ತೌಕ್ತೇ ಅಬ್ಬರ: ಕಾಫಿನಾಡಲ್ಲಿ ಭಾರೀ ಮಳೆ

Team Udayavani, May 16, 2021, 10:34 PM IST

16-18

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ತೌಕ್ತೇ ಚಂಡಮಾರುತದ ಪರಿಣಾಮ ಕಾಫಿನಾಡಿನಾದ್ಯಂತ ಶುಕ್ರವಾರ ರಾತ್ರಿಯಿಂದ ಆರಂಭಗೊಂಡ ಮಳೆ ಶನಿವಾರವೂ ಮುಂದುವರಿದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

ನಿರಂತರ ಮಳೆಯೊಂದಿಗೆ ಮೋಡ ಕವಿದ ವಾತಾವರಣ ಹಾಗೂ ಶೀತಗಾಳಿಯಿಂದ ಜನರು ಮನೆಯಲ್ಲೇ ಬಂಧಿಯಾಗಿದ್ದಾರೆ. ಜಿಲ್ಲೆಯ ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಸುತ್ತಮುತ್ತ ನಿರಂತರವಾಗಿ ಧಾರಾಕಾರ ಮಳೆಯಾಗಿದೆ.

ಇಡೀ ದಿನ ಗಾಳಿಯೊಂದಿಗೆ ಮಳೆಯಾಗಿದ್ದು, ಗಾಳಿಯ ರಭಸಕ್ಕೆ ಕೆಲವು ಮರಗಳು ನೆಲಕಚ್ಚಿವೆ. ವಿದ್ಯುತ್‌ ಕಂಬಗಳು ಧರೆಗುರುಳಿದ್ದು ವಿದ್ಯುತ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ನಿರಂತರ ಮಳೆಯಿಂದ ಮಲೆನಾಡು ಭಾಗದಲ್ಲಿ ಕೃಷಿ ಚಟುವಟಿಗೆ ಅಡ್ಡಿಯಾಗಿದೆ.

ಈ ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಕೆರೆಕಟ್ಟೆಗಳಲ್ಲಿ ನೀರು ತುಂಬಿಕೊಂಡಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಸುತ್ತಮುತ್ತ ನಿರಂತರ ಸಾಧಾರಣ ಮಳೆಯಾಗಿದೆ. ಕಡೂರು, ತರೀಕೆರೆ ಹಾಗೂ ಬೀರೂರು ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಶೀತ ಗಾಳಿಯೊಂದಿಗೆ ಸಾಧಾರಣ ಮಳೆಯಾಗಿದೆ.

ಕಳೆದೆರೆಡು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಚಿಕ್ಕಮಗಳೂರು ನಗರದ ರಾಮೇಶ್ವರ ನಗರದ ರುಕ್ಮಿಣಿಯಮ್ಮ ಎಂಬುವರ ಮನೆಯ ಗೋಡೆ ಕುಸಿದು ಚಾವಣಿಗೆ ಹಾಕಲಾಗಿದ್ದ ಶೀಟುಗಳು ಒಡೆದು ಹೋಗಿವೆ.

ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಂಭವವಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಂಭವ ಹೆಚ್ಚಿರುವ ಕಾರಣದಿಂದ ನದಿಪಾತ್ರದಲ್ಲಿ ಯಾರೂ ಓಡಾಡದಂತೆ ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.