ಸಾವಿರ ಆಕ್ಸಿಜನ್‌ ಬೆಡ್‌ ಆಸ್ಪತ್ರೆ ಲೋಕಾರ್ಪಣೆ


Team Udayavani, May 20, 2021, 9:40 PM IST

20-20

ಬಳ್ಳಾರಿ: ಜಿಲ್ಲೆಯ ಜಿಂದಾಲ್‌ ಬಳಿಯ ವಿಶಾಲ ಮೈದಾನದಲ್ಲಿ ನಿರ್ಮಿಸಲಾಗಿರುವ 1 ಸಾವಿರ ಆಕ್ಸಿಜನ್‌ ಹಾಸಿಗೆ ಸೌಲಭ್ಯವುಳ್ಳ ತಾತ್ಕಾಲಿಕ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಬುಧವಾರ ಸಂಜೆ ಲೋಕಾರ್ಪಣೆಗೊಳಿಸಿದರು. ಅತ್ಯಂತ ಸುಸಜ್ಜಿತ ಸಾವಿರ ಹಾಸಿಗೆಗಳ ಸೌಲಭ್ಯವುಳ್ಳ ಬೃಹತ್‌ ಆಮ್ಲಜನಕಯುಕ್ತ ಕೋವಿಡ್‌ ಕೇರ್‌ ಫಿಲ್ಡ್‌ ಆಸ್ಪತ್ರೆ ಇದಾಗಿದ್ದು, ಸಕಲ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ.

ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದ ವಚ್ಯುವಲ್‌ ಮೂಲಕ ತಾತ್ಕಾಲಿಕ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಕೋವಿಡ್‌-19ರ ಎರಡನೇ ಅಲೆಯು ನಮ್ಮ ದೇಶ ಮತ್ತು ನಮ್ಮ ರಾಜ್ಯವನ್ನು ಅತ್ಯಂತ ತೀವ್ರವಾಗಿ ಬಾ ಧಿಸುತ್ತಿದೆ. ಸರ್ಕಾರ ಸೋಂಕಿನ ನಿಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಗಾಗಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದ ಈ ಪ್ರಯತ್ನದಲ್ಲಿ ಜಿಂದಾಲ್‌ ಸಂಸ್ಥೆ ಸೇರಿದಂತೆ ಖಾಸಗಿ ಸಂಸ್ಥೆಗಳೂ ಕೈಜೋಡಿಸಿರುವುದು ಅತ್ಯಂತ ಶ್ಲಾಘನೀಯ ಎಂದರು.

ಕೋವಿಡ್‌ ಎರಡನೇ ಅಲೆ ಸಂದರ್ಭದಲ್ಲಿ ಆಮ್ಲಜನಕದ ಕೊರತೆ ಇಡಿ ದೇಶದಲ್ಲಿ ಎದುರಾಗಿದೆ. ಇಂಥ ಸಂಕಟದ ಪರಿಸ್ಥಿತಿಯಲ್ಲಿ ಈ ಕೋವಿಡ್‌ ಕೇರ್‌ ಸೌಲಭ್ಯವು ಈ ಭಾಗದ ಸಂಜೀವಿನಿಯಾಗಲಿ ಎಂದು ಆಶಾಭಾವನೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಈ ಆಸ್ಪತ್ರೆಗೆ ನಿರಂತರವಾಗಿ ಆಮ್ಲಜನಕ ಪೂರೈಸಲು ಜಿಂದಾಲ್‌ ಉಕ್ಕಿನ ಸ್ಥಾವರದಿಂದ 4.8 ಕಿಮೀ ಪೈಪ್‌ಲೈನ್‌ ವ್ಯವಸ್ಥೆ ಮಾಡಲಾಗಿದೆ. ಈ ಮೂಲ ಸೌಕರ್ಯವನ್ನು ಕೇವಲ 15 ದಿನಗಳಲ್ಲಿ ನಿರ್ಮಿಸಿರುವುದು ದಾಖಲೆಯೇ ಸರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಆಸ್ಪತ್ರೆಯನ್ನು ಬಳ್ಳಾರಿ ಜಿಲ್ಲಾಡಳಿತ ನಿರ್ವಹಿಸಲಿದೆ. ಈ ಆಸ್ಪತ್ರೆಗೆ ವೈದ್ಯರು/ ತಜ್ಞರು, ನರ್ಸ್‌ಗಳು, ಅರೆವೈದ್ಯಕೀಯ ಸಿಬ್ಬಂದಿ, ಮೇಲ್ವಿಚಾರಕರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿಯೋಜಿಸಲಾಗಿದ್ದು, ಅವರು ವಿವಿಧ ಪಾಳಿಗಳಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಆಸ್ಪತ್ರೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವ ಧಿಯಲ್ಲಿ ಕೋವಿಡ್‌ ನಿಯಂತ್ರಣದೊಂದಿಗೆ ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು, ಕಳೆದ ವರ್ಷ ಮಾರ್ಚ್‌ಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ 1970 ಆಕ್ಸಿಜನೇಟೆಡ್‌ ಬೆಡ್‌ಗಳು, 444 ಐಸಿಯುಗಳು ಹಾಗೂ 610 ವೆಂಟಿಲೇಟರ್‌ ಸಹಿತ ಐಸಿಯುಗಳ ಸೌಲಭ್ಯವಿತ್ತು. ಈ ಎಲ್ಲ ಸೌಲಭ್ಯಗಳನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ಅವರು ವಿವರಿಸಿದರು.

