ಮೈಕ್ರೋ ಐಸೋಲೇಶನ್‌ ಕೇಂದ್ರ ಆರಂಭಿಸಿ


Team Udayavani, May 20, 2021, 9:13 PM IST

20-17

ಚಿತ್ರದುರ್ಗ: ಜಿಲ್ಲೆಯಲ್ಲಿ ಕೊರೊನಾ ಹತೋಟಿಗೆ ತರುವ ನಿಟ್ಟಿನಲ್ಲಿ ಹೆಚ್ಚು ಪ್ರಕರಣಗಳಿರುವ ಗ್ರಾಮಗಳಲ್ಲೇ ಮೈಕ್ರೋ ಐಸೋಲೇಶನ್‌ ಕೇಂದ್ರ ತೆರೆಯಿರಿ ಎಂದು ಸಂಸದ ಎ. ನಾರಾಯಣಸ್ವಾಮಿ ಸೂಚಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಇಲಾಖೆ ಅ ಕಾರಿಗಳು, ತಹಶೀಲ್ದಾರ್‌ ಹಾಗೂ ಇಒಗಳ ಸಭೆ ನಡೆಸಿ ಅವರು ಮಾತನಾಡಿದರು.

ಗ್ರಾಮ ಮಟ್ಟದಲ್ಲೇ ಪ್ರಕರಣಗಳನ್ನು ಪತ್ತೆ ಮಾಡಿ, ಅಲ್ಲಿಯೇ ಕೋವಿಡ್‌ ಕೇರ್‌ ಕೇಂದ್ರಗಳನ್ನು ತೆರೆಯುವುದರಿಂದ ಸಾವು ನೋವು ಕಡಿಮೆಯಾಗುತ್ತದೆ. ಜಿಲ್ಲಾ ಕೇಂದ್ರದ ಮೇಲಿನ ಒತ್ತಡವೂ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ತಹಶೀಲ್ದಾರ್‌ ಹಾಗೂ ಇಒಗಳು ಪಡಿಒಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರ ಸಹಕಾರದೊಂದಿಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಂಡು ಶಾಲೆಗಳಲ್ಲಿ ಕೋವಿಡ್‌ ಕೇಂದ್ರ ತೆರೆಯಿರಿ. ಅಗತ್ಯವಿದ್ದರೆ ಊಟದ ವ್ಯವಸ್ಥೆಯನ್ನು ನನ್ನ ಖರ್ಚಿನಲ್ಲೇ ಪ್ರತಿ ತಾಲೂಕು ಕೇಂದ್ರದಿಂದ ಸರಬರಾಜು ಮಾಡಿಸುವ ವ್ಯವಸ್ಥೆ ಮಾಡಿಸುತ್ತೇನೆ ಎಂದು ತಿಳಿಸಿದರು.

ಬೆಡ್‌ಗಳ ಮಾಹಿತಿಗೆ ವಾರ್‌ ರೂಂ ತಕ್ಷಣ ತೆರೆಯಿರಿ: ಜಿಲ್ಲೆಯಲ್ಲಿ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಬೆಡ್‌ಗಳನ್ನು ಮೀಸಲಿಟ್ಟು ಚಿಕಿತ್ಸೆ ನೀಡಬೇಕು. ಆದರೆ, ಇದು ಸರಿಯಾಗಿ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲೇ ವಾರ್‌ ರೂಂ ತೆರೆದು ರೋಗಿಗಳಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕು. ಈ ಕೆಲಸ ಇಂದೇ ಆಗಬೇಕು ಎಂದು ತಾಕೀತು ಮಾಡಿದರು.

ಜಿಲ್ಲಾ ಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ, ವಾರ್‌ ರೂಂ ತೆರೆಯಲು ವಾರದ ಹಿಂದೆಯೇ ಅಧಿ  ಕಾರಿಯನ್ನು ನೇಮಕ ಮಾಡಿ ಸಿಬ್ಬಂದಿ ನೀಡಲಾಗಿದೆ. ಆದರೆ, ಈವರೆಗೆ ಆಗಿಲ್ಲ, ನಿಮ್ಮಿಂದ ಆಗುತ್ತದೋ ಇಲ್ಲವೋ ತಿಳಿಸಿ ಎಂದು ಡಾ| ಚಂದ್ರಶೇಖರ್‌ ಅವರಿಗೆ ಪ್ರಶ್ನಿಸಿದರು. ಡಿಎಚ್‌ಒ ಡಾ| ಪಾಲಾಕ್ಷ ಮಾತನಾಡಿ, ನಾಳೆಯಿಂದಲೇ ವಾರ್‌ ರೂಂ ಆರಂಭಿಸಿ ಬೆಡ್‌, ಆಕ್ಸಿಜನ್‌ ಸೇರಿದಂತೆ ಎಲ್ಲಾ ಮಾಹಿತಿ ಅಲ್ಲಿ ಸಿಗುವಂತೆ ಮಾಡುತ್ತೇವೆ ಎಂದು ತಿಳಿಸಿದರು.

