ಕೋವಿಡ್ 19 : ಬಿಹಾರ್ ನ ‘ಹಿಟ್ ಕೋವಿಡ್ ಆ್ಯಪ್’ ಗೆ ಮೋದಿ ಮೆಚ್ಚುಗೆ

ದೇಶಾದ್ಯಂತ ಕೋವಿಡ್ ನಿಯಂತ್ರಣಕ್ಕೆ ಈ ಆ್ಯಪ್ ಅಸ್ತ್ರ..?

Team Udayavani, May 19, 2021, 7:19 PM IST

PM Modi hails Bihar’s HIT COVID app, seeks details for countrywide use

ನವ ದೆಹಲಿ : ಹೋಮ್ ಐಸೊಲೇಶನ್ ನಲ್ಲಿರುವ ಕೋವಿಡ್ ಸೋಂಕಿತರನ್ನು ಪತ್ತೆಹಚ್ಚಲು ಬಿಹಾರ ಸರ್ಕಾರ ಅಭಿವೃದ್ಧಿಪಡಿಸಿದ ಹಿಟ್ ಕೋವಿಡ್ ಆ್ಯಪ್ (HIT COVID App) ಬಗ್ಗೆ ತಿಳಿದು ಪ್ರಧಾನಿ ನರೇಂದ್ರ ಮೋದಿ ಪ್ರಭಾವಿತರಾಗಿದ್ದಾರೆ.

ಹೋಮ್ ಐಸೊಲೇಸನ್ ಟ್ರ್ಯಾಕಿಂಗ್ (HIT) ಆ್ಯಪ್ ಬಿಹಾರ್ ನಲ್ಲಿ ಸೋಮವಾರ(ಮೇ. 17)ದಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಡುಗಡೆ ಮಾಡಿದರು. ಸದ್ಯ ಬಿಹಾರ್ ನ  ಎಲ್ಲಾ ಜಿಲ್ಲೆಗಳಲ್ಲಿ ಈ ಆ್ಯಪ್ ನ ಬಳಕೆಯಾಗುತ್ತಿದೆ.

ಒಂಬತ್ತು ರಾಜ್ಯಗಳ ಆಯ್ದ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವೀಡಿಯೋ ಕಾನ್ಫರೆನ್ಸ್ ನ ಮೂಲಕ ಕೋವಿಡ್ ಪರಿಸ್ಥಿತಿಯ ಬಗ್ಗೆ ಸಮಾಲೋಚನೆ ಮಾಡುವ ಸಂದರ್ಭದಲ್ಲಿ ಪಟ್ನಾ ಜಿಲ್ಲಾಧಿಕಾರಿ ಚಂದ್ರ ಶೇಖರ್ ಸಿಂಗ್  ಈ ಆ್ಯಪ್ ಬಗ್ಗೆ ಮಾಹಿತಿ ನೀಡಿದ್ದು, ಪ್ರಧಾನಿ ಈ ಆ್ಯಪ್ ಬಗ್ಗೆ ತಿಳಿದು ಪ್ರಭಾವಿತರಾಗಿದ್ದಾರೆ.

ಇದನ್ನೂ ಓದಿ : ಕೋವಿಡ್ ನಿಂದ ಗುಣಮುಖರಾದವರಿಗೆ ಮೂರು ತಿಂಗಳ ಬಳಿಕ ಲಸಿಕೆ ಸೂಕ್ತ: ಕೇಂದ್ರ

ಈ ಬಗ್ಗೆ ಪ್ರಭಾವಿತರಾದ ಪ್ರಧಾನಿ, ಆ ಆ್ಯಪ್ ನ ಬಳಕೆ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಆಗುವ ಉದ್ದೇಶದಿಂದ ಅದರ ಎಲ್ಲಾ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ನೀಡುವಂತೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನು, ಬಿಹಾರ್ ನ ಆರೋಗ್ಯ ಸಚಿವಾಲಯದ ಮುಖ್ಯ ಕಾರ್ಯದರ್ಶಿ ಪ್ರತ್ಯಯಾ ಅಮೃತ್ ಸುದ್ದಿ ಸಂಸ್ಥೆ ಪಿಟಿಐ ನೊಂದಿಗೆ ಮಾತನಾಡಿ,  ಪ್ರಧಾನಿಯವರ ಸೂಚನೆಯಂತೆ ಆ್ಯಪ್ ನ ಮಾಹಿತಿಯನ್ನು ಕೇಂದ್ರ ಸಚಿವಾಲಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಆ್ಯಪ್ ನ ಸಹಾಯದಿಂದ, ಆರೋಗ್ಯ ಕಾರ್ಯಕರ್ತರು ಪ್ರತಿದಿನ ಸೋಂಕಿತರ ವಿಚಾರಣೆಗೆ ಸುಲಭವಾಗುತ್ತದೆ. ಅವರ ದೈಹಿಕ ತಾಪಮಾನ ಮತ್ತು ಆಮ್ಲಜನಕದ ಮಟ್ಟವನ್ನು ಪರೀಕ್ಷಿಸಿದ ನಂತರ ಅಪ್ಲಿಕೇಶನ್‌ ನಲ್ಲಿ ಡಾಟಾ ದಾಖಲು ಮಾಡಲಗುತ್ತದೆ.

ಈ ಆ್ಯಪ್ ಮೂಲಕ ದಾಖಲಾದ ಡಾಟಾವನ್ನು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತದೆ. ಸೋಂಕಿತನ ಆಮ್ಲಜನಕದ ಮಟ್ಟವು  ಶೇ. 94 ಕ್ಕಿಂತ ಕಡಿಮೆಯಿದ್ದರೆ, ಚಿಕಿತ್ಸೆಗಾಗಿ ಅವರನ್ನು ಹತ್ತಿರದ ಮೀಸಲಾದ ಕೋವಿಡ್ ಆರೋಗ್ಯ ಕೇಂದ್ರಗಳಿಗೆ ದಾಖಲಿಸಲಾಗುತ್ತದೆ.

ಬಿಹಾರ್  ಸರ್ಕಾರದ ಆರೋಗ್ಯ ಇಲಾಖೆಯ ಮಾರ್ಗದರ್ಶನದಲ್ಲಿ ಬಿಹಾರ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ (BELTRON) ಎಚ್‌ ಐ ಟಿ ಆ್ಯಪ್ ಅಭಿವೃದ್ಧಿಪಡಿಸಿದೆ.

ಪ್ರಾಯೋಗಿಕವಾಗಿ ಈ ಅಪ್ಲಿಕೇಶನ್ ನನ್ನು ಆರಂಭದಲ್ಲಿ ಐದು ಜಿಲ್ಲೆಗಳಲ್ಲಿ ಪ್ರಾರಂಭಿಸಲಾಯಿತು. ಮತ್ತು ಅದರ ಯಶಸ್ಸನ್ನು ಆಧಾರದ ಮೇಲೆ ಈಗ ಬಿಹಾರ್  ರಾಜ್ಯಾದ್ಯಂತ ಬಳಸಲಾಗುತ್ತಿದೆ.

ಇದನ್ನೂ ಓದಿ : ಜಾಗ್ವಾರ್ ಲ್ಯಾಂಡ್ ರೋವರ್ : ಆ್ಯಂಟಿ ವೈರಸ್ ತಂತ್ರಜ್ಞಾನ ಕೋವಿಡ್ ವಿರುದ್ಧ ಪರಿಣಾಮಕಾರಿ !

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.