ಪ್ರಸ್ತುತ ಇಲಾಖೆಯ ವ್ಯಾಪ್ತಿಯ ಆರೋಗ್ಯ ಸಂಸ್ಥೆಗಳಲ್ಲಿ 24 ಸಾವಿರ ಆಕ್ಸಿಜನೇಟೆಡ್‌ ಬೆಡ್‌ಗಳು, 1145 ಐಸಿಯು ಬೆಡ್‌ಗಳು, 2059 ವೆಂಟಿಲೇಟರ್‌ ಬೆಡ್‌ಗಳು ಹಾಗೂ 1248 ಎಚ್‌ಎಚ್‌ಎಫ್‌ ಎನ್‌ಸಿ ಸೌಲಭ್ಯಗಳು ಲಭ್ಯವಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಆಕ್ಸಿಜನೇಟೆಡ್‌ ಬೆಡ್‌ ಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿ, 4700 ರಿಂದ 9405 ಕ್ಕೆ ಹೆಚ್ಚಿಸಲಾಗಿದೆ. ವೆಂಟೆಲೇಟೆಡ್‌ ಬೆಡ್‌ಗಳ ಸಂಖ್ಯೆಯನ್ನು 341ರಿಂದ 646ಕ್ಕೆ ಹೆಚ್ಚಿಸಲಾಗಿದೆ. ಎಚ್‌ಎಚ್‌ಎಫ್‌ಎನ್‌ಸಿಗಳ ಸಂಖ್ಯೆಯನ್ನು 15ರಿಂದ 570ಕ್ಕೆ ಹೆಚ್ಚಿಸಲಾಗಿದೆ ಎಂದರು.

ಆಸ್ಪತ್ರೆಗಳ ಮೂಲಸೌಕರ್ಯ ಬಲಪಡಿಸುವ ಪ್ರಕ್ರಿಯೆ ಇನ್ನೂ ಮುಂದುವರೆದಿದೆ. ಹೆಚ್ಚುವರಿ ವೆಂಟೆಲೇಟರುಗಳು ಮತ್ತಿತರ ಸೌಲಭ್ಯಗಳು ನಿರಂತರವಾಗಿ ಸೇರ್ಪಡೆಯಾಗುತ್ತಿವೆ. ಖಾಸಗಿ ಆಸ್ಪತ್ರೆಗಳಿಗೆ ಸುಮಾರು 200 ವೆಂಟಿಲೇಟರುಗಳನ್ನು ನೀಡಿದ್ದೇವೆ ಎಂದರು.

ಆಮ್ಲಜನಕ  1015 ಮೆಟ್ರಿಕ್‌ ಟನ್‌ಗೆ ಹೆಚ್ಚಳ: ಭಾರತ ಸರ್ಕಾರವು ರಾಜ್ಯಕ್ಕೆ ಆಮ್ಲಜನಕ ಹಂಚಿಕೆಯನ್ನು 965 ಮೆಟ್ರಿಕ್‌ ಟನ್‌ನಿಂದ 1015 ಮೆಟ್ರಿಕ್‌ ಟನ್‌ ಗೆ ಹೆಚ್ಚಿಸಿದೆ. ಇದರಲ್ಲಿ 765 ಮೆಟ್ರಿಕ್‌ ಟನ್‌ ಆಮ್ಲಜನಕವು ರಾಜ್ಯದಲ್ಲಿಯೇ ದೊರೆಯುತ್ತಿದೆ. 60 ಟನ್‌ ಪಿಎಸ್‌ಎ ಪ್ಲಾಂಟ್‌ಗಳಿಂದ ಹಾಗೂ 160 ಟನ್‌ ಒಡಿಶಾ ಹಾಗೂ 30 ಟನ್‌ ವಿಶಾಖಪಟ್ಟಣದಿಂದ ದೊರೆಯುತ್ತಿದೆ ಎಂದರು.

