ಚಿಕ್ಕಮಗಳೂರು : ಕೋವಿಡ್ ನಿಂದ ಮೃತ ಪಟ್ಟ ವ್ಯಕ್ತಿಯ ವರದಿಯನ್ನು ನೆಗೆಟಿವ್ ಕೊಟ್ಟ ಆಸ್ಪತ್ರೆ
Team Udayavani, May 17, 2021, 1:45 PM IST
ಚಿಕ್ಕಮಗಳೂರು : ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ ವ್ಯಕ್ತಿಯನ್ನು ಬೇರೆ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ವರದಿ ನೀಡಿ ಎಡವಟ್ಟು ಮಾಡಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಇಂದಿರಾನಗರ ಬಡಾವಣೆಯ ವ್ಯಕ್ತಿಯೊಬ್ಬ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚಿಕಿತ್ಸೆ ಫಲಕಾರಿಯಾಗದೆ ಆ ವ್ಯಕ್ತಿಯು ಸಾವನ್ನಪ್ಪಿದ್ದಾರೆ. ಖಾಸಗಿ ಆಸ್ಪತ್ರೆಯವರು ವಿವಿಧ ಖಾಯಿಲೆಯಿಂದ ವ್ಯಕ್ತಿಯು ಬಳಲಿ ಸಾವನಪ್ಪಿದ್ದಾರೆಂದು ಮೃತದೇಹ ಹಸ್ತಾಂತರಿಸಿದ್ದರು.
ವಿಚಿತ್ರ ಎಂದರೆ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಿ ಬಂದ ನಂತರ ಪಾಸಿಟಿವ್ ವರದಿಯು ಬಂದಿದೆ. ಈ ಕಾರಣದಿಂದ ಅಂತ್ಯ ಕ್ರಿಯೆಯಲ್ಲಿ ಭಾಗಿಯಾಗಿದ್ದ ನೂರಾರು ಜನ ಆತಂಕದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ.
ಇನ್ನು ಒಂದೇ ಹಳ್ಳಿಯಲ್ಲಿ 128 ಜನರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಸ್ಥಳಕ್ಕೆ ಎಸಿ, ತಹಶೀಲ್ದಾರ್, ಇಓ. ಪಿಡಿಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.