ನಾಳೆಯಿಂದ ಫುಲ್ ಲಾಕ್ ಡೌನ್: ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು
Team Udayavani, May 15, 2021, 1:15 PM IST
ರಾಯಚೂರು: ಜಿಲ್ಲೆಯಲ್ಲಿ ಮೇ 16ರಿಂದ 18ರ ವರೆಗೆ ಪೂರ್ಣ ಪ್ರಮಾಣದ ಲಾಕ್ ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ಮದ್ಯಪ್ರಿಯರು ಎಣ್ಣೆ ಖರೀದಿಗೆ ಮುಗಿಬಿದ್ದ ದೃಶ್ಯಗಳು ಕಂಡು ಬಂದಿವೆ.
ಈ ಮೊದಲು ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಜತೆಗೆ ಮದ್ಯ ಖರೀದಿಗೂ ವಿನಾಯಿತಿ ನೀಡಲಾಗಿತ್ತು. ಆದರೆ, ಮೂರು ದಿನ ಸಂಪೂರ್ಣ ಬಂದ್ ಇರುವ ಕಾರಣ ಮೂರು ದಿನಕ್ಕಾಗುವಷ್ಟು ಸರಕು ಸಂಗ್ರಹಿಸಿಕೊಳ್ಳಲು ಗ್ರಾಹಕರು ಸರದಿಯಲ್ಲಿ ನಿಂತು ಖರೀದಿಸಿದರು.
ಎಂಎಸ್ ಐಎಲ್ ಸೇರಿದಂತೆ ಬಹುತೇಕ ಬಾರ್ ಮತ್ತು ವೈನ್ ಶಾಪ್ ಗಳ ಮುಂದೆ ಜನಸಂದಣಿ ಜೋರಾಗಿತ್ತು. ಮದ್ಯ ಖರೀದಿಗೂ ಅಬಕಾರಿ ಇಲಾಖೆ ಮಿತಿ ನಿಗದಿಗೊಳಿಸಿದೆ. ಸರತಿ ಸಾಲಿನಲ್ಲಿ ನಿಂತು ಖರೀದಿಸಿದರೂ ಸಾಮಾಜಿಕ ಅಂತರ ಕಂಡು ಬರಲಿಲ್ಲ.
ಇದನ್ನೂ ಓದಿ : ಗವಿಮಠ ಕೋವಿಡ್ ಆಸ್ಪತ್ರೆಗೆ ಸಚಿವ ಬಿ ಸಿ ಪಾಟೀಲ ಭೇಟಿ
ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ ಸಾವಿರಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿವೆ. ಸೋಂಕು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಭಾನುವಾರ, ಸೋಮವಾರ, ಮಂಗಳವಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಅವಧಿಯಲ್ಲಿ ಆಸ್ಪತ್ರೆಗಳು, ಮೆಡಿಕಲ್ ಶಾಪ್ ಗಳು, ಪೆಟ್ರೋಲ್ ಬಂಕ್ ಗಳನ್ನು ಹೊರತುಪಡಿಸಿ ಇತರೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿರುವುದಿಲ್ಲ. ಮೇ 19ರ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.