ಕೆಲಸ ಕೊಡಿ ಇಲ್ಲವೇ ಪರಿಹಾರ ನೀಡಿ


Team Udayavani, May 15, 2021, 4:27 PM IST

ಕೆಲಸ ಕೊಡಿ ಇಲ್ಲವೇ ಪರಿಹಾರ ನೀಡಿ

ಸಿರುಗುಪ್ಪ: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆಲಸ ಕೊಡಬೇಕು, ಇಲ್ಲವೆ ಪರಿಹಾರಧನ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಅಖೀಲಭಾರತ ಜನವಾದಿ ಮಹಿಳಾ ಸಂಘಟನೆ ಪದಾಧಿಕಾರಿಗಳು ತಾಲೂಕಿನ ಕೆ. ಸೂಗೂರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿ ಗ್ರಾಪಂ ಪಿಡಿಒ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮುಖಂಡ ಗುರುಸ್ವಾಮಿ ಮಾತನಾಡಿ, ಕೊರೊನಾ ಕರ್ಫ್ಯೂನಲ್ಲಿ ಜನರ ಕೈಯಲ್ಲಿ ಹಣವಿಲ್ಲದೆ, ಕೆಲಸವಿಲ್ಲದೆ ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಗೆ ನರೇಗಾ ಯೋಜನೆಯು ಉದ್ಯೋಗ ಒದಗಿಸುತ್ತಿತ್ತು. ಆದರೆ ಸರ್ಕಾರ ನರೇಗಾ ಯೋಜನೆಯನ್ನು ಸ್ಥಗಿತಗೊಳಿಸಿರುವುದರಿಂದ ಕೂಲಿ ಕಾರ್ಮಿಕರಿಗೆ ಸಾಕಷ್ಟು ಕೆಲಸವಿಲ್ಲದೆ ತೊಂದರೆಯಲ್ಲಿದ್ದಾರೆ. ನಗರ ಪ್ರದೇಶಗಳಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರಳಿದ್ದಾರೆ, ಅವರಿಗೂ ಕೆಲಸ ಬೇಕಿದೆ, ಗ್ರಾಮೀಣ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ಇಲಾಖೆಗಳು ಕೋವಿಡ್‌ ನೆಪದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನುದಾನ ಮತ್ತು ಕಾರ್ಯಯೋಜನೆಗಳನ್ನು ತಡೆಹಿಡಿದಿದೆ.

ಗ್ರಾಮೀಣ ಜನರು ಆರೋಗ್ಯದ ಹಿನ್ನೆಲೆಯಲ್ಲಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ಇದರಲ್ಲಿ ಸತ್ಯಾಂಶವಿದ್ದರೆ ನಗರದಲ್ಲಿನ ಯೋಜನೆಗಳನ್ನು ಏಕೆ ತಡೆಹಿಡಿದಿಲ್ಲ. ರಿಯಲ್‌ ಎಸ್ಟೇಟ್‌ ಕಾಮಗಾರಿಗಳು ಬೆಂಗಳೂರು ಮೆಟ್ರೋ ಯೋಜನೆ ಸೇರಿದಂತೆ ಇತರೆ ಯೋಜನೆಗಳನ್ನು ಮುಂದುವರಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್‌ ನೆಪ ಹೇಳಿ ನರೇಗಾ ಯೋಜನೆಯನ್ನು ತಡೆಹಿಡಿದಿರುವುದು ಸರಿಯಾದ ಕ್ರಮವಲ್ಲ. ನರೇಗಾ ಯೋಜನೆಯಡಿಯಲ್ಲಿ ಕೆಲಸ ಕೊಡಬೇಕು ಇಲ್ಲವೆ ಪರಿಹಾರಧನ ನೀಡಬೇಕು, ಗ್ರಾಮೀಣ ಪ್ರದೇಶದ ಎಲ್ಲ ಕುಟುಂಬಗಳಿಗೆ 6 ತಿಂಗಳ ವರೆಗೆ ರೂ.10 ಸಾವಿರದಂತೆ ಪರಿಹಾರ ಧನವನ್ನು ಅವರ ಬ್ಯಾಂಕ್‌ ಖಾತೆಗೆ ಜಮೆ ಮಾಡಬೇಕು.

ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಎಲ್ಲ ರೈತ ಕೃಷಿ ಕಾರ್ಮಿಕರೆಲ್ಲರಿಗೂ ಪರಿಹಾರ ಒದಗಿಸಬೇಕು. ಪ್ರತಿ ಕುಟುಂಬದ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ, ಬೇಳೆ, ದ್ವಿದಳಧಾನ್ಯ ಸೇರಿದಂತೆ ಜೀವನಾವಶ್ಯಕ ವಸ್ತುಗಳನ್ನು ಉಚಿತವಾಗಿ ಗ್ರಾಮೀಣ ಪ್ರದೇಶದ ಎಲ್ಲ ಕುಟುಂಬಗಳಿಗೆ ವಿತರಣೆ ಮಾಡಬೇಕು. ನರೇಗಾ ಕಾರ್ಮಿಕರಿಗಾಗಿ ಪ್ರತಿ ಗ್ರಾಮಗಳಲ್ಲಿ ಕೋವಿಡ್‌ ಉಚಿತ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಬೇಕು, ಈಗಾಗಲೇ ನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಬಾಕಿ ಕೂಲಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಕೋಟೆಪ್ಪ, ಅಗಸರ ರಾಮಣ್ಣ, ಡಿ.ಸಿದ್ದಪ್ಪ, ಈರಮ್ಮ, ಹನುಮಂತಪ್ಪ, ವಡ್ರ ವೆಂಕೋಬಣ್ಣ, ಪಂಪಾಪತಿ, ಲೋಕೆಮ್ಮ, ಬಸಮ್ಮ, ತಿಪ್ಪಮ್ಮ, ಕೆ.ರಾ ಕ, ವಿ.ಲಕ್ಷ್ಮೀ ವಿ.ಯಂಕಮ್ಮ, ಎನ್‌.ಶೇಷಮ್ಮ, ಅನಿತಾ, ಬೋಗಟೆಮ್ಮ, ಚಾಗಮ್ಮ, ಎ.ಲಕ್ಷ್ಮೀ ಬಸಮ್ಮ, ಮೂಕಮ್ಮ, ಬೆಟ್ಟಮ್ಮ, ನಾಗಮ್ಮ, ಹನುಮಂತಮ್ಮ, ಮರಿಸ್ವಾಮಿ, ರೇಣುಕಮ್ಮ ಇದ್ದರು.

ಟಾಪ್ ನ್ಯೂಸ್

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.