ಕೋವಿಡ್‌ ತಡೆಯುವಲ್ಲಿ ಸರ್ಕಾರ ವಿಫಲ


Team Udayavani, May 18, 2021, 2:03 PM IST

ಕೋವಿಡ್‌ ತಡೆಯುವಲ್ಲಿ ಸರ್ಕಾರ ವಿಫಲ

ಮಂಡ್ಯ: ಕೋವಿಡ್‌ 2ನೇ ಅಲೆ ಅಪಾಯಕಾರಿ ಎಂದು ತಜ್ಞರು ವರದಿ ನೀಡಿದ್ದರೂ ಇದನ್ನು ಕೇಂದ್ರ-ರಾಜ್ಯ ಸರ್ಕಾರ ನಿರ್ಲಕ್ಷ್ಯಿಸಿದ್ದರಿಂದ ಈ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಎನ್‌. ಚಲುವರಾಯಸ್ವಾಮಿ ದೂರಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಕಾಲದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳದೇದೇಶದ ಜನರನ್ನು ಸಂಕಷ್ಟಕ್ಕೆ ದೂಡಿದ್ದಾರೆ.

ಕೋವಿಡ್‌ ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಿಫಲ ವಾಗಿವೆ ಸೋಮವಾರಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.

ಸಮರೋಪಾದಿಯಲ್ಲಿ ಕಾರ್ಯಕ್ರಮ ಅಗತ್ಯ: ಕೋವಿಡ್‌ ಹಾವಳಿ ನಿಯಂತ್ರಿಸಲು ಯುದ್ಧೋಪಾದಿಯಲ್ಲಿ ಕಾರ್ಯಕಮಗಳನ್ನುಹಮ್ಮಿಕೊಂಡು ನಿವೃತ್ತ ವೈದ್ಯರು ಇತರೆ ವೈದ್ಯ ಸಿಬ್ಬಂದಿಬಳಸಿಕೊಂಡುಅತಿಹೆಚ್ಚುಕೋವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆದು ಕೋವಿಡ್‌

ಸೋಂಕಿತರನ್ನು ಉಪಚರಿಸುವ ಕಾರ್ಯ ಕೈಗೊಳ್ಳದಿರುವಹಿನ್ನೆಲೆಯಲ್ಲಿಇಂದು ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಮುಂದಾದರೂ ಈ ನಿಟಿ®r ‌ಲ್ಲಿ ಸರ್ಕಾರ ಮುತುವರ್ಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಮೋದಿಯಿಂದ ಏನನ್ನು ನಿರೀಕ್ಷಿಸಲು ಸಾಧ್ಯ: ದೇಶದ ಜನತೆಗೆ 30 ಸಾವಿರ ಕೋಟಿ ರೂ.ವ್ಯಯಿಸಿ ಲಸಿಕೆ ನೀಡುವ ಕಾರ್ಯಕ್ರಮವನ್ನುಜಾರಿಗೊಳಿಸಲಾಗದ ಮೋದಿ ಅವರಿಂದದೇಶದ ಜನತೆ ಏನನ್ನೂ ತಾನೇ ನಿರೀಕ್ಷಿಸಲು ಸಾಧ್ಯ?. ರಾಜ್ಯದಲ್ಲಿ ಪ್ರತಿದಿನ ಕೋವಿಡ್‌ಪ್ರಕರಣಗಳು ವೃದ್ದಿಯಾಗುತ್ತಿರುವುದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಉತ್ತಮ ಉದಾಹರಣೆಯಾಗಿದ್ದು, ಈ ಸಂಬಂಧ ಕೇಂದ್ರದ ಮೇಲೆಒತ್ತಡ ತಂದು ಸಾಂದರ್ಭಿಕ ವೈದ್ಯಕೀಯ ಪರಿಕರಗಳನ್ನು ಒದಗಿಸುವಲ್ಲಿ ರಾಜ್ಯದ ಸಂಸದರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

