ಸೋಂಕಿನಿಂದ ಚೇತರಿಸಿದವರಿಗೆ 9 ತಿಂಗಳ ಬಳಿಕ ಲಸಿಕೆ ಕೊಡಿ : ತಾಂತ್ರಿಕ ಸಲಹಾ ಸಮಿತಿ ಶಿಫಾರಸು
Team Udayavani, May 18, 2021, 8:33 PM IST
ನವದೆಹಲಿ: ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರು 6ರಿಂದ 9 ತಿಂಗಳ ಬಳಿಕ ಲಸಿಕೆ ಪಡೆದುಕೊಂಡರೆ ಸಾಕು. ಹೀಗೆಂದು ಲಸಿಕೆ ಬಗ್ಗೆ ಸಲಹೆ ನೀಡುವ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ (ಎನ್ಟಿಎಜಿಐ) ಕೇಂದ್ರ ಸರ್ಕಾರಕ್ಕೆ ಮಂಗಳವಾರ ಶಿಫಾರಸು ಮಾಡಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಶಿಫಾರಸು ಅಂಗೀಕರಿಸಬೇಕೇ ಬೇಡವೇ ಎಂಬ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ. ಇತ್ತೀಚೆಗಷ್ಟೇ ಎನ್ಟಿಎಜಿಐ, ಗುಣಮುಖರಾದವರು 6 ತಿಂಗಳ ಬಳಿಕ ಲಸಿಕೆ ಪಡೆದರೆ ಸಾಕು ಎಂದಿತ್ತು. ಇದೇ ವೇಳೆ, ಕೊವಿಶೀಲ್ಡ್ ಲಸಿಕೆ ಹಾಕಿಸಿಕೊಂಡವರಿಗೆ 2ನೇ ಡೋಸ್ ಪಡೆಯಲಿರುವ ಸಮಯವನ್ನು 12-16 ವಾರಗಳ ಕಾಲ ವಿಸ್ತರಿಸಲಾಗಿದೆ. ವಿವಿಧ ದೇಶಗಳಲ್ಲಿನ ಲಸಿಕೆ ನೀಡಿಕೆಯ ನಂತರ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸಮಿತಿ ಈ ಶಿಫಾರಸು ಮಾಡಿದೆ.
ಇದನ್ನೂ ಓದಿ :ತನಗೆಂದು ತಂದ ಊಟವನ್ನು ಭಿಕ್ಷೆ ಬೇಡುತ್ತಿದ್ದ ಮಕ್ಕಳಿಗೆ ನೀಡಿ ಮಾನವೀಯತೆ ಮೆರೆದ ಕಾನ್ಸ್ಟೇಬಲ್
ಇದರಿಂದಾಗಿ ವ್ಯಕ್ತಿಗಳಲ್ಲಿ ಹೆಚ್ಚಿನ ಸಮಯ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿ, ಆ ಮಟ್ಟ ಕಾಯ್ದುಕೊಳ್ಳಲು ನೆರವಾಗುತ್ತದೆ ಎಂದು ಸಮಿತಿಯ ಸದಸ್ಯರೊಬ್ಬರು ತಿಳಿಸಿದ್ದಾರೆ ಎಂದು “ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.