ಕರ್ಫ್ಯೂ ಬಳಿಕ ಪದವಿ ಫಲಿತಾಂಶ ಪ್ರಕಟ

Team Udayavani, May 11, 2021, 8:10 PM IST

11-10

ದಾವಣಗೆರೆ: ಲಾಕ್‌ಡೌನ್‌ ಮುಗಿದ ನಂತರ ಸ್ನಾತಕ ಪದವಿಯ ಒಂದು, ಮೂರು ಮತ್ತು ಐದನೇ ಸೆಮಿಸ್ಟರ್‌ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ದಾವಣಗೆರೆ ವಿಶ್ವವಿದ್ಯಾಲಯ ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ.

ಸೋಮವಾರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜೊತೆ ಸೋಮವಾರ ನೇರ ಫೋನ್‌-ಇನ್‌- ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರೀಕ್ಷಾ ಫಲಿತಾಂಶದ ಬಗ್ಗೆ ಎಲ್ಲ ವಿದ್ಯಾರ್ಥಿಗಳಲ್ಲಿ ಕುತೂಹಲ ಇದೆ. ಕೊರೊನಾ ಕಾರಣಕ್ಕಾಗಿ ಫಲಿತಾಂಶ ಪ್ರಕಟಣೆಗೆ ಸಿದ್ಧತೆ ಸ್ಥಗಿತಗೊಳಿಸಲಾಗಿದೆ. ಕಾಲೇಜು ಆರಂಭಕ್ಕೆ ಸರ್ಕಾರ ಅನುಮತಿ ನೀಡುತ್ತಿದ್ದಂತೆಯೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದರು.

ಕೋವಿಡ್‌-19ರ ಕಾರಣಕ್ಕಾಗಿ ಬಿಇಡಿ ಪದವಿಯ ಪಠ್ಯ ಮತ್ತು ಪ್ರಾಯೋಗಿಕ ಪರೀಕ್ಷೆಯೂ ವಿಳಂಬವಾಗಿದೆ. ಎರಡು ವರ್ಷದಲ್ಲಿ ಮುಗಿಯಬೇಕಾಗಿದ್ದ ಪದವಿ ಮೂರು ವರ್ಷವಾಗುತ್ತಿದೆ. ಕೆಲವು ಕಾಲೇಜುಗಳಲ್ಲಿ ಕೋ ಆರ್ಡಿನೇಷನ್‌ ಸಮಿತಿ ಸಭೆಯಾಗಿ ವರದಿ ಬರಲು ತಡವಾದ ಕಾರಣ ಮಾರ್ಚ್‌ ಒಳಗೆ ಪರೀಕ್ಷೆ ನಡೆಸಲು ಸಾಧ್ಯವಾಗಲಿಲ್ಲ. ವೇಳಾಪಟ್ಟಿ ಸಿದ್ಧಪಡಿಸಿ ಪರೀಕ್ಷೆಗೆ ಅಣಿಯಾಗುತ್ತಿದ್ದಂತೆ ಕೋವಿಡ್‌-19ನಿಂದಾಗಿ ರಜೆ ನೀಡಲಾಗಿದೆ. ಲಾಕ್‌ಡೌನ್‌ ನಂತರ ಆದ್ಯತೆ ಮೇರೆಗೆ ಪರೀಕ್ಷೆ ನಡೆಸಲಾಗುವುದು ಎಂದರು.

