ಕೋವಿಡ್ ನಿಯಂತ್ರಿಸುವಲ್ಲಿ ವಿಫಲ : ಪಿಎಂ – ಸಿಎಂ ರಾಜೀನಾಮೆಗೆ ರಾಮಲಿಂಗಾರೆಡ್ಡಿ ಒತ್ತಾಯ


Team Udayavani, May 11, 2021, 6:47 PM IST

ಕೋವಿಡ್ ನಿಯಂತ್ರಿಸುವಲ್ಲಿ ವಿಫಲ : ಪಿಎಂ – ಸಿಎಂ ರಾಜೀನಾಮೆಗೆ ರಾಮಲಿಂಗಾರೆಡ್ಡಿ ಒತ್ತಾಯ

ಚಿಕ್ಕಬಳ್ಳಾಪುರ : ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿದ್ದು ಜನರ ಆರೋಗ್ಯದ ದೃಷ್ಠಿಯಿಂದ ಸುಪ್ರೀಂಕೋರ್ಟ್ ಸಮಿತಿ ರಚಿಸಿ ಪರಿಸ್ಥಿತಿಯನ್ನು ನಿರ್ವಹಣೆ ಮಾಡುತ್ತಿದೆ ಹೀಗಾಗಿ ಪ್ರಧಾನಮಂತ್ರಿ ನರೇಂದ್ರ ಮತ್ತು ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರ ನಡೆಸಲು ಲಾಯಕ್‍ಯಿಲ್ಲ ಎಂಬುದು ಸಾಬೀತು ಆಗಿದೆ ಕೂಡಲೇ ಇವರಿಬ್ಬರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿ ಅಧಿಕಾರದಿಂದ ತೊಲಗಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಒತ್ತಾಯಿಸಿದರು.

ನಗರದಲ್ಲಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ತುರ್ತು ವಾಹನಕ್ಕೆ ಚಾಲನೆ ನೀಡಿ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ವಿದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಹಾಗೂ ತಜ್ಞರ ಸೂಚನೆಯನ್ನು ಕಡೆಗಣಿಸಿದ್ದರಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿ ಜನ ಸಂಕಷ್ಟವನ್ನು ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆಯೆಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಹೈಕೋಟ್ ಹಾಗೂ ಸುಪ್ರೀಂಕೋಟ್ ಎರಡು ಸರ್ಕಾರಗಳಿಗೆ ಛೀಮಾರಿ ಹಾಕಿದೆ ಸುಪ್ರೀಂಕೋರ್ಟ್ 12 ಜನರನ್ನು ಒಳಗೊಂಡಂತೆ ಸಮಿತಿ ರಚಿಸಿ ಕೊರೊನಾ ಸೋಂಕು ನಿಯಂತ್ರಿಸಲು ಸರ್ಕಾರ ಕೈಗೊಳ್ಳುತ್ತಿರುವುದು ಕ್ರಮಗಳ ಕುರಿತು ಮಾನಿಟರಿಂಗ್ ಮಾಡುತ್ತಿದೆಯೆಂದರೇ ಸರ್ಕಾರಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲವೆಂದು ಗೊತ್ತಾಗಿದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್-ವೆಂಟಿಲೇಟರ್,ಆಕ್ಸಿಜೆನ್ಸ ಸಿಗುತ್ತಿಲ್ಲ ಇದರ ಜೊತೆಗೆ ಸ್ಮಶಾನದಲ್ಲಿ ಜಾಗವೂ ಸಹ ಸಿಗುತ್ತಿಲ್ಲ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಹೀಗಾಗಿ ಪ್ರಧಾನಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ನೈತಿಕ ಹೊಣೆಹೊತ್ತು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ :ರಸ್ತೆ ಮಧ್ಯ ಉರುಳಿ ಬಿದ್ದ ಪಿಕ್ಅಪ್ ವಾಹನವನ್ನು ಎಳೆದು ನಿಲ್ಲಿಸಿದ ಸ್ಥಳೀಯ ಆಫ್ ರೋಡರ್ ಟೀಮ್

ಮಹಾರಾಷ್ಟ್ರ-ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಎರಡನೇ ಅಲೆ ಬಂದಿತ್ತು ಅದನ್ನು ನೋಡಿ ಆದರೂ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡು ಕಲಿಯಬೇಕಾಗಿತ್ತು ಆದರೇ ಮಾಡಿಲ್ಲ ರಾಜ್ಯದಲ್ಲಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹಾಸಿಗಳು,ವೆಂಟಿಲೇಟರ್,ಆಕ್ಸಿಜೆನ್ ಇಲ್ಲದೇ ಜನ ಸಾಯುತ್ತಿದ್ದಾರೆ ಸರ್ಕಾರದ ಅಸ್ತಿತ್ವದ ಕುರಿತು ಸಾರ್ವತ್ರಿಕ ಪ್ರಶ್ನೆ ಉದ್ಬವವಾಗಿದೆ ಎಂದ ಅವರು ಸರ್ಕಾರದ ನಿರ್ಲಪ್ತ ಧೋರಣೆಯಿಂದ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿದೆ ಈ ಸರ್ಕಾರಗಳಿಗೆ ಬಡವರು-ಕೂಲಿ ಕಾರ್ಮಿಕರ ಬಗ್ಗೆ ಕನಿಕರವಿಲ್ಲ,ಕಾಳಜಿಯಿಲ್ಲ ಏನಿದ್ದರು ಕಾಂಗ್ರೆಸ್ ಪಕ್ಷ ಹಾಗೆ ಆ ಪಕ್ಷ ಹೀಗೆಯೆಂದು ಹೇಳಿ ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬರುತ್ತಾರೆ ಇವರು ಅಧಿಕಾರ ನಡೆಸುವುದಕ್ಕೆ ಲಾಯಕ್ ಅಲ್ಲ ನರೇಂದ್ರಮೋದಿ ಇರಬಹುದು ಯಡಿಯೂರಪ್ಪ ಇರಬಹುದು ಒಳ್ಳೆಯ ಆಡಳಿತಗಾರರು ಅಲ್ಲ ಇವರೇನಿದ್ದರು ವಿರೋಧ ಪಕ್ಷದಲ್ಲಿರುವುದಕ್ಕೆ ಲಾಯಕ್ ಎಂದು ಲೇವಡಿ ಮಾಡಿದರು.

