ಸ್ವಪ್ರೇರಣೆಯಿಂದ ಸೀಲ್‌ಡೌನ್ ಶುರು
ಗ್ರಾಮಗಳಿಗೂ ವ್ಯಾಪಿಸಿರುವ ಕೊರೊನಾ* ತಮ್ಮ ಗ್ರಾಮಗಳಲ್ಲಿ ಸೋಂಕು ಹಬ್ಬದಂತೆ ತಡೆಯಲು ಗ್ರಾಮಸ್ಥರದ್ದೇ ನಿರ್ಧಾರ
Team Udayavani, May 19, 2021, 3:16 PM IST
ಬೈಲಹೊಂಗಲ: ತಾಲೂಕಿನ ವಕ್ಕುಂದ ಗ್ರಾಮದಲ್ಲಿ ಕೊರೊನಾ ಹೆಚ್ಚುತ್ತಿರುವುದರಿಂದ ಮಂಗಳವಾರ ದಿಂದ ಒಂದು ವಾರ ಸಂಪೂರ್ಣ ಸೀಲ್ ಡೌನ್ ಮಾಡಲಾಗುವುದು ಎಂದು ಪಿಡಿಓ ವಿಜಯಲಕ್ಷ್ಮಿ ಆನಿಗೋಳ ಹೇಳಿದರು.
ಅವರು ಗ್ರಾಮದಲ್ಲಿ ನಡೆದ ಕೋವಿಡ್ ನಿಯಂತ್ರಣ ಗ್ರಾಮಸಭೆಯಲ್ಲಿ ಮಾತನಾಡಿ, ಗ್ರಾಪಂ ಈಗಾಗಲೇ ಅಗತ್ಯ ಕ್ರಮಗಳನ್ನು ಪಾಲಿಸುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡಿ ಗ್ರಾಮವನ್ನು ಕೊರೊನಾ ಮುಕ್ತವನ್ನಾಗಿ ಮಾಡಲು ಸಹಕರಿಸಬೇಕು ಎಂದರು.
ಪಿಎಸಐ ಈರಪ್ಪ ರಿತ್ತಿ ಮಾತನಾಡಿ, ಗ್ರಾಮದಲ್ಲಿ 17 ಜನ ಸೋಂಕಿತರು ಇರುವುದರಿಂದ ಗ್ರಾಮಸ್ಥರ ರಕ್ಷಣಾತ್ಮಕ ಉದ್ದೇಶದಿಂದ ಸಾರ್ವಜನಿಕರು ಇದಕ್ಕೆ ಸ್ಪಂದಿಸಿ ಸಹಕಾರ ನೀಡಬೇಕು ಎಂದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಗ್ರಾಮದಲ್ಲಿ ಹೋಂ ಕ್ವಾರಂಟೆ„ನ್ ಆಗುವುದು ಸಾಧ್ಯವಿಲ್ಲ. ಗ್ರಾಮದಲ್ಲಿ ಚಿಕ್ಕ ಚಿಕ್ಕ ಮನೆಗಳು ಇರುವುದರಿಂದ ಪ್ರತ್ಯೇಕ ಕೊಠಡಿಗಳ ಸೌಲಭ್ಯ ಅತಿ ವಿರಳ. ಹಾಗಾಗಿ ಗ್ರಾಮದಲ್ಲಿ ಎರಡು ಹಾಸ್ಟೆಲ್‌ಗಳಿದ್ದು, ಅವುಗಳಲ್ಲಿ ಒಂದನ್ನು ಈ ಪ್ರಕ್ರಿಯೆಗೆ ಬಳಸಿಕೊಳ್ಳಲು ಹೇಳಿದರು.
ಗ್ರಾ.ಪಂ ಅಧ್ಯಕ್ಷೆ ಸವಿತಾ ಹೂವಿನ, ಸಿ.ಕೆ. ಮೆಕ್ಕೆದ, ಬಸನಗೌಡ ಪೊಲೀಸಪಾಟೀಲ, ಪರ್ವತಗೌಡ ಪಾಟೀಲ, ಗಜದಂಡ ಸುತಗಟ್ಟಿ, ರಾಮನಗೌಡ ಪಾಟೀಲ, ಅಶೋಕ ಭದ್ರಶೆಟ್ಟಿ, ನಾಗನಗೌಡ ಸಂಕಪ್ಪನವರ, ಸಂತೋಷ ಹಡಪದ, ಈರಣಗೌಡ ಶೀಲವಂತರ, ಶಂಕರ ಢವಳೆ ಮಲ್ಲಪ್ಪ ಢವಳೆ, ಅಂಗಡಿಗಳ ಮಾಲೀಕರು, ಗ್ರಾಪಂ ಸದಸ್ಯರು, ಅಂಗನವಾಡಿ-, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.