ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ


Team Udayavani, May 17, 2021, 9:37 PM IST

17-11

ದಾವಣಗೆರೆ: ಕೊರೊನಾ ನಿಯಂತ್ರಣ, ಅಗತ್ಯ ಲಸಿಕೆ, ಆಕ್ಸಿಜನ್‌, ವೆಂಟಿಲೇಟರ್‌ ಇತರೆ ಸೌಲಭ್ಯ ಒದಗಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್‌.ಬಿ. ಮಂಜಪ್ಪ ದೂರಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ, ರಾಜ್ಯ ಸರ್ಕಾರಗಳು ಉಪ ಚುನಾವಣೆ ಮುಂದೂಡಿ ಕೊರೊನಾ ನಿಯಂತ್ರಣಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಬಹುದಿತ್ತು. ಆದರೆ ಜನರ ಆರೋಗ್ಯ, ಜೀವ ರಕ್ಷಣೆಗಿಂತ ಚುನಾವಣೆಯೇ ಮುಖ್ಯವಾಗಿತ್ತು. ಕೊರೊನಾ ಉಲ್ಬಣಗೊಂಡ ನಂತರವೂ ಅಗತ್ಯ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.

ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಮಾತ್ರ ಪರಿಹಾರ ಅಲ್ಲ. ಲಸಿಕೆಯನ್ನು ಹೆಚ್ಚೆಚ್ಚು ನೀಡುವಂತಾಗಬೇಕು. ಆದರೆ ಸರ್ಕಾರಗಳು ಕೋವಿಡ್‌ ಲಸಿಕೆ ಪೂರೈಸುವಲ್ಲಿ ವಿಫಲವಾಗಿವೆ. ಕೂಡಲೇ ಸಮರ್ಪಕವಾಗಿ ಲಸಿಕೆ, ಕೋವಿಡ್‌ ಸೋಂಕಿತರ ಚಿಕಿತ್ಸೆಗಾಗಿ ಆಕ್ಸಿಜನ್‌, ವೆಂಟಿಲೇಟರ್‌ ಇತರೆ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ದಾವಣಗೆರೆ ಸಂಸದರು ಬರೀ ಫೋಟೋಕ್ಕೆ ಫೋಸ್‌ ಕೊಡುವುದರಿಂದ ಏನೂ ಆಗುವುದಿಲ್ಲ. ಸೋಂಕಿತರಿಗೆ ಅತಿ ಅಗತ್ಯವಾದ ರೆಮ್‌ಡಿಸಿವರ್‌ ಇಂಜೆಕ್ಷನ್‌, ಆಕ್ಸಿಜನ್‌, ವೆಂಟಿಲೇಟರ್‌ ಸೌಲಭ್ಯ ಒದಗಿಸುವತ್ತ ಹೆಚ್ಚು ಗಮನ ನೀಡಬೇಕು. ಬಿಜೆಪಿ ಸಂಸದರು, ಮುಖ್ಯಮಂತ್ರಿಗಳಿಗೆ ರಾಜ್ಯಕ್ಕೆ ಬೇಕಾದ ಸವಲತ್ತುಗಳ ಬಗ್ಗೆ ಪ್ರಧಾನಮಂತ್ರಿ ಮುಂದೆ ನಿಂತು ಕೇಳುವ ಶಕ್ತಿ ಇಲ್ಲ. ಹಾಗಾಗಿ ರಾಜ್ಯಕ್ಕೆ ದೊರೆಯಬೇಕಾದ ಸೌಲಭ್ಯ ದೊರಕುತ್ತಿಲ್ಲ ಎಂದ ವಾಗ್ಧಾಳಿ ನಡೆಸಿದರು.

