ಹಳ್ಳಿ ಗಳೀಗ ಕೊರೊನಾ ಹಾಟ್‌ಸ್ಪಾಟ್‌


Team Udayavani, May 20, 2021, 9:47 PM IST

20-21

„ಆರ್‌. ಬಸವರೆಡ್ಡಿ ಕರೂರು

ಸಿರುಗುಪ್ಪ: ಕೊರೊನಾ ಕರ್ಫ್ಯೂ ಕಾರಣದಿಂದಾಗಿ ತಾಲೂಕಿನ ವಿವಿಧ ಗ್ರಾಮಗಳಿಂದ ವಲಸೆ ಹೋಗಿದ್ದ 15 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಹಳ್ಳಿಗಳಿಗೆ ಮರಳಿರುವ ಪರಿಣಾಮವಾಗಿ ಈಗ ಪ್ರತಿ ಗ್ರಾಮಗಳಲ್ಲಿಯೂ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಹಳ್ಳಿ ಜನರಲ್ಲಿ ಆತಂಕ ಮೂಡಿಸಿದೆ.

ಕೋವಿಡ್‌ ತಪಾಸಣೆ ಮಾಡಿಸಿಕೊಳ್ಳದೆ ಹಳ್ಳಿಗಳಿಗೆ ಮರಳಿ ಬಂದವರಿಂದ, ಕೋವಿಡ್‌ ತಪಾಸಣೆಗೆ ಜನ ಮುಂದಾಗದೆ ಇರುವುದರಿಂದ ಹಳ್ಳಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಮರೆತು ಮದುವೆ, ಧಾರ್ಮಿಕ ಸಮಾರಂಭಗಳಿಂದ ಹಳ್ಳಿಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ತಾಲೂಕಿನಲ್ಲಿ ಕಂಡು ಬರುತ್ತಿರುವ ಕೊರೊನಾ ಪ್ರಕರಣಗಳಲ್ಲಿ ಅರ್ಧಕರ್ಧ ಗ್ರಾಮಾಂತರ ಪ್ರದೇಶಗಳಲ್ಲಿಯೇ ಕಂಡು ಬರುತ್ತಿದೆ.

ಈಗ ನಗರ ಪ್ರದೇಶಗಳಲ್ಲಿ ಕೊರೊನಾ ಸುರಕ್ಷತೆಯ ಬಗ್ಗೆ ಅರಿವು ಮೂಡಿದ್ದು, ಬಹುತೇಕರು ಸುರಕ್ಷತಾ ಕ್ರಮಗಳ ಪಾಲನೆಯನ್ನು ಮಾಡುತ್ತಿದ್ದಾರೆ. ಆದರೆ ಹಳ್ಳಿಗಳ ಜನರು ಮಾತ್ರ ಕೊರೊನಾ ಸುರಕ್ಷತಾ ಕ್ರಮಗಳ ಬಗ್ಗೆ ಇಲ್ಲಿಯವರೆಗೆ ತಲೆಕೆಡಸಿಕೊಂಡಿಲ್ಲ. ಮಾಸ್ಕ್ ಇಲ್ಲದೆ ತಮ್ಮ ನಿತ್ಯ ಕೆಲಸಗಳಲ್ಲಿ ತೊಡಗುತ್ತಿದ್ದಾರೆ. ಇದರೊಟ್ಟಿಗೆ ನೂರಾರು ಜನರನ್ನು ಸೇರಿಸಿಕೊಂಡು ಮನೆ ಮುಂದೆ ಮದುವೆ ಸಮಾರಂಭಗಳನ್ನು ಮಾಡುತ್ತಿದ್ದಾರೆ.

ನೂರಾರು ಜನರು ಯಾವುದೇ ಸಾಮಾಜಿಕ ಅಂತರ, ಸುರಕ್ಷತಾ ಕ್ರಮಗಳ ಪಾಲನೆಯಿಲ್ಲದೆ, ಒಂದೆಡೆ ಸೇರಿ ಸೋಂಕು ಹರಡುತ್ತಲೇ ಇದ್ದಾರೆ. ಶವಸಂಸ್ಕಾರಕ್ಕೂ ನೂರಾರು ಜನರು ಸೇರುವ ಮೂಲಕ ಕೊರೊನಾದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದನ್ನು ಮರೆಯುತ್ತಿದ್ದಾರೆ. ಕೊರೊನಾ ಸೋಂಕಿನ ಬಗ್ಗೆ ಗ್ರಾಮಾಂತರ ಪ್ರದೇಶದ ಜನರು ತೋರಿಸುತ್ತಿರುವ ನಿರ್ಲಕ್ಷÂದ ನಡೆಯಿಂದ ಈಗ ಪ್ರತಿ ಹಳ್ಳಿಗಳಲ್ಲಿಯೂ ಕೊರೊನಾ ಕಂಡು ಬರುತ್ತಿದೆ.