ಸದ್ಯಕ್ಕೆ ಯಾವುದೇ ತರಗತಿಗೂ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ತೇರ್ಗಡೆ ಮಾಡುವ ಉದ್ದೇಶ ವಿಶ್ವವಿದ್ಯಾಲಯಕ್ಕೆ ಇಲ್ಲ. ಅಲ್ಲದೆ ಮುಂದಿನ ತರಗತಿಗಳಿಗೆ ಮೇ 12ರಿಂದ ಆನ್‌ಲೈನ್‌ನಲ್ಲಿ ಪಾಠ ಆರಂಭಿಸುವಂತೆ ಎಲ್ಲ ಕಾಲೇಜು ಪ್ರಾಧ್ಯಾಪಕರಿಗೂ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿಯದಂತೆ ಗಮನ ನೀಡಲು ಆದ್ಯತೆ ನೀಡುವಂತೆಯೂ ತಿಳಿಸಲಾಗಿದೆ ಎಂದು ಹೇಳಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆಟ್‌ವರ್ಕ್‌ ಸಿಗದೆ ಆನ್‌ಲೈನ್‌ ತರಗತಿಗಳಿಂದ ವಂಚಿತರಾಗುವ ಸಾಧ್ಯತೆಗಳಿವೆ. ಹಾಗಾಗಿ ಪರ್ಯಾಯ ವ್ಯವಸ್ಥೆಗೂ ಆದ್ಯತೆ ನೀಡಬೇಕು. ಕೆಲವು ಕಾಲೇಜುಗಳಲ್ಲಿ ಆನ್‌ ಲೈನ್‌ನಲ್ಲೂ ಪಾಠ ನಡೆಸುತ್ತಿಲ್ಲ. ಕಳೆದ ವರ್ಷ ಶೇ. 50ರಷ್ಟೂ ಪಾಠವನ್ನು ಹೇಳದೆ ಪರೀಕ್ಷೆ ನಡೆಸಲಾಯಿತು. ಅದರಿಂದ ಅಭ್ಯಾಸ್ಕಕೆ ಅಡ್ಡಿ ಆಯಿತು ಎಂದು ಕೆಲ ವಿದ್ಯಾರ್ಥಿಗಳು ದೂರಿದರು.

ವಿದ್ಯಾರ್ಥಿಗಳ ಆತಂಕಕ್ಕೆ ಸ್ಪಂದಿಸಿದ ಕುಲಪತಿಗಳು, ಕಳೆದ ಬಾರಿಯೂ ಕಡ್ಡಾಯವಾಗಿ ಪಾಠ ಮಾಡುವಂತೆ ಸೂಚಿಸಲಾಗಿತ್ತು. ಆಗಿರುವ ಲೋಪದ ಬಗ್ಗೆ ವಿಚಾರಣೆ ನಡೆಸಲಾಗುವುದು. ಈ ಬಾರಿ ಅದು ಮುಂದುವರಿಯಲು ಅವಕಾಶ ನೀಡುವುದಿಲ್ಲ. ವಿದ್ಯಾರ್ಥಿಗಳ ಹಿತಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ. ಆನ್‌ಲೈನ್‌ ಅಲ್ಲದೆ ಲಾಕ್‌ ಡೌನ್‌ ನಂತರ ಭೌತಿಕವಾಗಿಯೂ ಪಾಠ ಮಾಡಿ ವಿದ್ಯಾರ್ಥಿಗಳಿಗೆ ಅರ್ಥೈಸುವಂತೆ ಮಾಡಲಾಗುವುದು. ಜೊತೆಗೆ ಪಠ್ಯಪೂರಕ ಅಧ್ಯಯನ ಸಾಮಗ್ರಿಗಳನ್ನು ವಿದ್ಯಾರ್ಥಿಗಳ ಪೋರ್ಟಲ್‌ಗೆ ಒದಗಿಸಲು ಸೂಚಿಸಲಾಗುವುದು ಎಂದು ತಿಳಿಸಿದರು.

ಆಡಳಿತ ಕುಲಸಚಿವೆ ಪ್ರೊ| ಗಾಯತ್ರಿ ದೇವರಾಜ್‌, ಪರೀಕ್ಷಾಂಗ ಕುಲಸಚಿವೆ ಪ್ರೊ| ಎಚ್‌.ಎಸ್‌. ಅನಿತಾ ಇದ್ದರು.

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.