ತೌಕ್ತೇ ಚಂಡಮಾರುತ ಆತಂಕ: ಮೀನುಗಾರಿಕೆಗೆ ತೆರಳಿರುವ ಮೀನುಗಾರರಿಗೆ ಮರಳಲು ಸೂಚನೆ
Team Udayavani, May 12, 2021, 4:31 PM IST
ಪಣಂಬೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ಏಳುವ ಸಾಧ್ಯತೆಗಳಿವೆ. ಈ ಚಂಡಮಾರುತಕ್ಕೆ “ತೌಕ್ತೇ’ ಎಂದು ಹೆಸರಿಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.
ಮೇ.16ರ ಸುಮಾರಿಗೆ ಪೂರ್ವ ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯಾಗಿ ತೀವೃವಾಗಲಿದೆ. ಈ ಎಚ್ಚರಿಕೆ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರಿಕೆ ದೋಣಿಗಳು ಮೀನುಗಾರಿಕೆಗೆ ಇಳಿಯದಂತೆ ಕೋಸ್ಟ್ ಗಾರ್ಡ್ ಕರ್ನಾಟಕ ಸೂಚನೆ ನೀಡಿದೆ.
ಗಸ್ತು ತಿರುಗುತ್ತಿದ್ದ ಐಸಿಜಿ ಹಡಗುಗಳು ಮತ್ತು ಸಿಜಿ ಡಾರ್ನಿಯರ್ ವಿಮಾನಗಳು ವಿಎಚ್ಎಫ್ ಚಾನೆಲ್ನಲ್ಲಿ ಸಮುದ್ರದಲ್ಲಿರುವ ಮೀನುಗಾರರಿಗೆ ಹವಾಮಾನ ಎಚ್ಚರಿಕೆ ನೀಡಿ ಹತ್ತಿರದ ತೀರಕ್ಕೆ ಮರಳುತ್ತಿವೆ.
ಇದನ್ನೂ ಓದಿ:ರಾಜಕೀಯ ಎಂಟ್ರಿ ಬಗ್ಗೆ ನಟ ಸೋನು ಸೂದ್ ಏನು ಹೇಳಿದ್ರು ಗೊತ್ತಾ ?
ತೌಕ್ತೇ ಚಂಡಮಾರುತದಿಂದ ಕರ್ನಾಟಕದ ಕರಾವಳಿ, ಕೇರಳ, ತಮಿಳುನಾಡು, ಲಕ್ಷದ್ವೀಪಗಳಲ್ಲಿ 16ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಮೇ 20ರಂದು ಗುಜರಾತ್ನ ಕಛ್ ಅಥವಾ ಆ ರಾಜ್ಯದ ಉತ್ತರ ಭಾಗ ವನ್ನು ಹಾದು ಒಮಾನ್ನತ್ತ ಸಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆತಿಳಿಸಿದೆ. ಪಾಕ್ನ ದಕ್ಷಿಣ ಭಾಗದಲ್ಲೂ ಚಂಡಮಾರುತದ ಪ್ರಕೋಪ ಕಾಣಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.