ಕರಿಶಿಲೀಂಧ್ರಕ್ಕೆ ಬಸವನಾಡಲ್ಲಿ ಎರಡು ಬಲಿ
Team Udayavani, May 19, 2021, 6:35 PM IST
ವಿಜಯಪುರ: ಕೋವಿಡ್ ಎರಡನೇ ಅಲೆಯ ಅಬ್ಬರದ ಮಧ್ಯೆ ಕಾಣಿಸಿಕೊಂಡಿರುವ ಕರಿ ಶಿಲೀಂಧ್ರ ರೋಗಕ್ಕೆ ವಿಜಯಪುರ ಜಿಲ್ಲೆಯಲ್ಲಿ ಮೊದಲ ಬಾರಿಗೆ ಎರಡು ಪ್ರಕರಣಗಳಲ್ಲಿ ಸಾವು ಸಂಭವಿಸಿದ್ದು, ಒಂದು ಪ್ರಕರಣದಲ್ಲಿ ಪ್ರಯೋಗಾಲಯದ ವರದಿ ದೃಢಪಟ್ಟಿಲ್ಲ. ಆದರೆ ಇದರೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗ ಜೀವ ಬಲಿ ಪಡೆದ ಖಾತೆ ಆರಂಭಿಸಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಜಿಲ್ಲೆಯ ಮುದ್ದೇಬಿಹಾಳ ತಾಲೂಕ ಬಿದರಕುಂದಿ ಗ್ರಾಮದ ವ್ಯಕ್ತಿ ಕರಿ ಶಿಲೀಂಧ್ರ ರೋಗಕ್ಕೆ ಬಲಿಯಾಗಿದ್ದಾನೆ. ವಿಜಯಪುರ ಜಿಲ್ಲಾಡಳಿತ ಧಾರವಾಡ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಸಾವಿನ ನಿಖರ ಕಾರಣ ಖಚಿತಪಡಿಸಿಕೊಳ್ಳಲು ಮುಂದಾಗಿದೆ. ನಾವು ಹುಬ್ಬಳ್ಳಿಯ ಕಿಮ್ಸ್‍ನಿಂದ ಮಾಹಿತಿ ಪಡೆಯಲು ಪ್ರಯತ್ನಿಸಿದ್ದೇವೆ. ಆದರೆ ಅವರೊಂದಿಗೆ ಸಂಪರ್ಕ ಸಾಧ್ಯವಾಗುತ್ತಿಲ್ಲ. ಈ ಕುರಿತು ನಿಖರ ಮಾಹಿತಿ ನೀಡಲು ಸಮಯಾವಕಾಶ ಕೇಳುತ್ತಿದ್ದಾರೆ. ಅಲ್ಲದೇ ನಿಯಮದ ಪ್ರಕಾರ ಸದರಿ ಪ್ರಕರಣದ ಕುರಿತು ಕಿಮ್ಸ್ ಆಸ್ಪತ್ರೆಯವರು ಧಾರವಾಡ ಜಿಲ್ಲಾಡಳಿತಕ್ಕೆ ಈ ಕುರಿತು ನಿಖರ ಮಾಹಿತಿ ನೀಡಲಿದ್ದಾರೆ ಎಂದು ವಿಜಯಪುರ ಜಿಲ್ಲಾಡಳಿತ ಹೇಳಿದೆ.
ಸದರಿ ಕರಿ ಶಿಲೀಂಧ್ರ ರೋಗಕ್ಕೆ ಬಲಿಯಾದ ವ್ಯಕ್ತಿಯನ್ನು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬೀದರಕುಂದಿ ಗ್ರಾಮಕ್ಕೆ ಸೇರಿದವನು ಎಂಬುದು ಮಾತ್ರ ಸ್ಪಷ್ಟವಾಗಿದೆ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ಸ್ಪಷ್ಟಪಡಿಸಿದ್ದಾರೆ.
ಈ ಮಧ್ಯೆ ಕಪ್ಪು ಶಿಲೀಂಧ್ರ ಪ್ರಕರಣದ ರೋಗ ಶಂಕಿತ ವ್ಯಕ್ತಿ ಪ್ರಕರಣ ಮೇ 16 ರಂದು ಬಿಎಲ್‍ಡಿಇ ಆಸ್ಪತ್ರೆಗೆ ದಾಖಲಾಗಿದ್ದು, ಮೇ 17 ರಂದು ನಿಧನರಾಗಿದ್ದಾರೆ. ಆದರೆ ಬಿಎಲ್‍ಡಿಇ ಪ್ರಕಾರ, ಇದು ಪ್ರಕರಣವನ್ನು ದೃಢೀಕರಣವಾಗಿಲ್ಲ. ಪ್ರಯೋಗಾಲಯದಲ್ಲಿ ಈ ಕುರಿತು ಪರೀಕ್ಷೆ ನಡೆಸಿಲ್ಲ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.