ನಗರಗಳಂತೆಯೇ ಹಳ್ಳಿಗಳಲ್ಲಿಯೂ ಸ್ಥಳಿಯ ಅಧಿ ಕಾರಿಗಳು ಸುರಕ್ಷತಾ ಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಅನಗತ್ಯ ಓಡಾಡದಂತೆ ಒಂದೆಡೆ ನೂರಾರು ಜನರು ಸೇರದಂತೆ ನೋಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಹಳ್ಳಿಗಳ ಜನರ ಸಹಕಾರ ಅ ಧಿಕಾರಿಗಳಿಗೆ ಸಿಗುತ್ತಿಲ್ಲ. ನಿರ್ಲಕ್ಷ ದಿಂದ ಪ್ರತಿ ಹಳ್ಳಿಗಳಲ್ಲಿಯೂ ಕೊರೊನಾ ಒಕ್ಕರಿಸಿ ಗ್ರಾಮಾಂತರ ಪ್ರದೇಶದ ಜನರ ನಿದ್ದೆಗೆಡಿಸಿದೆ. ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹರಡಿದ್ದು, ಪ್ರತಿ ಹಳ್ಳಿಯಲ್ಲಿಯೂ 5-10 ಜನ ಅನಾರೋಗ್ಯದಿಂದ ಬಳಲಿ ಹಾಸಿಗೆ ಹಿಡಿಯುತ್ತಿದ್ದಾರೆ.

ಆದರೂ ಜನರು ಕೊರೊನಾ ತಪಾಸಣೆಗೆ ಮುಂದಾಗುತ್ತಿಲ್ಲ. ಕೆಲವರು ಮೆಡಿಕಲ್‌ ಶಾಪ್‌ಗ್ಳಿಂದ ಜ್ವರ, ಶೀತಕ್ಕೆ ತಾವೆ ಕೇಳಿ ತಂದ ಔಷ ಧ ಸೇವಿಸುತ್ತಿದ್ದಾರೆ. ಮತ್ತೆ ಕೆಲವರು ಸ್ಥಳಿಯವಾಗಿ ಸಿಗುವ ವೈದ್ಯರಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದಾರೆ. ಇದರಿಂದ ಕೆಲವು ಸೋಂಕಿತರ ಆರೋಗ್ಯ ಸ್ಥಿತಿ ಗಂಭೀರತೆಯತ್ತ ಸಾಗುತ್ತಿದ್ದು, ಕೊನೆ ಘಳಿಗೆಯಲ್ಲಿ ವೆಂಟಿಲೇಟರ್‌ ಆಕ್ಸಿಜನ್‌ ಬೆಡ್‌ ಸಿಗದೆ ಪ್ರಾಣ ಕಳೆದುಕೊಳ್ಳುವ ಪ್ರಸಂಗಗಳು ಹೆಚ್ಚಾಗುತ್ತಿವೆ.

ಒಟ್ಟಾರೆ ಕೊರೊನಾ ಸೋಂಕು ಹಳ್ಳಿಗಳಲ್ಲಿ ಹರಡುತ್ತಲೇ ಇದ್ದು, ಸೋಂಕಿನ ಸರಪಳಿಯನ್ನು ಹರಿಯಲು ಸ್ಥಳಿಯ ಆಡಳಿತಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಿದೆ. ಇದರೊಟ್ಟಿಗೆ ಎಲ್ಲರಿಗೂ ಕಡ್ಡಾಯ ತಪಾಸಣೆ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ, ಕೋವಿಡ್‌ ಆರೈಕೆ ಕೇಂದ್ರಗಳ ಸ್ಥಾಪನೆಗೂ ಮುಂದಾಗಬೇಕಾಗಿದೆ. ತಾಲೂಕಿನಲ್ಲಿ ಆರೋಗ್ಯ ಮತ್ತು ಕಂದಾಯ, ಗ್ರಾಪಂ, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಪಡೆಯು ಮನೆ ಮನೆಗೆ ತೆರಳಿ ಪ್ರತಿಯೊಬ್ಬರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

