ಜಾಗತಿಕ ಟೆಂಡರ್ ಮೂಲಕ ಲಸಿಕೆ ಖರೀದಿ
Team Udayavani, May 12, 2021, 1:53 PM IST
ಬೆಂಗಳೂರು: ರಾಜ್ಯಕ್ಕೆ ಅಗತ್ಯವಿರುವ 2 ಕೋಟಿಲಸಿಕೆಯನ್ನು ಜಾಗತಿಕ ಟೆಂಡರ್ ಮೂಲಕ ಮುಕ್ತ ಮಾರುಕಟ್ಟೆಯಲ್ಲಿ ಖರೀದಿಗೆ ಕ್ರಮ ತೆಗೆದುಕೊಳ್ಳಲಾಗಿದೆಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಮಂಗಳವಾರ ನಡೆದ ಉನ್ನತಮಟ್ಟದಸಭೆಯ ನಂತರ ಮಾತನಾಡಿ, ಈವರೆಗೂ ಕೇಂದ್ರ ಸರ್ಕಾರಹಂಚಿಕೆ ಮಾಡುತ್ತಿದ್ದ ಲಸಿಕೆಯನ್ನು ಬಿಟ್ಟರೆ ನೇರವಾಗಿಮುಕ್ತ ಮಾರುಕಟ್ಟೆಯಲ್ಲಿ ಟೆಂಡರ್ ಕರೆದು ಖಾಸಗಿಕಂಪನಿಗಳಿಂದ ಖರೀದಿ ಮಾಡಿರಲಿಲ್ಲ. ರಾಜ್ಯಕ್ಕೆಅಗತ್ಯವಿರುವ ಲಸಿಕೆ ಪೂರೈಕೆಗಾಗಿ ಇದೇ ಮೊದಲ ಬಾರಿಗೆಜಾಗತಿಕ ಟೆಂಡರ್ ಕರೆಯಲು ಸೂಚಿಸಲಾಗಿದ್ದು, ಯಾವಕಂಪನಿ ಬೇಕಾದರೂ ಟೆಂಡರ್‌ನಲ್ಲಿ ಭಾಗವಹಿಸಬಹುದು.
ಏಳು ದಿನದ ಒಳಗಾಗಿ ಈ ಪ್ರಕ್ರಿಯೆ ಮುಗಿಸಿ ಟೆಂಡರ್‌ಪಡೆಯುವ ಕಂಪನಿಯು ಲಸಿಕೆಯನ್ನು ಪೂರೈಕೆಆರಂಭಿಸಬೇಕು. ಮೂರು ಕೋಟಿ ಲಸಿಕೆ ಖರೀದಿಗೆಈಗಾಗಲೇ ಬೇಡಿಕೆ ಸಲ್ಲಿಸಲಾಗಿದೆ. ಇದರಲ್ಲಿ 1 ಕೋಟಿಕೋವ್ಯಾಕ್ಸಿನ್, 2 ಕೋಟಿ ಕೋವಿಶೀಲ್ಡ್ ಸೇರಿದೆ ಎಂದರು.ಸೋಂಕಿತರಿಗೆ ಅತ್ಯವಶ್ಯವಾಗಿರುವ ಐವರ್‌ವೆುಕ್ಟಿನ್‌ಮಾತ್ರೆಯನ್ನು 10 ಲಕ್ಷ ಖರೀದಿ ಮಾಡಲಾಗಿದ್ದು, ಮೇ14ರಿಂದ ಪೂರೈಕೆ ಶುರುವಾಗಲಿದೆ. ಇನ್ನೂ 25 ಲಕ್ಷ ಮಾತ್ರೆಖರೀದಿಗೆ ಸೂಚಿಸ ಲಾ ಗಿದೆ.
ಇದು ರಾಜ್ಯದ ಎಲ್ಲಆಸ್ಪತ್ರೆಗಳಲ್ಲೂ ಲಭ್ಯ ಇರಬೇಕು. 35 ಲಕ್ಷ ಜಿಂಕ್ ಟ್ಯಾಬ್ಲೆಟ್‌ಹಾಗೂ ಒಂದು ಕೋಟಿ ಕಾಲ್ಸಿಚಿನ್ ಮಾತ್ರೆಗಳನ್ನೂಕೂಡಲೇ ಖರೀದಿಸಲು ನಿರ್ಧರಿಸಲಾಗಿದೆ ಎಂದುಹೇಳಿದರು.ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಜಾವೇದ್ ಅಖ್ತರ್, ಔಷಧಿ ಖರೀದಿ ಉಸ್ತುವಾರಿ ಅಂಜುಂಪರ್ವೇಜ್, ರಾಜ್ಯ ಔಷಧ ಸರಬರಾಜು ಕಂಪನಿಯವ್ಯವಸ್ಥಾಪಕ ನಿರ್ದೇಶಕಿ ಲತಾ ಕುಮಾರಿ, ಆರೋಗ್ಯಇಲಾಖೆ ನಿರ್ದೇಶಕ ಓಂ ಪ್ರಕಾಶ್ ಪಾಟೀಲ್ ಸಭೆಯಲ್ಲಿಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.