ಶಾಸಕರು ಲಸಿಕಾ ಕೇಂದ್ರದತ್ತ ದೌಡಾಯಿಸಿ ಜನರ ಸಮಸ್ಯೆಯನ್ನು ಆಲಿಸಬೇಕು : ರಮೇಶ್ ಕಾಂಚನ್


Team Udayavani, May 12, 2021, 3:30 PM IST

ಶಾಸಕರು ಲಸಿಕಾ ಕೇಂದ್ರದತ್ತ ದೌಡಾಯಿಸಿ ಜನರ ಸಮಸ್ಯೆಯನ್ನು ಆಲಿಸಬೇಕು : ರಮೇಶ್ ಕಾಂಚನ್

ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ  ರಘುಪತಿ ಭಟ್ ರವರೆ  ಜನ ಇವತ್ತು ಕೋವಿಡ್ ಎರಡನೇ ಅಲೆಯಿಂದ ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಕ್ಷೇತ್ರದ ಜನರು ನಿಮ್ಮ ಮೇಲೆ ಬಹಳಷ್ಟು ನಂಬಿಕೆ ಇಟ್ಟು ಗೆಲ್ಲಿಸಿದ್ದಾರೆ. ಈ ಸಮಯದಲ್ಲಿ ಜನರ ಸಮಸ್ಯೆಯನ್ನು ಆಲಿಸಿ ಎಂದು ನಗರಸಭಾ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿ ಆಸ್ಪತ್ರೆಗಳು ಈಗಾಗಲೇ ಕೋವಿಡ್ ರೋಗಿಗಳಿಂದ ತುಂಬಿತುಳುಕಿದ್ದು, ತೀವ್ರ ಅಸ್ವಸ್ಥ ಗೊಂಡವರಿಗೆ ವೆಂಟಿಲೇಟರ್ ಐಸಿಯು ದೊರೆಯುತ್ತಿಲ್ಲ. ನಿಮ್ಮ ಆಡಳಿತದಲ್ಲಿ ಜನರ ಪ್ರಾಣದ ಗತಿ ದೇವರೇ ಗತಿ ಎಂಬಂತೆ ಆಗಿದೆ ಎಂದು ಹೇಳಿದರು.

ಜನರು ಇಂತಹ ಸಂಕಷ್ಟಕರ ಪರಿಸ್ಥಿತಿಯಲ್ಲಿ ಬಹಳಷ್ಟು ಭಯಭೀತರಾಗಿದ್ದು ಕೋವಿಡ್  ಲಸಿಕೆ ಪಡೆಯಲು ಹಾತೊರೆಯುತಿದ್ದಾರೆ. ಆದರೆ ಲಸಿಕಾ ಕೇಂದ್ರದಲ್ಲಿ ಸರಿಯಾಗಿ ಲಸಿಕೆ ದೊರೆಯುತ್ತಿಲ್ಲ. 45ವರುಷ ಮೇಲ್ಪಟ್ಟವರು ಮೊದಲ ಡೋಸ್ ಪಡೆದಿದ್ದು ಅವರಿಗೆ ಎರಡನೇ ಡೋಸ್ ಪಡೆಯಲು ಸಾಧ್ಯವಾಗುತಿಲ್ಲ. ಇದರಲ್ಲಿ ಹೆಚ್ಚಿನವರು ಹಿರಿಯ ನಾಗರೀಕರಾಗಿದ್ದು ಹಲವು ಬಾರಿ ಲಸಿಕಾ ಕೇಂದ್ರಕ್ಕೆ ಬಂದು ಕಾದು ಕಾದು ಸುಸ್ತಾಗಿ ಹಿಂತಿರುಗಿರುತ್ತಿದ್ದಾರೆ ಎಂದರು.

ಇದನ್ನೂ ಓದಿ :ಅಮ್ಮನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ಯೂನಿವರ್ಸ್ ಬಾಸ್..!