ಬೆಂಗಳೂರು ಸೇರಿದಂತೆ ಇತರೆಕಡೆ ದುಡಿಯಲು ಹೋಗಿದ್ದ ಕಾರ್ಮಿಕರು ಹಳ್ಳಿಗಳಿಗೆ ಮರಳಿ ಬಂದಿರುವುದರಿಂದ ಕೊರೊನಾ ವೈರಸ್‌ ಹೆಚ್ಚಾಗಲು ಕಾರಣವಾಗಿದೆ. ಆದ್ದರಿಂದ ಹಳ್ಳಿಗಳಲ್ಲಿ ಕೊರೊನಾ ವೈರಸ್‌ ಸೋಂಕು ತಡೆಯಲು ಅಂಗನವಾಡಿ, ಆಶಾ ಕಾರ್ಯಕರ್ತೆರು ಪ್ರತಿ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಶಿವಪ್ಪ,ಕರೂರು ಗ್ರಾಪಂ ಪಿಡಿಒ

ಟಾಪ್ ನ್ಯೂಸ್

Pramod-Muthalik

Waqf Issue: ವಕ್ಫ್ ವಿರುದ್ಧ ಹಿಂದೂಗಳು ಒಗ್ಗೂಡಲಿ: ಪ್ರಮೋದ್‌ ಮುತಾಲಿಕ್‌

arrested

Baba Siddique ಹ*ತ್ಯೆ: ಶೂಟರ್‌ ಸೇರಿ ಮೂವರ ಬಂಧನ

pinarayi

Jamaat ಬೆಂಬಲ ಹೇಳಿಕೆ: ಪಿಣರಾಯಿ, ಪ್ರಿಯಾಂಕಾ ವಾದ್ರಾ ಮಧ್ಯೆ ವಾಕ್ಸಮರ!

Sheik Hasina

Bangladesh; ಶೇಖ್‌ ಹಸೀನಾ ಪಕ್ಷದ ಬೆಂಬಲಿಗರನ್ನು ಬಂಧಿಸಿದ ಸೇನೆ

Manipal: ಶಿಕ್ಷಣದ ಜತೆ ಆರೋಗ್ಯ ಸುಧಾರಣೆಗೂ ಆದ್ಯತೆ

Manipal: ಶಿಕ್ಷಣದ ಜತೆ ಆರೋಗ್ಯ ಸುಧಾರಣೆಗೂ ಆದ್ಯತೆ

Kukke Shree Subrahmanya ಕ್ಷೇತ್ರದಲ್ಲಿ ಭಕ್ತ ಸಂದಣಿ

Kukke Shree Subrahmanya ಕ್ಷೇತ್ರದಲ್ಲಿ ಭಕ್ತ ಸಂದಣಿ

Mangaluru Airport: 7,637 ಪ್ರಯಾಣಿಕರನ್ನು ನಿರ್ವಹಿಸಿ ಹೊಸ ದಾಖಲೆ

Mangaluru Airport: 7,637 ಪ್ರಯಾಣಿಕರನ್ನು ನಿರ್ವಹಿಸಿ ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

BS-yadiyurappa

Covid Scam: ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

Sriramulu

Covid Scam: ಕೋವಿಡ್‌ ಅಕ್ರಮ ಸಾಬೀತಾದಲ್ಲಿ ರಾಜಕೀಯ ನಿವೃತ್ತಿ: ಬಿ.ಶ್ರೀರಾಮುಲು

Bellary–CM

By Poll: ಬಳ್ಳಾರಿಯಲ್ಲಿ ನಿಮ್ಮ ಅಟ್ಟಹಾಸ ಮುರಿದದ್ದು ಸಿದ್ದರಾಮಯ್ಯ ಅನ್ನೋದು ಮರೀಬೇಡಿ: ಸಿಎಂ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

Pramod-Muthalik

Waqf Issue: ವಕ್ಫ್ ವಿರುದ್ಧ ಹಿಂದೂಗಳು ಒಗ್ಗೂಡಲಿ: ಪ್ರಮೋದ್‌ ಮುತಾಲಿಕ್‌

Vimana 2

Passenger ನಿಂದಲೇ ವಿಮಾನಕ್ಕೆ ಹುಸಿ ಬಾಂಬ್‌ ಬೆದರಿಕೆ ಕರೆ!

AANE 2

Madhya Pradesh; ಮರಿ ಆನೆ ಸಾ*ವು: ಒಟ್ಟು 11ಕ್ಕೆ ಏರಿಕೆ

sudha-murthy

Air travel ಅಗ್ಗದ ಟಿಕೆಟ್‌ ಖರೀದಿ: ಸುಧಾಮೂರ್ತಿ

arrested

Baba Siddique ಹ*ತ್ಯೆ: ಶೂಟರ್‌ ಸೇರಿ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.