ಶ್ರಮಿಕ ವರ್ಗಕ್ಕೆ ಕೋವಿಡ್ ಪರಿಹಾರ ಪ್ಯಾಕೇಜ್‌ ಸ್ವಾಗತಾರ್ಹ ಕ್ರಮ

Team Udayavani, May 20, 2021, 7:05 AM IST

ಶ್ರಮಿಕ ವರ್ಗಕ್ಕೆ ಕೋವಿಡ್ ಪರಿಹಾರ ಪ್ಯಾಕೇಜ್‌ ಸ್ವಾಗತಾರ್ಹ ಕ್ರಮ

ಕೊರೊನಾ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಕರ್ಫ್ಯೂ ಜಾರಿಯಿಂದ ಸಂಕಷ್ಟಕ್ಕೆ ಸಿಲುಕಿರುವ ದಿನದ ದುಡಿಮೆ ನಂಬಿ ಜೀವನ ನಡೆಸುತ್ತಿರುವವರು, ಕೈಗೆ ಬೆಳೆ ಬಂದರೂ ಮಾರಾಟವಾಗದೆ ನಷ್ಟ ಅನುಭವಿಸಿದ ರೈತರು ಹಾಗೂ ಕೆಲಸ ಇಲ್ಲದೆ ಕಷ್ಟ ಅನುಭವಿಸುತ್ತಿರುವ ಆಟೋ, ಟ್ಯಾಕ್ಸಿ ಚಾಲಕರು, ಕುಶಲ ಕರ್ಮಿಗಳು, ಬೀದಿ ವ್ಯಾಪಾರಿಗಳು ಸೇರಿದಂತೆ ಶ್ರಮಿಕ ವರ್ಗಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕೊನೆಗೂ ಒಟ್ಟಾರೆ 1,111 ಕೋಟಿ ರೂ. ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದಾರೆ.

ದುಡಿಮೆ ನಿಂತು ಸಂಕಷ್ಟ ಎದುರಾದಾಗ ಕಷ್ಟದಲ್ಲಿರುವ ವರ್ಗದ ನೆರವಿಗೆ ಬರುವುದು ಯಾವುದೇ ಸರಕಾರದ ಕರ್ತವ್ಯ ಕೂಡ. ಆ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾರದ ಹಿಂದೆಯೇ ಈ ಬಗ್ಗೆ ಆರ್ಥಿಕ ಇಲಾಖೆ ಅಧಿಕಾರಿಗಳು ಹಾಗೂ ಸಂಪುಟದ ಸಹೋದ್ಯೋಗಿಗಳ ಜತೆ ಚರ್ಚಿಸಿದ್ದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತಿತರ ವಿಚಾರಗಳ ಬಗ್ಗೆ ಅಧ್ಯಯನ ನಡೆಸಿ ಅಂತಿಮವಾಗಿ ಪ್ಯಾಕೇಜ್‌ ಘೋಷಿಸಿದ್ದಾರೆ. ಇದು ಸ್ವಾಗತಾರ್ಹ ಕ್ರಮ. ನೆರೆ ರಾಜ್ಯಗಳಲ್ಲಿ ಈಗಾಗಲೇ ಪ್ಯಾಕೇಜ್‌ ಘೋಷಿಸಿದ್ದರಿಂದ ವಿಪಕ್ಷಗಳು ಸಹ ನಿತ್ಯ ಪ್ಯಾಕೇಜ್‌ ಘೋಷಣೆಗಾಗಿ ಸರಕಾರದ ಮೇಲೆ ಒತ್ತಡ ಹಾಕುತ್ತಲೇ ಇದ್ದವು. ಬಡವರ್ಗವೂ ಪ್ಯಾಕೇಜ್‌ನ ನಿರೀಕ್ಷೆಯಲ್ಲಿತ್ತು.

ಈಗಿನ ಮಟ್ಟಕ್ಕೆ ಹೇಳುವುದಾದರೆ ರಾಜ್ಯ ಸರಕಾರ ಪ್ಯಾಕೇಜ್‌ ಮೂಲಕ ಜನರಿಗೆ ಸ್ಪಂದಿಸುವ ಕೆಲಸ ಮಾಡಿದೆ. ಇತ್ತೀಚೆಗೆ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ಕಾರ್ಡ್‌ ಪಡೆಯದವರಿಗೂ ಮಾಸಿಕ 10 ಕೆ.ಜಿ. ಅಕ್ಕಿ ನೀಡುವ ತೀರ್ಮಾನ ಕೈಗೊಂಡಿತ್ತು. ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೂರು ಹೊತ್ತು ಉಚಿತ ಊಟ ಸಹ ನೀಡಿತ್ತು. ಜತೆಗೆ ಕೇಂದ್ರ ಸರಕಾರವು ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆಯಡಿ ಎರಡು ತಿಂಗಳು ಪ್ರತೀ ಕುಟುಂಬಕ್ಕೆ 10 ಕೆ.ಜಿ. ಅಕ್ಕಿ ನೀಡಲು ತೀರ್ಮಾ­ನಿಸಿತ್ತು. ಇವೆಲ್ಲವೂ ಬಡವರ್ಗ ಸ್ವಲ್ಪ ಉಸಿರಾಡುವಂತೆ ಮಾಡಿತ್ತು.

