ವಿಶೇಷ ಚೇತನರಿಗೆ ಪ್ಯಾಕೇಜ್‌ಗೆ ಆಗ್ರಹ
Team Udayavani, May 20, 2021, 8:37 PM IST
ಮದ್ದೂರು: ಕೊರೊನಾ ಸೋಂಕಿನಿಂದಾಗಿ ಸಂಕಷ್ಟದಲ್ಲಿರುವವಿಕಲಚೇತನರ ಶ್ರೇಯೋ ಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ಘೋಷಣೆ ಮಾಡುವಂತೆ ಒತ್ತಾಯಿಸಿ ತಾಲೂಕು ಸರ್ವೋದಯ ವಿಕಲಚೇತನರ ಕ್ಷೇಮಾ ಭಿವೃದ್ಧಿ ಸಂಘ ಮತ್ತು ಸಮುದಾಯವಿಕಲ ಚೇತನ ಪುನರ್ವಸತಿ ಯೋಜನೆ ಪದಾಧಿ ಕಾರಿಗಳುಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಮದ್ದೂರು ಪಟ್ಟಣದ ವಿಕಲಚೇತನರ ಸಹಕಾರ ಸಂಘದಕಚೇರಿಯಲ್ಲಿ ಸಂಘದ ತಾಲೂಕು ಅಧ್ಯಕ್ಷ ಎಸ್.ಸಿ.ರಮೇಶ್‌ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕೊರೊನಾದಿಂದಾಗಿ ವಿಕಲಚೇತನರ ಆರ್ಥಿಕ ಸಂಕಷ್ಟ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದ್ದು,ದಿನನಿತ್ಯದ ಆಹಾರ,ಉದ್ಯೋಗಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿರುವುದಾಗಿ ಹೇಳಿದರು.
ಕಳೆದ ಮೂರು ತಿಂಗಳಿಂದಲೂ ಮಾಸಾಶನ ಹಾಗೂ ಗೌರವಧನ ಸಿಗದೆ ಔಷಧಿಗೂ ಪರದಾಡುವ ಸ್ಥಿತಿ ಬಂದೊದಗಿದೆ. ತಾವುಪ್ರಕಟಿಸಿರುವ ವಿಶೇಷ ಪ್ಯಾಕೇಜ್‌ನಲ್ಲಿ ವಿಕಲಚೇತನರನ್ನುಕಡೆಗಣಿಸಿರುವುದು ಬೇಸರ ತರಿಸಿದ್ದು, ಕೂಡಲೇ ತಮಗೂವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿದರು.
ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ, ಮೂರು ತಿಂಗಳ ವರೆಗೂ 10 ಸಾವಿರ ರೂ.ಮಾಸಾಶನ ನೀಡಬೇಕೆಂದು ಒತ್ತಾಯಿಸಿದರು. ಸರ್ವೋದಯವಿಕಲಚೇತನರ ಸಂಘದ ಉಪಾಧ್ಯಕ್ಷ ಎಚ್.ವಿ.ಮಾದೇಗೌಡ,ಸಂಯೋಜಕ ಮಹಾಂತೇಶ್‌ಹಿರೇಮಠ, ಸಿ.ಕೆ.ಕೃಷ್ಣ,ಬಿ.ಬೋರೇಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.