ಖಾಸಗಿ ಕ್ಲಿನಿಕ್‌ಗಳ ಮೇಲೆ ನಿಗಾ: ಕೋವಿಡ್‌ ರೋಗ ಲಕ್ಷಣಗಳಿದ್ದರೂ ಸಹ ಖಾಸಗಿ ಕ್ಲಿನಿಕ್‌ನಲ್ಲಿ ವೈದ್ಯರು ಅವರಿಗೆ ಸಾಮಾನ್ಯ ಚಿಕಿತ್ಸೆ ನೀಡಿ ಕಳುಹಿಸುತ್ತಾರೆ. ಕೆಲವು ದಿನಗಳ ನಂತರ ಇವರ ಆಕ್ಸಿಜನ್‌ ಲೆವೆಲ್‌ ಕಡಿಮೆಯಾದಾಗ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಇದರಿಂದ ಅಂತಹ ರೋಗಿಯು ಸಂಕಷ್ಟಕ್ಕೆ ಸಿಲುಕುತ್ತಾನೆ. ಕೋವಿಡ್‌ ಲಕ್ಷಣಗಳು ಕಂಡು ಬಂದ ತಕ್ಷಣವೇ ಟೆಸ್ಟ್‌ ಮಾಡಿಸಿ ಸಕಾಲದಲ್ಲಿ ಚಿಕಿತ್ಸೆ ನೀಡುವುದರಿಂದ ಆಕ್ಸಿಜನ್‌ ಕೊಡುವ ಹಂತಕ್ಕೆ ರೋಗಿ ತಲುಪುವುದಿಲ್ಲ, ಕೋವಿಡ್‌ ಕೇರ್‌ ಸೆಂಟರ್‌ ಅಥವಾ ಪ್ರತ್ಯೇಕ ವ್ಯವಸ್ಥೆ ಇದ್ದರೆ ಮನೆಯಲ್ಲಿ ಚಿಕಿತ್ಸೆ ಪಡೆದು ಆರೋಗ್ಯವಾಗಿರಬಹುದಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ತಾಲೂಕು ಆರೋಗ್ಯಾ ಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸಬೇಕಾಗಿದೆ ಎಂದು ಸಂಸದರು ತಿಳಿಸಿದರು.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ತೀವ್ರ ನಿಗಾ ವಹಿಸಬೇಕಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿಗಳ ಮೇಲೆ ಒಬ್ಬೊಬ್ಬ ನೋಡಲ್‌ ಅ ಧಿಕಾರಿಯನ್ನು ನೇಮಕ ಮಾಡಿ. ಎಲ್ಲಾ ಗ್ರಾಮಗಳಲ್ಲಿ ಕೋವಿಡ್‌ ಲಕ್ಷಣಗಳಿರುವವರನ್ನು ಟೆಸ್ಟ್‌ ಮಾಡಿಸಿ ಈ ಗ್ರಾಮಗಳನ್ನು ಕೋವಿಡ್‌ ಮುಕ್ತ ಎಂಬ ಬೋರ್ಡ್‌ ಹಾಕುವ ಮಟ್ಟಕ್ಕೆ ಕೆಲಸ ಮಾಡಬೇಕಾಗಿದೆ. ಅದೇ ರೀತಿ ಕೋವಿಡ್‌ಗೆ ಲಸಿಕೆಯನ್ನು ಹಾಕಲಾಗುತ್ತಿದ್ದು ಗ್ರಾಮಗಳಲ್ಲಿ ಎಲ್ಲರಿಗೂ ಲಸಿಕೆಯನ್ನು ಹಾಕಿಸುವ ಮೂಲಕ ಲಸಿಕೆ ಮುಕ್ತಗ್ರಾಮ ಎಂದು ಫಲಕವನ್ನು ಹಾಕುವ ನಿಟ್ಟಿನಲ್ಲಿ ಕೆಲಸ ಮಾಡುವ ಮೂಲಕ ಬೇರೆಯವರಿಗೆ ಮಾದರಿಯಾಗುವ ನಿಟ್ಟಿನಲ್ಲಿ ಇಲ್ಲಿನ ಅಕಾರಿಗಳು ಕೆಲಸ ಮಾಡುವಂತಾಗಬೇಕೆಂದರು.

ಸಭೆಯಲ್ಲಿ ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ರಕ್ಷಣಾ ಧಿಕಾರಿ ಜಿ. ರಾಧಿ ಕಾ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಇದ್ದರು.

ಟಾಪ್ ನ್ಯೂಸ್

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.