ಜನರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ : ಶಾಸಕಿ ರೂಪಾಲಿ ಎಸ್.ನಾಯ್ಕ
Team Udayavani, May 14, 2021, 7:03 PM IST
ಕಾರವಾರ: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಪ್ರಕರಣಗಳ ನಿಯಂತ್ರಣಕ್ಕೆ ತರಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಶಾಸಕರಾದ ರೂಪಾಲಿ ಎಸ್.ನಾಯ್ಕ ಒತ್ತಾಯಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಇತರೆಡೆಗಳಂತೆ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲೂ ಕೋವಿಡ್-19 ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಪಟ್ಟಣ ಪ್ರದೇಶದಲ್ಲಿ ಹೆಚ್ಚಿದ್ದ ಸೋಂಕಿನ ಪ್ರಕರಣಗಳು ಈಗ ಹಳ್ಳಿಹಳ್ಳಿಯನ್ನೂ ವ್ಯಾಪಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಶಾಸಕರು, ಈ ಹಿನ್ನೆಲೆಯಲ್ಲಿ ಕೆಲ ತುರ್ತು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ಒತ್ತಾಯಿಸಿದ್ದಾರೆ.
ಪ್ರತಿಯೊಂದು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ವಾರೆಂಟೈನ್ ಸೆಂಟರ್ ಗಳನ್ನು ತೆರೆಯಬೇಕು. ಇದಕ್ಕಾಗಿ ಹಾಸ್ಟೇಲ್, ಸಭಾಭವನ, ಇತರ ಕಟ್ಟಡವನ್ನು ಬಳಸಿಕೊಳ್ಳಬೇಕು. ಸೋಂಕಿತರು ಮನೆಯಲ್ಲೇ ಇರುವುದರಿಂದ ಯಾರು ಸೋಂಕಿತರು ಎನ್ನುವುದು ಗೊತ್ತಾಗದೆ ಅವರ ಮನೆಗಳಿಗೂ ಕೆಲವರು ಹೋಗುವುದರಿಂದ ಅವರಿಗೂ ಸೋಂಕು ಹರಡುವ ಸಾಧ್ಯತೆ ಇದೆ. ಕೆಲ ಸೋಂಕಿತರು ಅಲ್ಲಿಲ್ಲಿ ತಿರುಗಾಡುತ್ತಿರುವುದೂ ಬೆಳಕಿಗೆ ಬಂದಿದೆ. ಇದರಿಂದ ಸೋಂಕಿತರ ಮನೆಗೆ ಬೋರ್ಡ್ ಅಂಟಿಸಬೇಕು.
ಚಿಕ್ಕ ಮಕ್ಕಳಿಗೆ ಕೊರೋನಾ ಸೋಂಕು ಕಂಡುಬಂದಲ್ಲಿ ಅವರ ಆರೈಕೆಗೆ ಪ್ರತ್ಯೇಕ ಕೇಂದ್ರವನ್ನು ಆರಂಭಿಸಬೇಕು. ಮಕ್ಕಳ ಜತೆ ಪಾಲಕರೂ ಇರುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.
ಆರೋಗ್ಯ ಸಮೀಕ್ಷೆ ನಡೆಸಲಿ:
ಈ ಹಿಂದೆ ಜಿಲ್ಲಾದ್ಯಂತ ನಡೆಸಿದಂತೆ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಈಗ ಆರೋಗ್ಯ ಸಮೀಕ್ಷೆ ನಡೆಯಬೇಕಿದೆ. ನಮ್ಮ ಕ್ಷೇತ್ರದ ಜನತೆ ನೆಮ್ಮದಿಯಿಂದ ಇರಬೇಕಾದರೆ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಅನಿವಾರ್ಯವಾಗಿ ಕೈಗೊಳ್ಳಲೇಬೇಕಾಗಿದೆ. ಈಗಾಗಲೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗಿದೆ. ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಉಸ್ತುವಾರಿ ಕಾರ್ಯದರ್ಶಿ ಮೋಹನರಾಜ್ ಹಾಗೂ ಇತರ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ನಮ್ಮ ಜನತೆಯ ಆರೋಗ್ಯ ಸುರಕ್ಷತೆಗಾಗಿ ಸದ್ಯದಲ್ಲೇ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.