500 ಬೆಡ್ ಕೋವಿಡ್ ಕೇರ್ ಸೆಂಟರ್ ಆರಂಭ
ಜಿಲ್ಲಾಡಳಿತದಿಂದಲೇ ರೋಗಿಗಳಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ.
Team Udayavani, May 22, 2021, 6:58 PM IST
ಕಲಬುರಗಿ: ಸೌಮ್ಯ ಸ್ವಭಾವ ಮತ್ತು ತೀವ್ರತರವಲ್ಲದ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಗರದ ಸೇಡಂ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ 500 ಹಾಸಿಗೆ ಸಾಮರ್ಥ್ಯದ ವಸತಿ ನಿಲಯವನ್ನು ಜಿಮ್ಸ್ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಶುಕ್ರವಾರದಿಂದಲೇ ಕಾರ್ಯಾರಂಭ ಮಾಡಿದೆ.
500 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಸದ್ಯ 50 ಬೆಡ್‌ಗಳು ಲಭ್ಯವಿವೆ. ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಲ್ಲಿ ಅದಕ್ಕನುಗುಣವಾಗಿ ಹಾಸಿಗೆಯನ್ನು ಹೆಚ್ಚಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶರಣಬಸಪ್ಪ ಗಣಜಲಖೇಡ್ ತಿಳಿಸಿದ್ದಾರೆ.
ಈ ಕೋವಿಡ್ ಕೇರ್ ಸೆಂಟರ್‌ನಲ್ಲಿ 36 ಆಕ್ಸಿಜನ್ ಕಾನ್ಸ್‌ಂಟ್ರೇಟರ್ ಗಳಿದ್ದು, ಉಸಿರಾಟ ಸಮಸ್ಯೆ ಇರುವ ರೋಗಿಗಳಿಗೆ ನೆರವಾಗಲಿದೆ. ಓರ್ವ ಫಾರ್ಮಾಸಿಸ್ಟ್‌ನ್ನು ನಿಯೋಜಿಸಲಾಗಿದೆ. ಅಗತ್ಯ ಔಷಧಿಗಳು ಸ್ಥಳದಲ್ಲಿಯೇ ಲಭ್ಯವಿರಲಿವೆ ಎಂದರು.
ಕೋವಿಡ್ ಸೋಂಕಿತರಿಗೆ ದಿನದ 24 ಗಂಟೆ ಚಿಕಿತ್ಸೆ ನೀಡಲು ಮೂರು ಪಾಳಿಯಲ್ಲಿ ಒಟ್ಟು ಮೂವರು ಎಂಬಿಬಿಎಸ್ ವೈದ್ಯರು, ಆರು ಜನ ಸ್ಟಾಫ್ ನರ್ಸ್‌ಗಳು, ಆರು ಗ್ರೂಪ್ ಡಿ ನೌಕರರನ್ನು ನಿಯೋಜಿಸಲಾಗಿದೆ. ಜಿಲ್ಲಾಡಳಿತದಿಂದಲೇ ರೋಗಿಗಳಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ. ತುರ್ತು ಸಂದರ್ಭದಲ್ಲಿ ಉಪಯೋಗಕ್ಕೆ ಆಂಬ್ಯುಲೆನ್ಸ್ ಸಹ ಲಭ್ಯವಿರಲಿದೆ ಎಂದು ಡಿಎಚ್‌ಒ ವಿವರಿಸಿದರು.
ಕೇರ್ ಸೆಂಟರ್‌ನಲ್ಲಿ ಇದೇ ವೇಳೆ ಆಕ್ಸಿಜನ್ ಕಾನ್ಸ್‌ಂಟ್ರೇಟರ್ ಗಳು ಯಾವ ರೀತಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದು ಡಿಹೆಚ್‌ಒ ಡಾ| ಶರಣಬಸಪ್ಪ ಗಣಜಲಖೇಡ್ ಪ್ರಾಯೋಗಿಕವಾಗಿ ತೋರಿಸಿ ಕೊಟ್ಟರು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿಗಳಾದ ಡಾ| ಶರಣ ಬಸಪ್ಪ ಕ್ಯಾತನಾಳ, ಡಾ| ಮಾರುತಿ ಕಾಂಬಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.