![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 19, 2021, 10:27 PM IST
ಚಿಕ್ಕಬಳ್ಳಾಪುರ : ಅಧಿಕಾರ ದುರುಪಯೋಗ ಮತ್ತು ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಂಗಳೂರು ವಿಭಾಗೀಯ ಜಂಟಿ ನಿರ್ದೇಶಕ ಡಾ.ಮುರಳಿಕೃಷ್ಣ ಅವರ ವಿರುಧ್ಧ ಶಿಸ್ತುಕ್ರಮ ಬಾಕಿಯಿರಿಸಿ ಅವರನ್ನು ತಕ್ಷಣ ಸೇವೆಯಿಂದ ಅಮಾನತ್ತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೇ12 ಮತ್ತು 13 ರಂದು ಶಿಡ್ಲಘಟ್ಟ ಮತ್ತು ಬಾಗೇಪಲ್ಲಿ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದ ವೇಳೆಯಲ್ಲಿ ಸಹಾಯಕ ವೈದ್ಯಾಧಿಕಾರಿಗಳ ಒತ್ತಡ ಹೇರಿ ತಲಾ ಒಂದು ತಾಲೂಕಿನಿಂದ ರೆಮಿಡಿಸಿವರ್ ಔಷಧಿಯನ್ನು ಅನಧಿಕೃತವಾಗಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ ಇದರಲ್ಲದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಹಣ ಮತ್ತು 05 ವೆಂಟಿಲೇಟರ್‍ಗಳನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ ಚಿಕ್ಕಬಳ್ಳಾಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅವರಿಂದ ಹಣ ವಸೂಲಿ ಮಾಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಸೂಚನೆಯನ್ನು ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಂಗಳೂರು ವಿಭಾಗೀಯ ಜಂಟಿ ನಿರ್ದೇಶಕ ಡಾ.ಮುರಳಿಕೃಷ್ಣ ಅವರ ವಿರುಧ್ಧ ಶಿಸ್ತುಕ್ರಮ ಬಾಕಿಯಿರಿಸಿ ಅವರನ್ನು ತಕ್ಷಣ ಸೇವೆಯಿಂದ ಅಮಾನತ್ತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ :ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ, ನಾಲ್ವರು ಪರಾರಿ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಶ್ರಮಿಸುತ್ತಿರುವ ಅಧಿಕಾರಿಗಳ ಮೇಲೆ ಒತ್ತಡಹೇರಿ ಔಷಧಿಗಳು ಹಾಗೂ ಉಪಕರಣಗಳನ್ನು ಅನಧಿಕೃತವಾಗಿ ಪಡೆದುಕೊಳ್ಳಲು ಇಚ್ಛಿಸಿರುವುದು ಅಧಿಕಾರ ದುರುಪಯೋಗ ಮತ್ತು ಕರ್ತವ್ಯಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕರ ವಿರುಧ್ಧ ಶಿಸ್ತುಕ್ರಮ ಬಾಕಿಯಿರಿಸಿ ಸೇವೆಯಿಂದ ಅಮಾನತ್ತುಗೊಳಿಸಬೇಕೆಂದು ಆರೋಗ್ಯ ಸಚಿವರ ಸೂಚನೆಯ ಮೇರೆಗೆ ಜಂಟಿ ನಿರ್ದೇಶಕರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.