ಚಿಕ್ಕಬಳ್ಳಾಪುರ : ಮೇ 20 ರಿಂದ ನಾಲ್ಕು ದಿನಗಳ ಸಂಪೂರ್ಣ ಲಾಕ್ ಡೌನ್
Team Udayavani, May 17, 2021, 4:28 PM IST
ಗುಡಿಬಂಡೆ (ಚಿಕ್ಕಬಳ್ಳಾಪುರ) : ಕೋವಿಡ್ ಸೋಂಕು ತಡೆಗಟ್ಟಲು ಜಿಲ್ಲಾಧಿಕಾರಿಗಳ ಸೂಚನೆಯಂತೆ 144 ಸೆಕ್ಷನ್ ಜಾರಿ ಮಾಡಿ ಇದೇ ಮೇ ತಿಂಗಳ 20 ರಿಂದ 4 ನಾಲ್ಕು ದಿನಗಳ ಕಾಲ ಚಿಕ್ಕಬಳ್ಳಾಪುದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ನೋಡಲ್ ಅಧಿಕಾರಿ ಅಶೋಕ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ತಾಲ್ಲೂಕು ಕಚೇರಿಯ ಆವರಣದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಕೊರೊನ ಸೋಂಕನ್ನು ಸಂಪೂರ್ಣವಾಗಿ ತಡೆಗಟ್ಟುವ ದೃಷ್ಟಿಯಿಂದ ಲಾಕ್ ಡೌನ್ ಅವಶ್ಯಕತೆ ಇರುವುದರಿಂದ ನಾಲ್ಕು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಈ ಸಮಯದಲ್ಲಿ ಸಾರ್ವಜನಿಕರು ಸಹಕರಿಸ ಬೇಕು ಎಂದರು.
ಲಾಕ್ ಡೌನ್ ಸಮಯದಲ್ಲಿ ಎನಿರುತ್ತೆ / ಎನಿರಲ್ಲ
ನಾಲ್ಕು ದಿನಗಳ ಕಾಲ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಹಾಲು ತರಲು ಹಾಗೂ ಮೆಡಿಕಲ್ ಗೆ ಹೋಗಿ ಬರಲು ನಡೆದುಕೊಂಡೇ ಹೋಗಿ ಬರಬೇಕಾದ ಅವಶ್ಯಕತೆ ಇರುತ್ತದೆ. ದಿನಸಿ, ತರಕಾರಿ, ಅವಶ್ಯಕ ವಸ್ತು ಗಳನ್ನು ತರಲು ಅವಕಾಶ ಇರುವುದಿಲ್ಲ. ತುರ್ತು ಪರಿಸ್ಥಿತಿ ಹೊರತು ಪಡಿಸಿ ಯಾರು ಮನೆಯಿಂದ ಹೊರಗೆ ಬರುವಂತಿಲ್ಲ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಅವಶ್ಯಕ ವಸ್ತುಗಳನ್ನು ಇಂದಿನ ಎರಡು ದಿನಗಳ ಒಳಗೆ ತೆಗೆದುಕೊಳ್ಳುವುದು ಒಳಿತು, ಸ್ವಲ್ಪ ಎಚ್ಚರ ತಪ್ಪಿದರೂ ನಾಲ್ಕು ದಿನ ಏನು ಸಿಗುವುದಿಲ್ಲ.
ಹೋಮ್ ಕ್ವಾರೆಂಟಿನ್ ಇಲ್ಲ
ಇಂದಿನಿಂದ ಹೋಮ್ ಕ್ವಾರೆಂಟಿನ್ ಇರುವುದಿಲ್ಲ, ತಾಲ್ಲೂಕಿನಲ್ಲಿ ಯಾರಿಗಾದರು ಸೋಂಕು ಕಂಡುಬಂದಲ್ಲಿ ಅಂತವರನ್ನು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕೋವಿಡ್ ಕೇರ್ ಸೇಂಟರ್ ನಲ್ಲಿ ಇರಿಸಿ ಅವರಿಗೆ ಬೇಕಾದ ಚಿಕಿತ್ಸೆ ಕೊಡಲಾಗುವುದು, ಕಾರಣ ಈಗಾಗಲೇ ಹೋಮ್ ಕ್ವಾರೆಂಟಿನ್ನಲ್ಲಿರುವವರು ವಿನಾಃ ಕಾರಣ ಮನೆಯಲ್ಲಿ ಮತ್ತು ಹೊರಗಡೆ ಓಡಾಡಿ ರೋಗ ಹರಡುತ್ತಿದ್ದಾರೆ ಎಂಬ ದೂರುಗಳು ಬಂದ ಕಾರಣ ಕೋವಿಡ್ ಕೇರ್ ಸೇಂಟರ್ ಗೆ ವರ್ಗಾಯಿಸಲಾಗುವುದು ಎಂದು ನೋಡಲ್ ಅಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.