ಒಂದು ಕೋಟಿ ಕೊಲ್ಚಿಸಿನ್ ಟ್ಯಾಬ್ಲೆಟ್ ಪೂರೈಕೆಗೆ ಕೇಂದ್ರದ ಒಪ್ಪಿಗೆ
Team Udayavani, May 19, 2021, 5:52 PM IST
ಬೆಂಗಳೂರು: ಕೋವಿಡ್ ಸೋಂಕಿತರಿಗೆ ಅತ್ಯಗತ್ಯವಾಗಿ ಬೇಕಾಗಿರುವ ಒಂದು ಕೋಟಿ ಕೊಲ್ಚಿಸಿನ್ ಟ್ಯಾಬ್ಲೆಟ್ಗಳನ್ನು ಕೂಡಲೇ ಪೂರೈಸಬೇಕು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಡಿದ್ದ ಮನವಿಗೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ರಾಜ್ಯದಲ್ಲಿ 5.17 ಲಕ್ಷದಷ್ಟು ಕೋವಿಡ್ ಸೋಂಕಿತರಿದ್ದು, ಒಂದು ಕೋಟಿಯಷ್ಟು ಕೊಲ್ಚಿಸಿನ್ ಟ್ಯಾಬ್ಲೆಟ್ಗಳನ್ನು ರಾಜ್ಯಕ್ಕೆ ಪೂರೈಕೆ ಮಾಡಬೇಕು ಎಂದು ಡಿಸಿಎಂ ಅವರು ಕೇಂದ್ರದ ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಈ ಬಗ್ಗೆ ಕೂಡಲೇ ಕ್ರಮ ವಹಿಸಿರುವ ಕೇಂದ್ರ ಸಚಿವರು, ಕೊಲ್ಚಿಸಿನ್ ಟ್ಯಾಬ್ಲೆಟ್ ತಯಾರಿಸುವ ಜೈದಸ್ ಕ್ಯಾಡಿಲ್ಲಾ ಕಂಪನಿಯ ಅಧ್ಯಕ್ಷ ಪಂಕಜ್ ಪಟೇಲ್ ಅವರ ಜತೆ ಮಾತುಕತೆ ನಡೆಸಿದ್ದಾರೆ. ರಾಜ್ಯದ ಬೇಡಿಕೆಯಂತೆ ಅಷ್ಟೂ ಪ್ರಮಾಣದ ಕೊಲ್ಚಿಸಿನ್ ಟ್ಯಾಬ್ಲೆಟ್ಗಳನ್ನು ಪೂರೈಸಲು ಕಂಪನಿ ಒಪ್ಪಿಕೊಂಡಿದ್ದು, ರಾಜ್ಯದ ಆರೋಗ್ಯ ಇಲಾಖೆ ಅಧಿಕಾರಿಗಳು ಖರೀದಿ ಆದೇಶ ಕೊಟ್ಟ ಕೂಡಲೇ ಟ್ಯಾಬ್ಲೆಟ್ಗಳು ರಾಜ್ಯಕ್ಕೆ ಪೂರೈಕೆಯಾಗುತ್ತವೆ ಎಂದು ಕೇಂದ್ರ ಸಚಿವರು ತಮ್ಮ ಪತ್ರಕ್ಕೆ ಉತ್ತರ ಬರೆದು ತಿಳಿಸಿರುವುದಾಗಿ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.