8-10 ತಿಂಗಳಲ್ಲಿ ವಿಮಾನ ಹಾರಾಟ ಆರಂಭ
Team Udayavani, May 15, 2021, 4:55 PM IST
ಶಿವಮೊಗ್ಗ: ಸಮೀಪದ ಸೋಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅತ್ಯಾಧುನಿಕ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದ್ದು ಮುಂದಿನ ಎಂಟು-ಹತ್ತು ತಿಂಗಳ ಅವ ಧಿಯಲ್ಲಿವಿಮಾನ ಸಂಚಾರ ಕಾರ್ಯರಂಭಗೊಳ್ಳಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಶುಕ್ರವಾರ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದನಂತರ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿ ಮಾತನಾಡಿದರು.
ಕೈಗೊಂಡ ಕಾಮಗಾರಿ ಈಗಾಗಲೇ ಶೇ.50 ರಷ್ಟು ಮುಗಿದಿದ್ದು ಉಳಿದಂತೆ ಟರ್ಮಿನಲ್,ವಸತಿಗೃಹ ಮುಂತಾದ ಕಾಮಗಾರಿಗಳು ಶೀಘ್ರದಲ್ಲಿ ಆರಂಭಗೊಳ್ಳಲಿವೆ ಎಂದರು.
ಪ್ರಸ್ತುತ ವಿಮಾನ ನಿಲ್ದಾಣದಲ್ಲಿ ಹಗಲು ಮತ್ತು ರಾತ್ರಿ ಸಮಯದಲ್ಲಿಯೂ ವಿಮಾನಗಳಸಂಚಾರಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ ಸಣ್ಣ ಮತ್ತು ಭಾರೀಪ್ರಮಾಣದ ವಿಮಾನಗಳು ಕೂಡ ಸಂಚರಿಸಲುಅನುಕೂಲ ಒದಗಿಸಲಾಗಿದೆ ಎಂದರು.
ವಿಮಾನ ನಿಲ್ದಾಣ ಕಾಮಗಾರಿಯಆರಂಭದಲ್ಲಿದ್ದ ಬಹುತೇಕ ಎಲ್ಲಾ ಸಮಸ್ಯೆಗಳಿಗೆಪರಿಹಾರ ಕಂಡುಕೊಳ್ಳಲಾಗಿದೆ. ವಿಶೇಷವಾಗಿ ರೈತರ ಭೂಮಿ, ರೈತರ ಭೂಮಿಗೆ ನೀರುಹರಿಯುವ ಕಾಲುವೆ ವ್ಯವಸ್ಥೆ, ಸಿದ್ದರ ಗುಡಿಮತ್ತು ಓತಿಘಟ್ಟ ಗ್ರಾಮಗಳ ಸಂಪರ್ಕಕ್ಕೆಪರ್ಯಾಯ ರಸ್ತೆ ಮಾರ್ಗ, ಭೂ ಮಾಲೀಕರಿಗೆನಿವೇಶನ ನೀಡುವಂತಹ ಅನೇಕ ಸಮಸ್ಯೆಗಳು ಇತ್ಯರ್ಥಗೊಂಡಿವೆ. ನಿವೇಶನಕ್ಕಾಗಿ ಕೃಷಿವಿಶ್ವವಿದ್ಯಾಲಯದ 25 ಎಕರೆ ಭೂಮಿಯನ್ನು ವಶಕ್ಕೆ ಪಡೆದು ನಿವೇಶನಗಳನ್ನಾಗಿಸಿ ಹಸ್ತಾಂತರಿಸಲಾಗುವುದು ಎಂದ ಅವರು, 2009 ರಲ್ಲಿ ಮಂಜೂರಾಗಿ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಕಾಮಗಾರಿಯುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರದೂರದೃಷ್ಟಿ ಮತ್ತು ನಿರೀಕ್ಷೆಯಂತೆ ಸಕಾಲದಲ್ಲಿ ಪೂರ್ಣಗೊಳ್ಳಲಿದೆ ಎಂದರು.
ನೂತನ ಕೈಗಾರಿಕೆಗಳು, ರಕ್ಷಣಾ ಘಟಕಗಳು ಸೇರಿದಂತೆ ಅನೇಕ ವಾಣಿಜ್ಯ ಉದ್ದೇಶಗಳಿಗಾಗಿಈ ವಿಮಾನ ನಿಲ್ದಾಣ ಸಹಕಾರಿಯಾಗಲಿದೆ. ಅಲ್ಲದೆ ನಿರೀಕ್ಷಿತ ಸಮಯದಲ್ಲಿ ವಿಮಾನ ಸಂಚಾರಕಾರ್ಯಾರಂಭಗೊಂಡು ಮಧ್ಯ ಕರ್ನಾಟಕದ ಕೇಂದ್ರವಾಗಿ ಶಿವಮೊಗ್ಗ ಗುರುತಿಸಿಕೊಳ್ಳಲಿದೆ ಎಂದರು.
ಉದ್ದೇಶಿತ ವಿಮಾನ ನಿಲ್ದಾಣ ಕಾಮಗಾರಿಗಳುನಿಗದಿತ ಅವ ಧಿಯಲ್ಲಿ ಪೂರ್ಣಗೊಳ್ಳಲುಸರ್ಕಾರ ಅಗತ್ಯ ಅನುದಾನ ಒದಗಿಸಿದೆ. ಈಕಾಮಗಾರಿ ಪೂರ್ಣಗೊಳಿಸಲು ಯಾವುದೇಅನುದಾನದ ಕೊರತೆ ಇಲ್ಲ ಎಂದ ಅವರು, ಇಲ್ಲಿನ ವಿದ್ಯುತ್ ಮಾರ್ಗದ ಬದಲಾವಣೆಗೆ 22ಕೋಟಿ ರೂಗಳನ್ನು ಖರ್ಚು ಮಾಡಲಾಗುವುದುಎಂದವರು ನುಡಿದರು. ರಾಜ್ಯ ಆರ್ಯವೈಶ್ಯಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ. ಎಸ್. ಅರುಣ್,ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್ ಸುನೀತಾ, ದತ್ತಾತ್ರಿ ಮತ್ತಿತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.