ಜ್ಯೂನಿಯರ್ ಎನ್ ಟಿಆರ್ ಜೊತೆ ಪ್ರಶಾಂತ್ ನೀಲ್ ಸಿನಿಮಾ
Team Udayavani, May 21, 2021, 7:57 AM IST
“ಕೆಜಿಎಫ್-2′ ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ತೆಲುಗು ಚಿತ್ರರಂಗದತ್ತ ಮುಖಮಾಡಿದ್ದಾರೆ. ಈಗಾಗಲೇ “ಬಾಹುಬಲಿ’ ಖ್ಯಾತಿಯ ಪ್ರಭಾಸ್ ಜೊತೆ “ಸಲಾರ್’ ಸಿನಿಮಾ ಅನೌನ್ಸ್ ಮಾಡಿರುವ ಪ್ರಶಾಂತ್ ನೀಲ್, ಅದರ ಚಿತ್ರೀಕರಣವನ್ನೂ ಆರಂಭಿಸಿದ್ದಾರೆ. ಇದರ ನಡುವೆಯೇ “ಸಲಾರ್’ ಸಿನಿಮಾದ ಬಳಿಕ ಪ್ರಶಾಂತ್ ನೀಲ್ ಮತ್ತೂಂದು ತೆಲುಗು ಸಿನಿಮಾಕ್ಕೆ ಆ್ಯಕ್ಷನ್ -ಕಟ್ ಹೇಳುತ್ತಿರುವುದು ಕೂಡ ಖಚಿತವಾಗಿದೆ.
ಹೌದು, “ಸಲಾರ್’ ಸಿನಿಮಾದ ಬಳಿಕ ತೆಲುಗಿನ ಮತ್ತೂಬ್ಬ ಸ್ಟಾರ್ ಹೀರೋ, ಯಂಗ್ ಟೈಗರ್ಖ್ಯಾತಿಯ ನಟ ಜ್ಯೂನಿಯರ್ ಎನ್ ಟಿಆರ್ ಹೊಸ ಸಿನಿಮಾಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿಕಳೆದ ಹಲವು ತಿಂಗಳಿನಿಂದ ಕನ್ನಡ ಮತ್ತು ತೆಲುಗು ಎರಡೂ ಚಿತ್ರರಂಗದಲ್ಲಿ ಜೋರಾಗಿ ಹರಿದಾಡುತ್ತಿತ್ತು. ಆದರೆ ಈ ಸುದ್ದಿಯನ್ನು ಜ್ಯೂನಿಯರ್ ಎನ್ ಟಿಆರ್ ಆಗಲಿ ಅಥವಾ ಪ್ರಶಾಂತ್ ನೀಲ್ ಆಗಲಿ ಖಚಿತಪಡಿಸಿರಲಿಲ್ಲ.
ಇದೀಗ ಈ ಸುದ್ದಿಯನ್ನು ನಿರ್ದೇಶಕ ಪ್ರಶಾಂತ್ ನೀಲ್ ಅವರೇ ಖಚಿತಪಡಿಸಿದ್ದಾರೆ. ಜ್ಯೂನಿಯರ್ ಎನ್ಟಿಆರ್ 38ನೇ ಹುಟ್ಟುಹಬ್ಬದ ಸಂಭ್ರಮದ ಹೊತ್ತಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ಕೋರಿರುವ ನಿರ್ದೇಶಕ ಪ್ರಶಾಂತ್ ನೀಲ್, ಎನ್ಟಿಆರ್31 ಪ್ರಾಜೆಕ್ಟ್ ಶುರುವಾಗಲಿದೆ ಎಂದು ಹೇಳುವ ಮೂಲಕ ತಮ್ಮಿಬ್ಬರ ಕಂಬಿನೇಶನ್ನಲ್ಲಿ ಮುಂದಿನ ಸಿನಿಮಾರಲಿದೆ ಎಂಬ ಸುದ್ಧಿಯನ್ನು ಖಚಿತಪಡಿಸಿದ್ದಾರೆ.
ಇನ್ನು ಜ್ಯೂ. ಎನ್ ಟಿಆರ್ ಅಭಿನಯದ 31ನೇ ಸಿನಿಮಾ ಇದಾಗಿದ್ದು, “ಮೈತ್ರಿ ಮೂವಿ ಮೇಕರ್’ ಸಂಸ್ಥೆಈಸಿನಿಮಾವನ್ನು ನಿರ್ಮಿಸುತ್ತಿದೆ. ಅಂದಹಾಗೆ, ಎಲ್ಲ ಅಂದುಕೊಂಡಂತೆ ಆದರೆ ಮುಂದಿನ ವರ್ಷದ ಆರಂಭದಲ್ಲಿ ಈ ಹೊಸ ಸಿನಿಮಾ ಶುರುವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.