ಬಿಜೆಪಿ ಮುಖಂಡರು ನ್ಯಾಯಾಧೀಶರ ಬಗ್ಗೆಯೇ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ನ್ಯಾಯಾಂಗ ನಿಂದನೆ ಮಾಡುವಂತೆ ಹೇಳಿಕೆ ನೀಡುತ್ತಾರೆ. ಉದ್ಧಟತನದ ಹೇಳಿಕೆ ನೀಡುವಂತಹವರು ಜನಸಾಮಾನ್ಯರಿಗೆ ನ್ಯಾಯ ಕೊಡಿಸಬಲ್ಲರೇ ಎಂಬ ಪ್ರಶ್ನೆ ಉದ್ಬವವಾಗುತ್ತದೆ ಎಂ ಮಂಜಪ್ಪ, ಕೊರೊನಾ ಕರ್ಫ್ಯೂನಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಸೂಕ್ತ ಪ್ಯಾಕೇಜ್‌, ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕು. ಆಮ್ಲಜನಕ ಕೊರತೆಯಿಂದ ಚಾಮರಾಜನಗರದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ದಾವಣಗೆರೆ ಜಿಲ್ಲಾಧಿಕಾರಿಗಳು ದಾನಿಗಳಿಂದ ನೆರವು ಕೋರಿರುವುದನ್ನ ನೋಡಿದರೆ ರಾಜ್ಯ ಸರ್ಕಾರ ಎಷ್ಟು ದಿವಾಳಿತನಕ್ಕೆ ಬಂದಿದೆ ಎಂಬುದು ಗೊತ್ತಾಗುತ್ತದೆ ಎಂದು ಕುಟುಕಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ. ಶೆಟ್ಟಿ ಮಾತನಾಡಿ, ಮಹಾನಗರ ಪಾಲಿಕೆಯಿಂದ ದಿನಕ್ಕೆ ಕನಿಷ್ಠ 30-40 ಮರಣ ಪ್ರಮಾಣಪತ್ರ ಕೊಂಡೊಯ್ಯಲಾಗುತ್ತಿದೆ. ಆದರೆ ಕೊರೊನಾದಿಂದ ಸಾವಿನ ಸಂಖ್ಯೆ ಕಡಿಮೆ ತೋರಿಸಿ ಎಲ್ಲವನ್ನೂ ಮುಚ್ಚಿಡಲಾಗುತ್ತಿದೆ. ಕೊರೊನಾ ಲಸಿಕೆಗಾಗಿ ಜನರು ಪ್ರತಿ ದಿನ ಅಲೆದಾಟ ನಡೆಸುತ್ತಿದ್ದಾರೆ.

ಎರಡು ಕಂಪನಿಗಳಿಗೆ ಮಾತ್ರವೇ ನೀಡಿರುವುದರಿಂದ ತೊಂದರೆ ಆಗುತ್ತಿದೆ. ಆದ್ದರಿಂದ ಮುಕ್ತ ಮಾರುಕಟ್ಟೆಯಲ್ಲಿ ಲಸಿಕೆ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಕಾರ್ಯದರ್ಶಿ ಎ. ನಾಗರಾಜ್‌ ಮಾತನಾಡಿ, ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿರುವ 31 ವೆಂಟಿಲೇಟರ್‌ ಪೈಕಿ 12 ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಬಹಳಷ್ಟು ಸೋಂಕಿತರು ವೆಂಟಿಲೇಟರ್‌ ಸಿಗದೆ ಸಾವನ್ನಪ್ಪುತ್ತಿದ್ದಾರೆ. ಒಂದು ವರ್ಷವಾದರೂ ವೆಂಟಿಲೇಟರ್‌ಗಳ ನಿರ್ವಹಣೆಗೆ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿಲ್ಲ. ಲಸಿಕೆ ಪೂರೈಕೆಯ ಹುಳುಕು ಮುಚ್ಚಿಕೊಳ್ಳಲು ಎರಡನೇ ಡೋಸ್‌ ಅವಧಿ ಹೆಚ್ಚಳ ಮಾಡಲಾಗಿದೆ ಎಂದು ದೂರಿದರು.

ಜಿಲ್ಲಾ ವಕ್ತಾರ ಎಂ. ನಾಗೇಂದ್ರಪ್ಪ ಮಾತನಾಡಿ, ಹರಿಹರ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತನೊಬ್ಬನಿಗೆ ನೀಡುತ್ತಿದ್ದ ಆಕ್ಸಿಜನ್‌ ಪೂರೈಕೆಯನ್ನೇ ನಿಲ್ಲಿಸಿ ಅದೇ ಸಿಲಿಂಡರ್‌ ಅನ್ನು ಮಾಜಿ ಶಾಸಕರು ಉದ್ಘಾಟನೆ ಮಾಡಿದಂತೆ ಫೋಟೋಗಳಿಗೆ ಪೋಸ್‌ ನೀಡಲಾಗಿದೆ. ಆಕ್ಸಿಜನ್‌ ಸ್ಥಗಿತಗೊಳಿಸಿದ್ದರ ಪರಿಣಾಮ ಸೋಂಕಿತ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ ಎಂಬ ಆರೋಪಿಸಿದರು.

ಟಾಪ್ ನ್ಯೂಸ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.