ಸುಮ್ ಸುಮ್ನೆ ಕೋವಿಡ್ ಚೆಕ್ ಮಾಡಿದ್ರೆ ಸರಿ ಇರಲ್ಲ, ನನಗೆ ಡಿಸಿ ಗೊತ್ತು: ವ್ಯಕ್ತಿಯಿಂದ ರಂಪಾಟ
Team Udayavani, May 14, 2021, 10:49 AM IST
ಕೊಡಗು: ರಾಜ್ಯಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ದಿನ ನಿತ್ಯ ಏರುತ್ತಲೇ ಇದೆ. ಈ ಸಂದರ್ಭದಲ್ಲಿ ಆರೋಗ್ಯ ಸಿಬ್ಬಂದಿ ತಮ್ಮ ಪ್ರಾಣವನ್ನು ಒತ್ತೆ ಇಟ್ಟು ಕೆಲಸ ಮಾಡುತ್ತಿದ್ದಾರೆ, ಆದ್ರೆ ಇಲ್ಲೊಬ್ಬ ವ್ಯಕ್ತಿ ನರ್ಸ್ ಮೇಲೆಯೇ ಹರಿಹಾಯ್ದಿದ್ದಾನೆ. ವ್ಯಕ್ತಿಯೋರ್ವ ಸ್ವ್ಯಾಬ್ ಕಲಕ್ಷನ್ ಗೆ ಬಂದ ಆರೋಗ್ಯ ಸಿಬ್ಬಂದಿ ಎದುರು ನಾನು ಸ್ವಾಬ್ ಟೆಸ್ಟ್ ಕೊಡುವುದಿಲ್ಲ ಅಂತ ರಂಪಾಟ ಮಾಡಿದ್ದಾನೆ. ಈ ಘಟನೆಯು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ ನಡೆದಿದೆ.
ಕಾಂಟ್ರ್ಯಾಕ್ಟರ್ ರವಿ ಎಂಬುವ ವ್ಯಕ್ತಿ ಮಾದಾಪುರ ಆರೋಗ್ಯ ಕೇಂದ್ರದ ನರ್ಸ್ ಗ್ರೀಷ್ಮಾಗೆ ಬಾಯಿಗೆ ಬಂದಂತೆ ಮಾತನಾಡಿದ್ದಾನೆ. ಅಷ್ಟೇ ಅಲ್ಲದೇ ಅಲ್ಲಿದ್ದ ಎಲ್ಲಾ ಆರೋಗ್ಯ ಸಿಬ್ಬಂದಿಯವರೊಂದಿಗೆ ವಾಗ್ವಾದ ನಡೆಸಿದ್ದಾನೆ. ನಾನ್ ಯಾರು ಗೊತ್ತಾ..? ನನಗೆ ಡಿಸಿ ಗೊತ್ತು, ಎಸ್ಪಿ ಗೊತ್ತು ಅಂತ ನರ್ಸ್ಗೆ ಅವಾಜ್ ಹಾಕಿದ್ದಾನೆ.
ಹೊಟ್ಟೆ ನೋವು ಅಂತ ಬಂದವರಿಗೆ ನೀವು ಪಾಸಿಟಿವ್ ವರದಿ ನೀಡುತ್ತೀರಿ. ನನಗೆ ಪ್ರಾಬ್ಲಮ್ ಇದ್ದರೆ ನಾನೇ ಬಂದು ನಿಮಗೆ ತಿಳಿಸುತ್ತೇನೆ. ಆಶಾ ಕಾರ್ಯಕರ್ತೆಯರು ಹೇಳಿದರು ಅಂತ ನಮ್ಮ ಮನೆ ಬಳಿ ಬಂದರೆ ಸರಿ ಇರುವುದಿಲ್ಲ ಎಂದು ಜೋರು ಧ್ವನಿಯಲ್ಲಿ ಮಾತನಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.