ಭೀಕರ ಸೈಕ್ಲೋನ್ ಆಗಿ ‘ಯಾಸ್’ ಪರಿವರ್ತನೆ : ಒಡಿಶಾ, ಕರಾವಳಿ ಹಾದು ಹೋಗಲಿದೆ ಚಂಡಮಾರುತ
Team Udayavani, May 22, 2021, 9:10 PM IST
ನವದೆಹಲಿ: ಯಾಸ್ ಚಂಡಮಾರುತವು ಅತ್ಯಂತ ಭೀಕರ ಸೈಕ್ಲೋನ್ ಆಗಿ ಪರಿವರ್ತನೆಗೊಳ್ಳಲಿದ್ದು, ಮೇ 26ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯನ್ನು ಹಾದು ಹೋಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಉತ್ತರ ಅಂಡ ಮಾನ್ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಪೂರ್ವ-ಕೇಂದ್ರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಭಾನುವಾರ ಬೆಳಗ್ಗೆ ಚಂಡಮಾರುತವಾಗಿ ಬದಲಾಗಲಿದೆ. ಸೋಮವಾರ ಅದರ ತೀವ್ರತೆ ಹೆಚ್ಚಾಗಲಿದೆ ಎಂದು ಇಲಾಖೆ ತಿಳಿಸಿದೆ. ಮೇ 26ರಂದು ಚಂಡಮಾರುತವು ಒಡಿಶಾ, ಪ.ಬಂಗಾಳ ಹಾಗೂ ಬಾಂಗ್ಲಾದೇಶ ಕರಾವಳಿಯನ್ನು ಹಾದು ಹೋಗಲಿದ್ದು, ಈ ರಾಜ್ಯಗಳಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೈ ಅಲರ್ಟ್ ಘೋಷಣೆ:
ತೌಕ್ತೇ ಚಂಡಮಾರುತದ ಬೆನ್ನಲ್ಲೇ ಯಾಸ್ ಚಂಡಮಾರುತ ಅಪ್ಪಳಿಸಲಿದ್ದು, ಒಡಿಶಾದ 14 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ, ಕೇರಳದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಡಿಶಾ, ಪ.ಬಂಗಾಳ ಹಾಗೂ ಕೇರಳದಲ್ಲಿ ಪ್ರವಾಹ ಪರಿಹಾರ ತಂಡಗಳನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ :ನೆಟ್ ಬ್ಯಾಂಕಿಂಗ್ ಗ್ರಾಹಕರೇ ಗಮನಿಸಿ : ಭಾನುವಾರ ಮಧ್ಯಾಹ್ನದವರೆಗೆ NEFT ಅಲಭ್ಯ
ಸೋಮವಾರದಿಂದ ಭಾರೀ ಮಳೆ:
ಯಾಸ್ ಪ್ರಭಾವದಿಂದಾಗಿ ಮುಂಬೈ ಹೊರತುಪಡಿಸಿ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ, ಕೊಂಕಣ ಭಾಗದಲ್ಲಿ ಮತ್ತು ಗೋವಾದಲ್ಲಿ ಸೋಮವಾರ ಹಾಗೂ ಮಂಗಳವಾರ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮೃತದೇಹಗಳ ಡಿಎನ್‌ಎ ಪರೀಕ್ಷೆ?
ತೌಕ್ತೇ ಚಂಡಮಾರುತದ ವೇಳೆ ಮುಂಬೈ ಕರಾವಳಿಯಾಚೆ ಮುಳುಗಿದ ಬಾರ್ಜ್‌ನಲ್ಲಿದ್ದವರ ಪೈಕಿ 61 ಮಂದಿ ಸಾವಿಗೀಡಾಗಿದ್ದು, ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ. 61 ಮಂದಿಯ ಪೈಕಿ 30 ಮೃತದೇಹಗಳ ಗುರುತು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಮೃತದೇಹಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಈಗಾಗಲೇ 28 ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.