ಮೀನಿಗಾಗಿ ಮುಗಿಬಿದ್ದ ಜನ: ಲಾಠಿ ಪ್ರಹಾರ
Team Udayavani, May 17, 2021, 2:51 PM IST
ಮಂಡ್ಯ: ಜಿಲ್ಲೆಯಲ್ಲಿ ಪ್ರತಿದಿನ ಕೊರೊನಾದಿಂದ 5ರಿಂದ10 ಮಂದಿ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಅಲ್ಲದೆ,ಒಂದು ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕುಹರಡುತ್ತಿದ್ದರೂ ಜನರು ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಕಾಣುತ್ತಿಲ್ಲ. ಸಾರ್ವಜನಿಕರು ಪ್ರತಿದಿನ ಮೀನು, ಮಾಂಸಹಾಗೂ ದಿನಸಿ ಸಾಮಗ್ರಿ ಖರೀದಿಗೆ ಮುಗಿಬೀಳುತ್ತಿರುವುದು ಸೋಂಕಿನ ಭೀತಿಗೆ ಕಾರಣವಾಗಿದೆ.
ಲಾಕ್‌ಡೌನ್ ಹಿನ್ನೆಲೆ ಜನರಿಗೆ ಬೆಳಗ್ಗೆ ಹೊತ್ತು ಮಾತ್ರಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಆಸಮಯದಲ್ಲಿಯೇ ಸಾರ್ವಜನಿಕರು ಸೋಂಕು ವಾಹಕರಾಗುತ್ತಿದ್ದಾರೆ. ದಿನಸಿ ಅಂಗಡಿ, ಹಣ್ಣು, ಹೂವು, ತರಕಾರಿ,ಮಾಂಸದಂಗಡಿಗಳ ಮುಂದೆ ಸಾಮಾಜಿಕ ಅಂತರವಿಲ್ಲದೆಕ್ಯೂ ನಿಲ್ಲುತ್ತಿದ್ದಾರೆ. ನಿಯಮ ಉಲ್ಲಂ ಸುತ್ತಿದ್ದಾರೆ.
ಮೀನಿಗಾಗಿ ಜನಸಂದಣಿ: ಲಾಠಿ ಪ್ರಹಾರ ನಗರದಹೊಸಹಳ್ಳಿಯಲ್ಲಿರುವ ಮೀನು ಮಾರುಕಟ್ಟೆಯಲ್ಲಿಭಾನುವಾರ ಜನಜಂಗುಳಿ ಸೇರಿತ್ತು. ಕೆಲವರು ಮಾಸ್ಕ್ಧರಿಸಿದ್ದರೆ, ಇನ್ನೂ ಕೆಲವರು ಮಾಸ್ಕ್ ಧರಿಸದೆ, ಯಾವುದೇಸಾಮಾಜಿಕ ಅಂತರವನ್ನು ಕಾಪಾಡದೆ ಗುಂಪು ಗುಂಪಾಗಿನಿಂತಿದ್ದರು . ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿಗ್ರಾಹಕರನ್ನು ಲಾಠಿ ಪ್ರಹಾರ ಮಾಡಿ ಚದುರಿಸಿದರು.ಅಲ್ಲದೆ, ಸಾಮಾಜಿಕ ಅಂತರ, ಮಾಸ್ಕ್ ಧರಿಸುವಂತೆಜಾಗೃತಿ ಮೂಡಿಸಿದರು.
ದಂಡ ವಿಧಿಸುವ ಎಚ್ಚರಿಕೆನೀಡಿದರು. ಸೋಂಕಿನ ಭಯದ ಹಿನ್ನೆಲೆಯಲ್ಲಿ ಮೀನುಮಾರುಕಟ್ಟೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕುಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.