ಅಪಪ್ರಚಾರ ಮಾಡುವುದರಲ್ಲಿ ಬಿಜೆಪಿ ನಾಯಕರು ನಿಸ್ಸೀಂರು ಒಂದು ಸುಳ್ಳನ್ನು ನೂರು ಬಾರಿ ಹೇಳಿ ದಿಕ್ಕುತಪ್ಪಿಸುವ ರಾಜಕಾರಣ ಮಾಡುತ್ತಾರೆ ಮುಖ್ಯಮಂತ್ರಿಗಳ ಜೊತೆಗೆ 35 ಜನ ಮಂತ್ರಿ ಇದ್ದಾರೆ ಎಲ್ಲರಿಗೂ ಜವಾಬ್ದಾರಿಯಿದೆ ಇವರಿಗೆ ಜವಾಬ್ದಾರಿ ನಿರ್ವಹಿಸುದಕ್ಕೆ ಆಗುತ್ತಿಲ್ಲ ಯುದ್ದೋಪಾದಿಯಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ಕೆಲಸವನ್ನು ಮಾಡಬೇಕಿತ್ತು ಯಾವುದೇ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ್ದಾರೆ ಇದೇ ಇವರ ಸಾಧನೆಯೆಂದು ಕಿಡಿಕಾರಿದರು.

ರೆಮಿಡಿಸಿವಿಯರ್ ಕಾಳಸಂತೆಯಲ್ಲಿ ಮಾರಾಟ: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ರೆಮಿಡಿಸಿವಿಯರ್ ಖರೀದಿಸಿದೆ ಆದರೇ ಅದು ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆಯೆಂದರೆ ಇದಕ್ಕೆ ಯಾರು ಹೊಣೆಯೆಂದು ಪ್ರಶ್ನಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು ಸರ್ಕಾರಗಳು ಮಾಡಿದ ತಪ್ಪುಗಳಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಬಿಜೆಪಿ ಪಕ್ಷ ಸರ್ಕಾರವೇ ಕೊರೊನಾ ಸೋಂಕು ಹರಡುತ್ತಿರುವುದಕ್ಕೆ ಜನರ ಸಾವಿಗೆ ನೇರ ಹೊಣೆಯೆಂದು ಆರೋಪಿಸಿದರು.

ಜನ ಕಷ್ಟವನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ಕೆಲಸ ಮಾಡಬೇಕು ಆದರೇ ಬಿಜೆಪಿ ಸರ್ಕಾರಕ್ಕೆ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡುವ ಉತ್ಸಾಹವಿಲ್ಲ ದೂರ ಮತ್ತು ಮುಂದಾಲೋಚನೆ ಇಲ್ಲ ಎಂದ ಅವರು ಕಳೆದ ವರ್ಷ ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಆಹಾರ ಸಾಮಾಗ್ರಿಗಳನ್ನು ಹಾಗೂ ಆರೋಗ್ಯ ಕಿಟ್‍ಗಳನ್ನು ಕಾಂಗ್ರೆಸ್ ಪಕ್ಷದಿಂದ ಹಂಚಿಕೆ ಮಾಡಿದ್ದೇವೆ ಜನರ ಆರೋಗ್ಯವನ್ನು ಕಾಪಾಡಲು ತಪಾಸಣಾ ಶಿಬಿರಗಳನ್ನು ಆಯೋಜಿಸಿದ್ದೇವೆ ಜನರ ಕಷ್ಟಗಳಿಗೆ ಸ್ಪಂದಿಸಿ ಕಾಂಗ್ರೆಸ್ ಪಕ್ಷ ಕೆಲಸ ಮಾಡುತ್ತಿದೆ ಯುವ ಕಾಂಗ್ರೆಸ್ ಸಮಿತಿಯಿಂದ ತುರ್ತು ವಾಹನಗಳ ಸೇವೆಯನ್ನು ಆರಂಭಿಸಿದ್ದೇವೆ ಜನರು ಈ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೇಶವರೆಡ್ಡಿ,ಚಿಕ್ಕಬಳ್ಳಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ,ಪ್ರಧಾನ ಕಾರ್ಯದರ್ಶಿ ಸೂರಿ,ಮುಖಂಡರಾದ ಮೋಹನ್ ಅಡಗಲ್ ಶ್ರೀಧರ್,ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮುದಾಸೀರ್ ಪಾಷ ಮತ್ತಿತರರು ಉಪಸ್ಥಿತರಿದ್ದರು.

ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ತುರ್ತು ವಾಹನ ಆರಂಭಿಸುವ ಸೇವೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ, ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ,ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮೊಹ್ಮದ್ ಹಾರೀಸ್ ನಲ್ಪಾಡ್,ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೇಶವರೆಡ್ಡಿ,ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮುದಾಸೀರ್,ಜಿಪಂ ಮಾಜಿ ಅಧ್ಯಕ್ಷ ಕೃಷ್ಣಪ್ಪ,ಪಟ್ರೇನಹಳ್ಳಿ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.