ಕುವೈತ್ ನಿಂದ ಧಾರವಾಡಕ್ಕೆ 75 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ: ಸಚಿವ ಪ್ರಹ್ಲಾದ್ ಜೋಶಿ
Team Udayavani, May 17, 2021, 5:09 PM IST
ಧಾರವಾಡ: ಭಾರತ ಸರ್ಕಾರದ ವಿದೇಶಾಂಗ ಮಂತ್ರಾಲಯ ಮತ್ತು ವಾಣಿಜ್ಯ ಮಂತ್ರಾಲಯದಿಂದ ಬೇರೆ ಬೇರೆ ರಾಷ್ಟ್ರಗಳ ಜೊತೆ ಭಾರತದ ಉತ್ತಮ ಸಂಬಂಧ ಹೊಂದಿರುವದರಿಂದ ಮತ್ತು ಜಾಗತಿಕ ಟೆಂಡರ್ ಮೂಲಕ ಆಕ್ಸಿಜನ್ ಆಮದು ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಸೋಮವಾರ ಬೆಳಿಗ್ಗೆ, ಜಿಲ್ಲೆಯ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಪ್ರಾಕ್ಸಿಯರ್ ಆಕ್ಸಿಜನ್ ಮರುಪೂರ್ಣ (ರೀಫಿಲ್ಲಿಂಗ್) ಘಟಕಕ್ಕೆ ಭೇಟಿ ನೀಡಿ, ಘಟಕದಿಂದ ಟ್ಯಾಂಕರ್ ಗೆ ಆಕ್ಸಿಜನ್ ತುಂಬುವ ಕಾರ್ಯ ಪರೀಶಿಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕುವೈತ್ ರಾಷ್ಟ್ರದಿಂದ 75 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆಗೆ ಒಪ್ಪಂದವಾಗಿತ್ತು. ಅದನ್ನು ಧಾರವಾಡದಲ್ಲಿ ಸಂಗ್ರಹಿಸಿ, ಧಾರವಾಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಇಲ್ಲಿಂದ ವ್ಯವಸ್ಥಿತವಾಗಿ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಅದರಂತೆ ಈಗಾಲೇ 50 ಮೆಟ್ರಿಕ್ ಟನ್ ಆಕ್ಸಿಜನ್ ಬಂದಿದೆ. ಈ ಆಕ್ಸಿಜನ್ ನನ್ನು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟ, ವಿಜಯಪುರ ಜಿಲ್ಲೆಗಳಿಗೆ ಸಮರ್ಪಕವಾಗಿ ಹಂಚಿಕೆ ಮಾಡಲು ಜಿಲ್ಲಾಡಳಿತ ಎಲ್ಲ ವ್ಯವಸ್ಥೆಯನ್ನು ಮಾಡಿಕೊಂಡಿದೆ . ಇನ್ನೂಳಿದ 25 ಮೆಟ್ರಿಕ್ ಟನ್ ಆಕ್ಸಿಜನ್ ಎರಡು ದಿನಗಳಲ್ಲಿ ಪೂರೈಕೆಯಾಗಲಿದೆ ಎಂದರು.
ಇದನ್ನೂ ಓದಿ:ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರಿಕರರಿಗೂ ವ್ಯಾಕ್ಸಿನ್ ಸೌಲಭ್ಯ: ಶಶಿಕಲಾ ಜೊಲ್ಲೆ ಭರವಸೆ
ಪೂರ್ವಾಂಚಲದಿಂದ ಹೆಚ್ಚುವರಿಯಾಗಿ 2 ಟ್ಯಾಂಕರ್ ಆಕ್ಸಿಜನ್ ಬಂದಿದ್ದು, ಓರಿಸ್ಸಾದಿಂದ ಒಂದು ಆಕ್ಸಿಜನ್ ಟ್ಯಾಂಕರ್ ಬರಲಿದೆ. ಇವೆಲ್ಲವೂಗಳನ್ನು ಒಟ್ಟುಗೂಡಿಸಿ, ಜಿಲ್ಲೆಗೆ ದಿನನಿತ್ಯ ಬೇಕಾಗುವ ಆಕ್ಸಿಜನ್‍ನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಎಲ್ಲ ವ್ಯವಸ್ಥೆಯ ಮಧ್ಯೆಯೂ ಸಾರ್ವಜನಿಕರು ಜಾಗೃತರಾಗಿದ್ದು, ಕೋವಿಡ್ ಸಾಂಕ್ರಾಮಿಕ ರೋಗ ಲಕ್ಷಣ ಕಂಡು ಬಂದರೆ ತಕ್ಷಣ ಸಮೀಪದ ಆಸ್ಪತ್ರೆಗೆ ತೆರಳಿ ವೈದ್ಯರಿಂದ ಸೂಕ್ತ ಸಲಹೆ, ಚಿಕಿತ್ಸೆ ಪಡೆಯಬೇಕು. ಕೋವಿಡ್ -19ರ ಬಗ್ಗೆ ಭಯ ಪಡದೆ ಎಚ್ಚರವಹಿಸಿ. ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕೆಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಆಕ್ಸಿಜನ್ ತಂಡದ ನೊಡಲ್ ಅಧಿಕಾರಿಗಳಾದ ಆಹಾರ ಇಲಾಖೆ ಜಂಟಿ ನಿರ್ದೇಶಕ ವಿನಾಯಕ ಪಾಲನಕರ, ಡಿಯುಡಿಸಿ ಯೋಜನಾ ನಿರ್ದೇಶಕ ರುದ್ರೇಶ, ಜಿಲ್ಲಾ ಸಹಾಯಕ ಔಷಧಿಗಳ ನಿಯಂತ್ರಕ ಮಲ್ಲಿಕಾರ್ಜುನ ಕೆ.ಎಸ್, ಡಿವೈಎಸ್ ಪಿ ಮಲ್ಲಿಕಾರ್ಜುನ ಬಿ.ಸಂಕದ, ಇತರು ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.