ಜಿಂದಾಲ್‌ ತಾತ್ಕಾಲಿಕ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್‌, ರಾಜ್ಯದಲ್ಲಿಯೇ ಅತಿದೊಡ್ಡ ಸುಸಜ್ಜಿತ ಸೌಕರ್ಯಗಳುಳ್ಳ 1 ಸಾವಿರ ಆಕ್ಸಿಜನ್‌ ಬೆಡ್‌ಗಳ ತಾತ್ಕಾಲಿಕ ಆಸ್ಪತ್ರೆ ಇದಾಗಿದೆ. ಜಿಂದಾಲ್‌ ಸಂಸ್ಥೆಯ ಮುಖ್ಯಸ್ಥ ಸಜ್ಜನ್‌ ಜಿಂದಾಲ್‌ ಅವರು ಈ ಕೊರೊನಾದಂತ ಸಂದಿಗ್ಧ ಸಮಯದಲ್ಲಿ ಜಿಲ್ಲೆಗೆ ಅಮೂಲ್ಯವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು.

4.8 ಕಿ.ಮೀ ದೂರದಿಂದ ಆಕ್ಸಿಜನ್‌ ಅನ್ನು ಪೈಪ್‌ ಲೈನ್‌ ಮೂಲಕ ಈ ತಾತ್ಕಾಲಿಕ ಆಸ್ಪತ್ರೆಗೆ ತರಲಾಗಿದೆ. 2 ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. 15 ದಿನಗಳ ಕಾಲ ಜಿಂದಾಲ್‌ ಹಾಗೂ ಜಿಲ್ಲಾಡಳಿತದ ನಿರಂತರ ಪರಿಶ್ರಮದ ಫಲವಾಗಿ ಈ ಆಸ್ಪತ್ರೆ ತಲೆಎತ್ತಿದೆ. ಕೊರೊನಾ ಸೋಂಕಿತರಾಗಿ ಚಿಕಿತ್ಸೆಗೆ ಈ ತಾತ್ಕಾಲಿಕ ಆಸ್ಪತ್ರೆಗೆ ಆಗಮಿಸುವವರು ಬೇಗ ಗುಣಮುಖರಾಗಿ ನಗುಮೊಗದಿಂದ ಮನೆಗೆ ತೆರಳಲಿ.

ಆದಷ್ಟು ಬೇಗ ಕೊರೊನಾ ನಿಯಂತ್ರಣಕ್ಕೆ ಬರಲಿ ಎಂದ ಸಚಿವ ಆನಂದ್‌ಸಿಂಗ್‌, ಜಿಲ್ಲೆ ಗೆದ್ದರೆ ದೇಶ ಗೆದ್ದಂತೆ ಎಂಬ ಪ್ರಧಾನಮಂತ್ರಿಗಳು ಹೇಳಿದಂತೆ ಅವರ ನುಡಿಗಳನ್ನು ಅಕ್ಷರಶಃ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.

ಜಿಂದಾಲ್‌ ಸಂಸ್ಥೆಯ ಮುಖ್ಯಸ್ಥ ಸಜ್ಜನ್‌ ಜಿಂದಾಲ್‌, ಸಂಡೂರು ಶಾಸಕ ತುಕಾರಾಂ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಧಿಕಾರಿ ಪವನಕುಮಾರ ಮಾಲಪಾಟಿ, ಜಿಪಂ ಸಿಇಒ ಕೆ.ಆರ್‌. ನಂದಿನಿ, ಎಸ್ಪಿ ಸೈದುಲು ಅಡಾವತ್‌, ಎಡಿಸಿ ಮಂಜುನಾಥ್‌, ಜಿಂದಾಲ್‌ನ ವಿನೋದ ನೋವೆಲ್‌, ಮಂಜುನಾಥ ಪ್ರಭು ಮತ್ತಿತರರು ಇದ್ದರು.

ಟಾಪ್ ನ್ಯೂಸ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.