ಕೊರೊನಾ ತಡೆಗೆ ಮಹತ್ವ ನೀಡಿ: ಸಚಿವ ಅಂಗಾರ
Team Udayavani, May 19, 2021, 9:13 PM IST
ತರೀಕೆರೆ: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಅಧಿ ಕಾರಿಗಳು ಮತ್ತು ವೈದ್ಯಾ ಧಿಕಾರಿಗಳು ಹೆಚ್ಚಿನ ಮಹತ್ವ ನೀಡಬೇಕು. ಕೆಳಮಟ್ಟದ ಅ ಧಿಕಾರಿಗಳು ಗಮನಕ್ಕೆ ತರುವ ಸಮಸ್ಯೆಗಳ ಬಗ್ಗೆ ಉತ್ಪ್ರೇಕ್ಷೆ ಮಾಡದೆ ತಕ್ಷಣ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಮೇಲಧಿ ಕಾರಿಗಳು ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.
ತಾಪಂ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿ ಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಗ್ರಾಮಾಂತರ ಪ್ರದೇಶಗಳಲ್ಲಿ ವಲಸೆ ಬಂದವರಿಂದ ಸೋಂಕು ಹೆಚ್ಚಾಗಿದ್ದು ಅದನ್ನು ತಹಬದಿಗೆ ತರಬೇಕಾಗಿದೆ. ಹಿಂದಿನ ಬಾರಿ ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಭಯದ ವಾತಾವರಣ ಮೂಡಿತ್ತು. ಈಗ ಆ ಭಯವಿಲ್ಲದಂತಾಗಿದೆ.
ಕೊರೊನಾ ಸೋಂಕನ್ನು ಪತ್ತೆ ಹಚ್ಚಲು ಹಳ್ಳಿಗಳಲ್ಲಿ ಮನೆ- ಮನೆಗೆ ತೆರಳಿ ಟೆಸ್ಟ್‌ಗಳನ್ನು ಮಾಡಬೇಕು ಮತ್ತು ಕೋವಿಡ್ ಸೋಂಕಿನ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕೋವಿಡ್ ಸೋಂಕಿತರನ್ನು ಹೋಮ್ ಕ್ವಾರಂಟೈನ್ ಮಾಡುವ ಬದಲು ಆಸ್ಪತ್ರೆ ಅಥವಾ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಬೇಕು.
ಅದಕ್ಕಾಗಿ ಸರಕಾರಿ ಕಟ್ಟಡಗಳನ್ನು ಬಳಸಿಕೊಳ್ಳಬೇಕು ಎಂದು ಅ ಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮಾಂತರ ಪ್ರದೇಶಗಳಲ್ಲಿ ಕೊರೊನಾ ಪಾಸಿಟಿವ್ ಬಂದವರು ಅನಗತ್ಯ ಓಡಾಟ ನಡೆಸುತ್ತಿದ್ದಾರೆ ಎಂಬ ದೂರುಗಳಿವೆ. ಸೋಂಕಿತರು ಅಗತ್ಯವಿಲ್ಲದೆ ಓಡಾಟ ನಡೆಸಿದಲ್ಲಿ ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಎಫ್.ಐ.ಆರ್. ದಾಖಲು ಮಾಡಬೇಕು ಎಂದರು.
ವಿಧಾನ ಪರಿಷತ್‌ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ಗಳು ಇದ್ದರೂ ಸಹ ಅದರ ಬಳಕೆ ಮಾಡುತ್ತಿಲ್ಲ. ಆಸ್ಪತ್ರೆಯಲ್ಲಿ ಎಷ್ಟು ವೆಂಟಿಲೇಟರ್‌ಗಳಿವೆ ಎಂದು ವೈದ್ಯಾ ಧಿಕಾರಿಯನ್ನು ಪ್ರಶ್ನಿಸಿದರು. ಆಗ ಮಧ್ಯ ಪ್ರವೇಶಿಸಿ ಮಾತನಾಡಿದ ಸಚಿವರು ಒಂದು ವೆಂಟಿಲೇಟರ್ ಬಳಕೆ ಮಾಡಲು 12 ಆಮ್ಲಜನಕದ ಸಿಲಿಂಡರ್ ಅಗತ್ಯವಿದೆ. ನಾವು ಈಗಾಗಲೇ ಆಕ್ಸಿಜನ್ ಕೊರತೆ ಎದುರಿಸುತ್ತಿದ್ದೇವೆ ಮತ್ತು ತಂತ್ರಜ್ಞರ ಮತ್ತು ಶುಶ್ರೂಷಕರ ಅಗತ್ಯವಿದೆ ಎಂದರು.
ಸಭೆಯಲ್ಲಿ ಸಭಾಪತಿ ಎಂ.ಕೆ. ಪ್ರಾಣೇಶ್, ಶಾಸಕ ಡಿ.ಎಸ್. ಸುರೇಶ್, ಉಪ ವಿಭಾಗಾ ಧಿಕಾರಿ ಸಿದ್ದಲಿಂಗ ರೆಡ್ಡಿ, ಡಿ.ವೈ. ಎಸ್.ಪಿ. ಏಗನಗೌಡರ್, ತಹಶೀಲ್ದಾರ್ ನಂದಕುಮಾರ್, ಅಜ್ಜಂಪುರ ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.