ಹಸೆಮಣೆ ಏರಬೇಕಿದ್ದ ಯುವತಿ ಕೋವಿಡ್‌ಗೆ ಬಲಿ
Team Udayavani, May 12, 2021, 1:16 PM IST
ಮುದ್ದೇಬಿಹಾಳ: ಮೇ 23ರಂದು ಹಸೆಮಣೆ ಏರಿ ವೈವಾಹಿಕ ಜೀವನಕ್ಕೆ ಪದಾರ್ಪಣೆ ಮಾಡಬೇಕಿದ್ದ ಪಟ್ಟಣದ ಯುವತಿ ಶೃತಿ ಐಹೊಳ್ಳಿ (24) ಮಂಗಳವಾರ ಕೋವಿಡ್ ಮಹಾಮಾರಿಗೆ ಬಲಿಯಾದರು.
ಇಲ್ಲಿನ ವಿಬಿಸಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿರುವ ಸುಭಾಷಚಂದ್ರಐಹೊಳ್ಳಿಯವರ ಮೊದಲಪುತ್ರಿಯಾಗಿದ್ದ ಇವರು ಬಿಎಸ್ಸಿ, ಬಿಇಡಿ ಪದವೀಧರೆಯಾಗಿ ಗಣಿತ ವಿಷಯದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದರು. ಇಲ್ಲಿನ ಕೆಬಿಎಂಪಿ ಶಾಲೆಯಲ್ಲಿ 2018ರಿಂದ 2020ರವರೆಗೆಎರಡು ವರ್ಷಗಳ ಕಾಲ ಅತಿಥಿ ಶಿಕ್ಷಕಿಯಾಗಿದ್ದರು.
ಪಟ್ಟಣದಲ್ಲಿ ಹೆಚ್ಚುತ್ತಿರುವ ಕೋವಿಡ್ ಎರಡನೇಅಲೆಯಿಂದ ರಕ್ಷಿಸಿಕೊಳ್ಳಲು ಸ್ವಗ್ರಾಮಕ್ಕೆ ಹೋಗಿ ವಾಸವಾಗಿದ್ದರು. ಏಕಾಏಕಿ ಕೋವಿಡ್ ಕಾಣಿಸಿಕೊಂಡುಚಿಕಿತ್ಸೆ ಫಲಿಸದೆ ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ.
ಮದುವೆಗೆ ಎಲ್ಲ ತಯಾರಿ ಮಾಡಿಕೊಂಡು ಬಟ್ಟೆ, ಬಂಗಾರ, ಭಾಂಡೆ ಎಲ್ಲವನ್ನೂ ಖರೀದಿಸಿ ಮಗಳ ಮದುವೆಯ ಸಂಭ್ರಮದಲ್ಲಿದ್ದ ಕುಟುಂಬದಲ್ಲೀಗಸೂತಕದ ಛಾಯೆ ಮೂಡಿ ಎಲ್ಲರನ್ನೂ ಕಂಗೆಡಿಸಿದೆ. ಮೃತರಿಗೆ ತಂದೆ, ತಾಯಿ, ಸಹೋದರ, ಸಹೋದರಿ, ಅಪಾರ ಬಂಧುಬಳಗ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.