ಮೊದಲು ಡೋಸ್ ಕೋವಾಕ್ಸಿನ್ ಪಡೆದವರಿಗೆ ಎರಡನೇ ಡೋಸ್ ಸಿಗುತ್ತಿಲ್ಲ. ಈಗ ಕೇವಲ ಕೋವಿ ಶೀಲ್ಡ್  ದೊರೆಯುತ್ತಿದೆ. ಹಾಗು ಬಹಳಷ್ಟು ಜನರ ವ್ಯಾಕ್ಸಿನ್ ಪಡೆಯುವ ಅವಧಿಯು ಮುಗುಯುತ್ತಿದೆ. ಲಸಿಕೆ ಪಡೆಯಲು ಸಂಪೂರ್ಣ ಆನ್ಲೈನ್ ವ್ಯವಸ್ಥೆ ಇದ್ದು ಇದರಬಗ್ಗೆ ಜನರು ಪರದಾಡುವಂತೆ ಆಗಿದೆ. 18ರಿಂದ 44ವರ್ಷದವರಿಗು ವ್ಯಾಕ್ಸಿನೇಷನ್ ಆರಂಭ ವಾಗಿದ್ದು ಆನ್ಲೈನ್ ಬುಕ್ಕಿಂಗ್ ಬಹಳಷ್ಟು ಗೊಂದಲ ಇದೆ. ವೆಬ್ ಸೈಟ್ ನಲ್ಲಿ ಲಭ್ಯ ಆಗುವುದಕ್ಕಿಂತ ಮುಂಚೆನೇ ವ್ಯಾಕ್ಸೀನ್ ಬುಕ್ ಆಗಿರುತ್ತದೆ. ವೈಬ್ ಸೈಟ್ ನಲ್ಲಿ ಸ್ಲಾಟ್ ಗಳು ಬುಕ್ ಎಂದು ತೋರಿಸಿದ್ದು ಅರೋಗ್ಯ ಸೇತು ಆ್ಯಪ್ ನಲ್ಲಿ ಲಭ್ಯ ಎಂದು ತೋರಿಸುತ್ತಿದೆ ಈ ಅವ್ಯವಸ್ಥೆಗೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಲಸಿಕಾ ಕೇಂದ್ರದಲ್ಲಿ ಸಾಮಾನ್ಯ ಜನರು ಕ್ಯೂ ನಲ್ಲಿ ನಿಂತು  ಟೋಕನ್ ತೆಗೆದುಕೊಂಡು ಕಾಯುತಿದ್ದರೂ  ಪ್ರಭಾವಿ ವ್ಯಕ್ತಿಗಳು ಯಾವುದೇ ಟೋಕನ್ ಇಲ್ಲದೆ ರಾಜಕೀಯ ಪ್ರಭಾವ ಬಳಸಿ ವ್ಯಾಕ್ಸೀನ್ ಪಡೆಯುತ್ತಿದ್ದಾರೆ ಎಂದರು.

ಒಟ್ಟಾರೆಯಾಗಿ ವ್ಯಾಕ್ಸಿನೇಷನ್ ಸಿಸ್ಟಮ್ ಗೊಂದಲದ ಗೂಡಾಗಿದ್ದು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ನಿಮಗೆ ಬಹಳಷ್ಟು ಜವಾಬ್ದಾರಿ ಇದ್ದು ತಾವು ತಕ್ಷಣ ತಮ್ಮ ಜವಾಬ್ದಾರಿಯನ್ನು ಅರಿತು ಹಡಿಲು ಭೂಮಿ ಯೋಜನೆಯನ್ನು ಸ್ವಲ್ಪ ಸಮಯ ಮುಂದೂಡಿ ಲಸಿಕಾ ಕೇಂದ್ರದತ್ತ ದೌಡಾಯಿಸಿ ಜನರ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ಕಾರ್ಯಪ್ರವೃತ್ತರಾಗಬೇಕಾಗಿ ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.