3ನೇ ಅಲೆ ಮೆಟ್ಟಿ ನಿಲ್ಲಲು ಸೂಕ್ತ ಮಾರ್ಗಬೇಕು: 2ನೇ ಅಲೆಗೆ ರಾಜ್ಯದ ಜನತೆ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಮೂರನೇ ಅಲೆ ಆರಂಭವಾದರೆ, ಯಾವ ವಿಷಮ ಪರಿಸ್ಥಿತಿ ಉಂಟಾಗಲಿದೆ ಎಂಬುದನ್ನು ರಾಜ್ಯ ಸರ್ಕಾರ ಹಾಗೂ ಅಧಿಕಾರಿ ವರ್ಗ ಅರಿತುಕೊಳ Ûಬೇಕು. ಮುಂದಿನ ಸವಾಲುಗಳನ್ನು ಮೆಟ್ಟಿನಿಲ್ಲಲು ಸೂಕ್ತ ಮಾರ್ಗೋಪಾಯ ಕಂಡುಕೊಂಡು, ಆಕ್ಸಿಜನ್‌ ಉತ್ಪಾದನೆ, ತೀವ್ರ ನಿಗಾ ಘಟಕ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಬೇಕು. ಸಿಎಂತುರ್ತು ಅಗತ್ಯತೆಗೆ ಹಣ ವ್ಯಯಿಸಬೇಕು ಎಂದರು.

ಮಾಜಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ, ಯುವ ಮುಖಂಡ ಗಣಿಗ ರವಿಕುಮಾರ್‌, ಪಕ್ಷದ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್‌, ಎಸ್‌.ಡಿ.ಜಯರಾಂ, ರುದ್ರಪ್ಪ, ಸಿ.ಎಂ.ದ್ಯಾವಪ್ಪ ಇತರರಿದ್ದರು.

ಆಡಳಿತ ವ್ಯವಸ್ಥೆಕ್ರಿಯಾಶೀಲವಾಗಿಲ್ಲ  :

ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಕ್ರಿಯಾಶೀಲತೆ ಕಂಡು ಬರುತ್ತಿಲ್ಲ. ಸಿಎಂಗಿಂತ ಸಂಪುಟದ ಸಚಿವರುಗಳು ಕ್ರಿಯಾಶೀಲತೆಯಿಂದ ಏಕಧ್ವನಿಯಲ್ಲಿ ಕೆಲಸ ಮಾಡಲು ಮುಂದಾಗುತ್ತಿಲ್ಲ. ಸಚಿವರುಗಳ ನಿರ್ಲಿಪ್ತತೆ ಎದ್ದು ಕಾಣುತ್ತಿದೆ ಎಂದು ಎನ್‌.ಚಲುವರಾಯಸ್ವಾಮಿ ದೂರಿದರು. ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ ಮಧ್ಯೆ ಪ್ರವೇಶಿಸಿ ಸರ್ಕಾರಗಳಿಗೆ ನಿರ್ದೇಶನ ನೀಡಿದರೂ, ವಸ್ತುಸ್ಥಿತಿಯನ್ನು ಸರಿದಾರಿಗೆ ತರುವಲ್ಲಿ ಆಡಳಿತ ವ್ಯವಸ್ಥೆ

ವಿಫಲವಾಗಿದೆ. ಕೇಂದ್ರ ಸಚಿವ ಸದಾನಂದಗೌಡ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅವರ ಸಿ.ಟಿ.ರವಿ ಕುಹುಕದ ಮಾತುಗಳು ಸರಿಯಲ್ಲ. ರಾಜ್ಯದ ಮುಖ್ಯಕಾರ್ಯದರ್ಶಿಗಳು ಅಸಹಾಯಕತೆ ವ್ಯಕ್ತಪಡಿಸುವ ಬದಲು ರಾಜ್ಯಾಂಗದತ್ತ ಅಧಿಕಾರವನ್ನು ಬಳಸಿಕೊಂಡು ಕೋವಿಡ್‌ ನಿಯಂತ್ರಣಕ್ಕೆ ಅಗತ್ಯ ಮಾರ್ಗಸೂಚಿ ಹಾಗೂ ಪರಿಹಾರಕಂಡುಹಿಡಿಯಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

13-

Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ

12-bng

Bengaluru: ಬೈಕ್‌ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.