ಮರಣ ಮೃದಂಗ: 24 ಗಂಟೆಯಲ್ಲಿ ದೇಶದಲ್ಲಿ 4025 ಮಂದಿ ಕೋವಿಡ್ ಸೋಂಕಿತರು ಸಾವು!
Team Udayavani, May 12, 2021, 10:42 AM IST
ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಭಾರೀ ಮಟ್ಟದ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ4025 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆತಂಕಕ್ಕೆ ಕಾರಣವಾಗಿದೆ.
ಇದೇ ಸಮಯದಲ್ಲಿ 3,48,421 ಹೊಸ ಕೋವಿಡ್ ಸೋಂಕು ಪ್ರಕರಣಗಳು ದೃಢವಾಗಿದೆ. ಮೇ.5ರಿಂದ ಇದುವರೆಗೆ ದೇಶದಲ್ಲಿ 30 ಲಕ್ಷದವರೆಗೆ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇಂದಿನ 4025 ಮಂದಿ ಸಾವಿನಿಂದ ಸಾವಿನ ಸಂಖ್ಯೆಯೂ 2.5 ಲಕ್ಷ ದಾಟಿದೆ.
ಇದನ್ನೂ ಓದಿ:ಚಿಕ್ಕಮಗಳೂರು : ಶೃಂಗೇರಿ ಬಿಇಓ ನಾಗರಾಜ್ ಕೋವಿಡ್ ಸೋಂಕಿಗೆ ಬಲಿ
ಸದ್ಯ ದೇಶದಲ್ಲಿ 37,04,099 ಸಕ್ರಿಯ ಸೋಂಕು ಪ್ರಕರಣಗಳಿವೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 2.33 ಕೋಟಿ ತಲುಪಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 19,83,804 ಸ್ಯಾಂಪಲ್ ಪರೀಕ್ಷೆ ಮಾಡಲಾಗಿತ್ತು. ಇದರಲ್ಲಿ3,48,421 ಪಾಸಿಟಿವ್ ಕಂಡು ಬಂದಿದೆ.
ಭಾರತದ ರೂಪಾಂತರಿ ಕೋವಿಡ್ (Covid-19 – B.1.617 ) ಸೋಂಕು 44 ದೇಶಗಳಲ್ಲಿ ಕಾಣಿಸಿಕೊಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಈ ರೂಪಾಂತರಿ ಕಳವಳಕಾರಿ ಎಂದು ಅದು ಹೇಳಿದೆ. ಈ ರೂಪಾಂತರಿ ಸೋಂಕು ಕಳೆದ ಅಕ್ಟೋಬರ್ ನಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.