ಟಗ್ ಸಿಬ್ಬಂದಿ ರಕ್ಷಣಾ ಕಾರ್ಯ: ಕೋಸ್ಟ್ ಗಾರ್ಡ್ ಡಿಐಜಿ ಜತೆ ಕೋಟ, ಕಟೀಲ್, ಡಿಸಿ ಚರ್ಚೆ
Team Udayavani, May 17, 2021, 10:30 AM IST
ಮಂಗಳೂರು: ಕಾಪು ಲೈಟ್ ಹೌಸ್ ನಿಂದ ಸುಮಾರು ಐದು ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿರುವ ವೆಸೆಲ್ ಟಗ್ ನ ರಕ್ಷಣಾ ಕಾರ್ಯಕ್ಕೆ ಸಂಬಂಧಿಸಿದಂತೆ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರೊಂದಿಗೆ ಕೋಸ್ಟ್ ಗಾರ್ಡ್ ಡಿ. ಐ.ಜಿ ಎಸ್.ಬಿ. ವೆಂಕಟೇಶ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಇದನ್ನೂ ಓದಿ:ಅರಬ್ಬಿ ಸಮುದ್ರದ ಮಧ್ಯೆ ಸಿಲುಕಿರುವ ಟಗ್: ಕೊನೆಗೂ ರಕ್ಷಣಾ ಕಾರ್ಯ ಆರಂಭ
ಕಾಪು ಲೈಟ್ ಹೌಸ್ ನಿಂದ ಸುಮಾರು ಐದು ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿರುವ ಮಂಗಳೂರಿನ ಎಂಆರ್ ಪಿಎಲ್ ಕಂಪನಿಗೆ ಆಗಮಿಸುವ ಕಚ್ಚಾ ತೈಲ ಅಂಡರ್ ಗ್ರೌಂಡ್ ಪೈಪ್ ಕನೆಕ್ಟ್ ಮಾಡುವ ಗುತ್ತಿಗೆ ಪಡೆದಿರುವ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ವೆಸೆಲ್ ನಲ್ಲಿರುವ ಜನರ ರಕ್ಷಣೆಯ ಕುರಿತು ಚರ್ಚಿಸಿದರು.
ಇಂದು ಬೆಳಗ್ಗೆಯಿಂದ ನೌಕಾ ಸೇನೆಯ ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ನಡೆಯುತ್ತಿದ್ದು, 9 ಜನರಲ್ಲಿ 5 ಜನರನ್ನು ರಕ್ಷಿಸಲಾಗಿದೆ. ಉಳಿದ 4 ಜನರ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಕೋಸ್ಟ್ ಗಾರ್ಡ್ ಡಿ. ಐ.ಜಿ ಎಸ್.ಬಿ. ವೆಂಕಟೇಶ್ ಅವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.