ಟಿ20 ವಿಶ್ವಕಪ್: 20 ತಂಡಗಳ ಸ್ಪರ್ಧೆಗೆ ಐಸಿಸಿ ಚಿಂತನೆ
Team Udayavani, May 15, 2021, 12:47 AM IST
ಹೊಸದಿಲ್ಲಿ: ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ಪಾಲ್ಗೊಳ್ಳುವ ತಂಡಗಳ ಸಂಖ್ಯೆಯನ್ನು ಹೆಚ್ಚಿಸಲು ಐಸಿಸಿ ಚಿಂತನೆ ನಡೆಸುತ್ತಿದ್ದು, 20 ತಂಡಗಳಿಗೆ ಅವಕಾಶ ನೀಡಲು ಯೋಜನೆ ರೂಪಿಸುತ್ತಿದೆ ಎಂದು ವರದಿಯೊಂದು ತಿಳಿಸಿದೆ. ವಿಶ್ವದಾದ್ಯಂತ ಕ್ರಿಕೆಟನ್ನು ಜನಪ್ರಿಯಗೊಳಿಸುವುದೇ ಇದರ ಉದ್ದೇಶವಾಗಿದೆ.
ಇತ್ತೀಚಿನ ದಿನಗಳಲ್ಲಿ ಚುಟುಕು ಮಾದರಿಯ ಕ್ರಿಕೆಟ್ ಜಗತ್ತಿನಾದ್ಯಂತ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಹೀಗಾಗಿ ವಿಶ್ವಕಪ್‌ನಂತಹ ವೇದಿಕೆಯಲ್ಲಿ ಹೆಚ್ಚಿನ ತಂಡಗಳಿಗೆ ಅವಕಾಶವನ್ನು ನೀಡಿದರೆ ಕ್ರೀಡೆಯ ಬೆಳವಣಿಗೆಗೆ ಮತ್ತಷ್ಟು ಸಹಕಾರಿ ಎಂಬುದು ಐಸಿಸಿಯ ಲೆಕ್ಕಾಚಾರವಾಗಿದೆ.
ಪ್ರಸ್ತುತ ಟಿ20 ವಿಶ್ವಕಪ್‌ನಲ್ಲಿ 16 ತಂಡಗಳು ಪಾಲ್ಗೊಳ್ಳುತ್ತಿವೆ. ಸದ್ಯ 2021ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಯಾವುದೇ ಬದಲಾವಣೆ ಇರದು. ಆದರೆ 2024ರ ಟಿ20 ವಿಶ್ವಕಪ್‌ನಲ್ಲಿ ಹೆಚ್ಚುವರಿ ತಂಡಗಳನ್ನು ಆಡಿಸುವ ಸಾಧ್ಯತೆ ಇದೆ. ಆಗ ಐದು ತಂಡಗಳ ನಾಲ್ಕು ಗುಂಪುಗಳಾಗಿ ವಿಂಗಡಿಸಿ ಕೂಟವನ್ನು ಆಯೋಜಿಸುವ ಸಾಧ್ಯತೆಯಿದೆ.
ಮಹಿಳಾ ವಿಭಾಗದ ಟೂರ್ನಿಯಲ್ಲಿ ಈ ಬದಲಾವಣೆಯನ್ನು ಮಾಡಿಕೊಳ್ಳುತ್ತಿರುವುದಾಗಿ ಐಸಿಸಿ ಈಗಾಗಲೇ ಖಚಿತಪಡಿಸಿದೆ. ಈ ಬದಲಾವಣೆಯನ್ನು ಮುಂದಿನ ದಿನಗಳಲ್ಲಿ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲೂ ಅಳವಡಿಸಿಕೊಳ್ಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.