ಸೋಂಕಿನಿಂದ ಪಾರಾಗಲು ಲಸಿಕೆಯೇ ಪರಿಹಾರ: ಅಶ್ವಥ್‌ನಾರಾಯಣ
Team Udayavani, May 20, 2021, 7:45 PM IST
ಮಂಡ್ಯ: ಕೊರೊನಾ ಸೋಂಕಿನ ವಿರುದ್ಧ ಹೋರಾಡಬೇಕಾದರೆ ಲಸಿಕೆಯಿಂದಲೇ ಸಾಧ್ಯ ಎಂದು ಉಪಮುಖ್ಯಮಂತ್ರಿ ಅಶ್ವಥ್‌ನಾರಾಯಣ ಹೇಳಿದರು.
ನಗರದ ಮಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ವಾರ್ಡ್ಗೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಪಿಪಿಇ ಕಿಟ್ ಧರಿಸಿ ಸೋಂಕಿತರ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಗೆ ಅಗತ್ಯದಷ್ಟು ಲಸಿಕೆಗಳನ್ನು ಪೂರೈಸಲಾಗುತ್ತಿದೆ. ಅಲ್ಲದೆ, ಲಸಿಕೆ ತಯಾರಿಸಲು ದೊಡ್ಡ ಮಟ್ಟದಲ್ಲಿ ಯೋಜನೆ ತಯಾರಾಗಿದೆ. ಫ್ರಂಟ್‌ಲೈನ್ ವಾರಿರ‍್ಸ್ಗಳಿಗೂ ಲಸಿಕೆ ನೀಡಲಾಗುತ್ತಿದ್ದು, ಸಾರ್ವಜನಿಕರು ಲಸಿಕೆ ಪಡೆದುಕೊಳ್ಳಬೇಕು ಎಂದರು.
ಗುಣಮಟ್ಟಕ್ಕೆ ಚಿಕಿತ್ಸೆಗೆ ಆದ್ಯತೆ:
ಜಿಲ್ಲೆಯಾದ್ಯಂತ ಮನೆ ಮನೆಗೆ ತೆರಳಿ ಪರೀಕ್ಷೆ ನಡೆಸಲಾಗುವುದು. ಸೋಂಕಿನ ಲಕ್ಷಣ ಇರುವವರನ್ನು ಗುರುತಿಸಿ ಚಿಕಿತ್ಸೆ ನೀಡಲು ಎಲ್ಲ ರೀತಿಯ ಕ್ರಮ ವಹಿಸಲಾಗಿದೆ. ಮಿಮ್ಸ್ನಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಗುಣಮಟ್ಟ ಚಿಕಿತ್ಸೆ ಹೆಚ್ಚಿಸಲು ಆದ್ಯತೆ ನೀಡಲಾಗುವುದು. ವೈದ್ಯಕೀಯ ಸೇವೆ, ಚಿಕಿತ್ಸೆ, ಸಿಬ್ಬಂದಿಗಳ ನೇಮಕ, ಐಸಿಯು ಬೆಡ್, ಆಕ್ಸಿಜನ್ ಜನರೇಟರ್ ಅಳವಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಪರೀಕ್ಷಾ ವರದಿ ಶೀಘ್ರ:
ಮೊದಲು ಐದು ಮಂದಿಯ ಪರೀಕ್ಷೆಯನ್ನು ಒಂದೇ ಕಿಟ್‌ನಲ್ಲಿ ನಡೆಸಲಾಗುತ್ತಿತ್ತು. ಇದರಿಂದ ವರದಿ ಬರುವುದು ತಡವಾಗುತ್ತಿತ್ತು. ಆದರೆ ಇನ್ನು ಮುಂದೆ ಒಬ್ಬರಿಗೆ ಒಂದೇ ಪರೀಕ್ಷೆ ನಡೆಸಿ ಅಂದೇ ವರದಿ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಮೂವರಿಗೆ ಬ್ಲಾಕ್ ಫಂಗಸ್:
ಜಿಲ್ಲೆಯಲ್ಲಿ ಮೂವರಿಗೆ ಬ್ಲಾಕ್ ಫಂಗಸ್ ಪತ್ತೆಯಾಗಿರುವ ವರದಿಯಾಗಿದೆ. ಇದರಲ್ಲಿ ಈಗಾಗಲೇ ಇಬ್ಬರಿಗೆ ನೆಗೆಟಿವ್ ಬಂದಿದ್ದು, ಒಬ್ಬರ ವರದಿ ಬರಬೇಕಾಗಿದೆ. ಬ್ಲಾಕ್ ಫಂಗಸ್ ನಿಯಂತ್ರಣಕ್ಕೆ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !
Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್ ಫಿಕ್ಸ್
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.