಿ ಬಿದ್ದ ಪಿಕ್ಅಪ್ ವಾಹನವನ್ನು ಎಳೆದು ನಿಲ್ಲಿಸಿದ ಸ್ಥಳೀಯ ಆಫ್ ರೋಡರ್ ಟೀಮ್
ಆಕ್ಸಿಜನ್ ಪೂರೈಸುವ ಈ ವಿಶೇಷ ಬಸ್ಸನ್ನು ಸರ್ಕಾರಿ ಆಸ್ಪತ್ರೆಯ (ಕೆ.ಸಿ. ಜನರಲ್ ಆಸ್ಪತ್ರೆ ಅಥವಾ ವಿಕ್ಟೋರಿಯಾ ಆಸ್ಪತ್ರೆ) ಆವರಣದಲ್ಲಿ ನಿಲ್ಲಿಸಲಾಗುವುದು ಹೊರಗಿನಿಂದ ಕೋವಿಡ್ ಪೀಡಿತರು ಬಂದಾಗ ತಕ್ಷಣಕ್ಕೆ ಆಸ್ಪತ್ರೆಯ ಒಳಗೆ ಆಕ್ಸಿಜನ್ ಸಿಗದಿದ್ದರೆ ಆತಂಕ ಪಡದೇ ಈ ಆಕ್ಸಿಜನ್ ಮೊಬೈಲ್ ಬಸ್ಸಿನಲ್ಲಿಯೇ ತುರ್ತಾಗಿ ವಿಶ್ರಮಿಸಿ ಅಗತ್ಯ ಆಕ್ಸಿಜನ್ ಪಡೆದುಕೊಳ್ಳಲು ಸಾಧ್ಯವಾಗುವಂತೆ ವೈದ್ಯಕೀಯ ಉಪಕರಣಗಳನ್ನು ಇದರಲ್ಲಿ ಅಳವಡಿಸಲಾಗಿದೆ. ಸದ್ಯಕ್ಕೆ ಪ್ರಾಯೋಗಿಕವಾಗಿ ಒಂದು ಬಿ.ಎಂ.ಟಿ.ಸಿ. ಬಸ್ ನನ್ನು ಇದಕ್ಕಾಗಿ ಒದಗಿಸಲಾಗಿದೆ.
ಫೌಂಡೇಶನ್ ಇಂಡಿಯಾ ಎಂಬ ಸ್ವಯಂಸೇವಾ ಸಂಸ್ಥೆಯವರು ಈ ಬಸ್ಸಿನಲ್ಲಿ ಆಕ್ಸಿಜನ್ ಸರಬರಾಜು ಮಾಡಿ ಸೇವೆ ನೀಡಲು ಎಲ್ಲಾ ಅಗತ್ಯ ಉಪಕರಣಗಳನ್ನು ಅಳವಡಿಸುತ್ತಿದ್ದಾರೆ. ಏಕಕಾಲಕ್ಕೆ ಒಟ್ಟು ಆರು ಮಂದಿ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಕೋವಿಡ್ ನಂತಹ ಅಪಾಯಕಾರಿ ರೋಗದಿಂದ ತತ್ತರಿಸುತ್ತಾ ಆಕ್ಸಿಜನ್ ಗಾಗಿ ಪ್ರಯಾಸ ಪಡುವವರಿಗೆ ಇದು ಸಂಜೀವಿನಿ ಆಗಬಲ್ಲದು ಎಂದು ಸ್ಪಷ್ಟಪಡಿಸಿದ್ದಾರೆ.
ಚಾಲಕರು ಮತ್ತು ಸಿಬ್ಬಂದಿಗಳಿಗೆ ಸೋಂಕು ಹರಡದಂತೆ ವಿಶೇಷ ವಿನ್ಯಾಸದೊಂದಿಗೆ ‘ಆಕ್ಸಿಜನ್ ಆನ್ ವ್ಹೀಲ್ಸ್’ ಬಸ್ಸನ್ನು ಸಜ್ಜುಗೊಳಿಸಲಾಗಿದೆಯಲ್ಲದೇ, ಸ್ಯಾನಿಟೈಸರ್, ಮಾಸ್ಕ್ ಗಳನ್ನು ಇದರಲ್ಲಿ ಒದಗಿಸಲಾಗುವುದು. ಪ್ರತಿ ರೋಗಿಗಳೂ ಸಾಮಾನ್ಯವಾಗಿ 2ರಿಂದ 4 ಗಂಟೆಯ ಅವಧಿಯಲ್ಲಿ ಈ ಸೌಲಭ್ಯ ದಿಂದ ತಮಗೆ ಬೇಕಾದ ಅಗತ್ಯ ಪ್ರಮಾಣದ ಆಕ್ಸಿಜನ್ ಪಡೆದುಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ನಾಳೆಯಿಂದ ( ಗುರುವಾರ) ಪ್ರಾರಂಭಿಸಲಾಗುವ ಈ ವಿಶೇಷ ‘ಆಕ್ಸಿಜನ್ ಬಸ್ ಸೌಲಭ್ಯ’ ಯಶಸ್ವಿಯಾದರೆ ಮುಂದೆ ಇನ್ನಷ್ಟು ‘ಆಕ್ಸಿಜನ್ ಬಸ್ ಸೌಲಭ್ಯ’ ನೀಡಲು ಸಾರಿಗೆ ನಿಗಮಗಳಿಂದ ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ರೀತಿಯ ಮೊಬೈಲ್ ಆಕ್ಸಿಜನ್ ಬಸ್ ಪ್ರಯೋಗವು ಇಡೀ ದೇಶದಲ್ಲಿಯೇ ಒಂದು ವಿನೂತನ ಯತ್ನವಾಗಿದೆ. ಇದನ್ನು ಸಾಕಾರಗೊಳಿಸುವಲ್ಲಿ ಶ್ರಮಿಸಿದ ಫೌಂಡೇಶನ್ ಇಂಡಿಯಾ ಸಂಸ್ಥೆಯ ಸಂಜಯ್ ಗುಪ್ತ ಅವರಿಗೆ ಸವದಿಯವರು ಕೃತಜ್ಞತೆ ಸಲ್ಲಿಸಿದ್ದಾರೆ.
ಇದನ್ನೂ ಓದಿ : ಆಯಸ್ಕಾಂತೀಯ ವಲಯಗಳಲ್ಲಿ ಸಂಚರಿಸುತ್ತವೆ ಶಾರ್ಕ್ ಮೀನುಗಳು..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.