ಇದೀಗ ಹೂವು, ಹಣ್ಣು, ತರಕಾರಿ ಬೆಳೆದು ನಷ್ಟ ಮಾಡಿಕೊಂಡಿರುವ ರೈತರಿಗೆ ಹೆಕ್ಟೇರ್‌ಗೆ 10 ಸಾವಿರ ರೂ., ಆಟೋ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್‌ ಚಾಲಕರಿಗೆ ಹಾಗೂ ಕಟ್ಟಡ ಕಾರ್ಮಿಕರಿಗೆ 3 ಸಾವಿರ ರೂ., ಕೌÒರಿಕರು, ಅಗಸರು, ಟೈಲರ್‌, ಹಮಾಲಿ, ಕುಂಬಾರರು, ಅಕ್ಕ ಸಾಲಿಗರು, ಭಟ್ಟಿ ಕಾರ್ಮಿಕರು, ಮೆಕ್ಯಾನಿಕ್‌, ಕಮ್ಮಾರ, ಗೃಹ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳಿಗೆ 2 ಸಾವಿರ ರೂ. ಅನಂತರ ಆರ್ಥಿಕ ಪ್ಯಾಕೇಜ್‌ ಘೋಷಿಸಿರುವುದರಿಂದ 8 ಲಕ್ಷ ಕುಟುಂಬಗಳಿಗೆ ನೆರವಾಗಲಿದೆ. ಇದರ ಜತೆಗೆ ಕಲಾವಿದರು ಹಾಗೂ ಕಲಾ ತಂಡಗಳಿಗೆ 3 ಸಾವಿರ ರೂ. ಘೋಷಿಸಿರುವುದು ಉತ್ತಮ ಕೆಲಸ.

ರೈತರು ಮತ್ತು ಸ್ವ ಸಹಾಯ ಸಂಘಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಭೂ ಅಭಿವೃದ್ಧಿ ಬ್ಯಾಂಕ್‌ಗಳಿಂದ ಪಡೆದಿರುವ ಸಣ್ಣ ಮತ್ತು ಮಧ್ಯಮ ಹಾಗೂ ದೀರ್ಘಾವಧಿ ಸಾಲಗಳ ಕಂತು ಮರುಪಾವತಿ ಮೇ 1ರಿಂದ ಜುಲೈ 31ರ ವರೆಗೂ ಮುಂದೂಡಿರುವುದರಿಂದ

4.25 ಲಕ್ಷ ರೈತ ಕುಟುಂಬಗಳಿಗೆ, ಲಕ್ಷಾಂತರ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಅನುಕೂಲವಾಗಲಿದೆ. ಆರ್ಥಿಕ ಸಂಕಷ್ಟದಲ್ಲೂ ಇತಿ ಮಿತಿಯಲ್ಲಿ ಅಲ್ಪ ಪ್ರಮಾಣದ ಪ್ಯಾಕೇಜ್‌ ಘೋಷಿಸಿ ಕಷ್ಟಕ್ಕೆ ಸಿಲುಕಿರು ವವರ ನೆರವಿಗೆ ಧಾವಿಸುವ ಮೂಲಕ ಸರಕಾರ ನಿಮ್ಮ ಜತೆಗಿದೆ ಎಂಬ ಧೈರ್ಯ ತುಂಬಿದೆ.

ಟಾಪ್ ನ್ಯೂಸ್

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

school

Karnataka; ಶಾಲಾ ಆಸ್ತಿ ಸಂರಕ್ಷಣೆ ಅಭಿಯಾನ ಎಲ್ಲ ಇಲಾಖೆಗಳಿಗೂ ಮಾದರಿ

Forest

Forest: ಅರಣ್ಯದಲ್ಲಿ ನಿರಂತರ ಗಣಿಗಾರಿಕೆ: ಸರಕಾರ ಚರ್ಚಿಸಿ ನಿರ್ಧರಿಸಲಿ

School-Chikki

PM Poshan: ಶಾಲಾ ಮಕ್ಕಳ ಮೊಟ್ಟೆಗೂ ಕನ್ನ ತಪ್ಪಿತಸ್ಥರ ವಿರುದ್ಧ ಕ್ರಮ ಅಗತ್ಯ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.