![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 15, 2021, 4:00 PM IST
ಚಿತ್ರನಟ ಉಪೇಂದ್ರ ಅವರು ಕೋವಿಡ್ ಸೋಂಕಿನಿಂದ ಸಂಕಷ್ಟದಲ್ಲಿ ಸಿಲುಕಿರುವ ರಾಜ್ಯದ ರೈತರ ನೆರವಿಗೆ ಧಾವಿಸಿದ್ದಾರೆ.
ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಬೆಳೆದ ಬೆಳೆಯನ್ನು ಸೂಕ್ತ ಸಮಯಕ್ಕೆ ಮಾರಾಟ ಮಾಡಲು ಆಗದೆ ಕಂಗಾಲಾಗಿರುವ ಅನ್ನದಾತರಿಗೆ ಅನುಕೂಲ ಮಾಡಲು ಉಪ್ಪಿ ಮುಂದಾಗಿದ್ದಾರೆ.
ಕೋವಿಡ್ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ದೇಣಿಗೆ ಸಂಗ್ರಹಿಸುತ್ತಿರುವ ಉಪೇಂದ್ರ, ರೈತರಿಂದ ನೇರವಾಗಿ ಬೆಳೆ ಖರೀದಿಸಿ ಅದನ್ನು ಜನಸಾಮಾನ್ಯರಿಗೆ ದಿನಸಿ ಕಟ್ ಅಥವಾ ರೇಷನ್ ಕಿಟ್‌ನಲ್ಲಿ ಕೊಡಲು ನಿರ್ಧರಿಸಿದ್ದಾರೆ.
ಟ್ವಿಟರಿನಲ್ಲಿ ಈ ಬಗ್ಗೆ ಹೇಳಿಕೊಂಡಿರುವ ಅವರು, ನೀವು ಬೆಳೆದ ಬೆಳೆಗಳ ಬಗ್ಗೆ ಮಾಹಿತಿ ಒದಗಿಸಿ, ಅದನ್ನು ನಾವು ಖರೀದಿಸುತ್ತೇವೆ ಎಂದು ಕರೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಉಪೇಂದ್ರ ”ಬೆಳೆದ ಬೆಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರ ಗಮನಕ್ಕೆ…. ನಮಗೆ ಅವಶ್ಯಕತೆ ಇರುವ ಬೆಳೆಯನ್ನು ನಿಮ್ಮ ಬಳಿ ಸೂಕ್ತ ಬೆಲೆಗೆ ಕೊಂಡು ಬೇಕಿರುವವರಿಗೆ ಹಂಚುತ್ತೇವೆ. ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆ ಮಾಡಿ. ( 24 ಮೇ 2021 ರ ಒಳಗೆ ) Mbl no 9845763396” ಎಂದು ಕೇಳಿಕೊಂಡಿದ್ದಾರೆ.
ರೈತರು ಹಂಚಿಕೊಳ್ಳಬೇಕಾದ ಮಾಹಿತಿ
ಈ ವಿವರಗಳನ್ನು ವಾಟ್ಸ್ಅಪ್ ನಂಬರ್ +91 98457 63396 ಗೆ ಕಳುಹಿಸಿ ಕೊಡಿ ಎಂದು ಉಪ್ಪಿ ಟ್ವಿಟ್ಟರ್ ಮೂಲಕ ಮನವಿ ಮಾಡಿದ್ದಾರೆ.
ಬೆಳೆದ ಬೆಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರ ಗಮನಕ್ಕೆ….
ನಮಗೆ ಅವಶ್ಯಕತೆ ಇರುವ ಬೆಳೆಯನ್ನು ನಿಮ್ಮ ಬಳಿ ಸೂಕ್ತ ಬೆಲೆಗೆ ಕೊಂಡು ಬೇಕಿರುವವರಿಗೆ ಹಂಚುತ್ತೇವೆ.
ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆ ಮಾಡಿ. ( 24 ಮೇ 2021 ರ ಒಳಗೆ )
Mbl no 9845763396— Upendra (@nimmaupendra) May 15, 2021
ರೈತರು ಹಂಚಿಕೊಳ್ಳಬೇಕಾದ ಮಾಹಿತಿ
1.ನೀವು ಬೆಳೆದ ಬೆಳೆ ಯಾವುದು ?
2.ಆ ಬೆಳೆ ಎಷ್ಟು ಕೆಜಿ/ ಕ್ವಿಂಟಾಲ್ ಇದೆ ?
3.ಅದರ ಅಂತಿಮ ಬೆಲೆ ಎಷ್ಟು ?
4.ಅದನ್ನು ಬೆಂಗಳೂರಿಗೆ ಸಾಗಿಸಲು ಸಾರಿಗೆ ವಚ್ಚ ಎಷ್ಟು ? ಈ ವಿವರಗಳನ್ನು ದಯವಿಟ್ಟು ಕಳಿಸಿಕೊಡಿ.
5.ವಾಟ್ಸ್ಅಪ್ ನಂಬರ್ +91 98457 63396.— Upendra (@nimmaupendra) May 15, 2021
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.