ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ
Team Udayavani, May 18, 2021, 3:32 AM IST
ಮಲ್ಪೆ : ಚಂಡಮಾರುತದ ಪ್ರಭಾವ ಜಿಲ್ಲೆಯಲ್ಲಿ ಸಾಕಷ್ಟು ಪರಿಣಾಮ ಬೀರಿದೆ. ಇದರಿಂದ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಪಾಸ್ತಿಗಳಿಗೆ ಬಹಳ ನಷ್ಟ ಉಂಟಾಗಿದೆ. ಯಾವುದೇ ಹಾನಿ ಸಂಭವಿಸಿದರೆ ಕೂಡಲೇ ವರದಿ ಮಾಡಬೇಕು ಮತ್ತು ಜನರ ರಕ್ಷಣೆಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ತೌಖ್ತೆ ಚಂಡಮಾರುತದಿಂದ ಹಾನಿಗೀಡಾಗಿರುವ ಮಲ್ಪೆ ಪಡುಕರೆ ಪ್ರದೇಶಕ್ಕೆ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸುಮಾರು 60 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದ್ದು, ಅದರಂತೆ ಅವರೆಲ್ಲರೂ ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ. ತೊಂದರೆಗೀಡಾಗುವ ಕುಟುಂಬಗಳಿಗೆ ಇಲ್ಲಿ ಎಲ್ಲ ಸೌಲಭ್ಯ ಗಳೊಂದಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ಸದ್ಯ ಈ ಕೇಂದ್ರಗಳಲ್ಲಿ ಯಾರು ಕೂಡ ಉಳಿದು ಕೊಂಡಿಲ್ಲ ಎಂದರು.
ಅಧಿಕಾರಿಗಳಿಂದ ನಷ್ಟ ಅಂದಾಜು
ಹಾನಿಗೀಡಾಗಿರುವ ಪ್ರದೇಶಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಖಾಸಗಿ ಹಾಗೂ ಸಾರ್ವಜನಿಕ ಆಸ್ತಿಗಳ ನಷ್ಟ ಅಂದಾಜು ಮಾಡಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಬಹಳ ಕಡೆಗಳಲ್ಲಿ ಮೀನುಗಾರಿಕೆ ರಸ್ತೆಗಳು ಹಾನಿಗೀಡಾಗಿದ್ದು, ಈ ರಸ್ತೆಗಳ ಹಾನಿ ಪ್ರಮಾಣವನ್ನು ತಿಳಿಸುವಂತೆ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲಾದ್ಯಂತ ವಿದ್ಯುತ್ ಕಂಬ, ಟ್ರಾನ್ಸ್‌ಫಾರ್ಮರ್, ವಿದ್ಯುತ್ ತಂತಿಗಳಿಗೆ ಹಾನಿಯಾಗಿ ಮೆಸ್ಕಾಂಗೆ ಭಾರೀ ನಷ್ಟ ಉಟಾಗಿದ್ದು, ಅದನ್ನು ಕೂಡಲೇ ಸರಿಪಡಿಸುವಂತೆ ಸೂಚಿಸಲಾಗಿದೆ. ಕಳೆದ ಬಾರಿ ಆರು ಕೋಟಿ ರೂ.ವನ್ನು ಮೆಸ್ಕಾಂಗೆ ನೀಡಲಾಗಿದೆ. ಈ ಬಾರಿ ಕೂಡಲೇ ಕಾರ್ಯ ಪ್ರವೃತ್ತರಾಗುವಂತೆ ಸೂಚಿಸಲಾಗಿದೆ ಎಂದರು. ಲೋಕೋಪಯೋಗಿ ಇಲಾಖೆಯ ರಸ್ತೆಗಳಿಗೆ ಕೂಡ ಹಾನಿ ಯಾಗಿದ್ದು ಕಡಲ್ಕೊರೆತದಿಂದ ನೂರಾರು ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಈ ಕುರಿತು ನಷ್ಟ ಅಂದಾಜು ಮಾಡುವಂತೆ ತೋಟಗಾರಿಕೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
ಕೆಲವು ಬೋಟುಗಳಿಗೆ ಹಾನಿ
ಮೀನುಗಾರಿಕಾ ಬೋಟುಗಳಿಗೆ ಹಾನಿ ಯಾಗಿರುವ ಬಗ್ಗೆ ಮಾಹಿತಿ ಬಂದಿದ್ದು, ಅದನ್ನು ಇಲಾಖಾಧಿಕಾರಿಗಳ ಗಮನಕ್ಕೆ ತರಲಾಗಿದೆ. ನಮ್ಮಲ್ಲಿ ಆಳ ಸಮುದ್ರ ಮೀನುಗಾರಿಕೆ ತೆರಳಿದ ಯಾರು ಕೂಡ ಸಮುದ್ರ ಮಧ್ಯೆ ಸಿಲುಕಿಕೊಂಡಿಲ್ಲ. ಮಂಗಳೂರು ಬೋಟು ದುರಂತದಲ್ಲಿ ಈಜಿಕೊಂಡು ಬಂದ ಮೂವರನ್ನು ಜಿಲ್ಲೆಯಲ್ಲಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖ ಲಿಸಲಾಗಿದೆ. ಇವರೆಲ್ಲರೂ ಆರೋಗ್ಯ ವಾಗಿದ್ದಾರೆ ಎಂದರು.
ಜಿಲ್ಲಾಧಿಕಾರಿಗಳು ಪಡುಕರೆಯ ವೀರಾಂಜನೇಯ ಭಜನ ಮಂದಿರ ಸಮೀಪ ಹಾಗೂ ಶಾಂತಿನಗರಕ್ಕೆ ತೆರಳಿ ಹಾನಿಯಾಗಿರುವ ಪ್ರದೇಶವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ನವೀನ್ ಭಟ್, ತಹಶೀಲ್ದಾರ್ ಪ್ರದೀಪ್ ಕುಡೇìಕರ್, ನಗರಸಭಾ ಸದಸ್ಯ ವಿಜಯ ಕುಂದರ್, ಸುಂದರ್ ಕಲ್ಮಾಡಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.