ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.40 ಲಕ್ಷ ಕೋವಿಡ್ ಪ್ರಕರಣ ಪತ್ತೆ; 3,741 ಮಂದಿ ಸಾವು
Team Udayavani, May 23, 2021, 10:07 AM IST
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ 2,40,842 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 26,530,132ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.
ಇದೇ ಅವಧಿಯಲ್ಲಿ 3,741 ಮಂದಿ ಕೋವಿಡ್ ಸೋಂಕಿಗೆ ತಮ್ಮ ಪ್ರಾಣ ಕಳೆದುಕೊಂಡಿದ್ದು, ಒಟ್ಟಾರೆಯಾಗಿ 2,99,266 ಜನರು ವೈರಸ್ ನ ಕಾರಣದಿಂದ ಪ್ರಾಣ ತ್ಯಜಿಸಿದ್ದಾರೆ.
ಭಾರತದಲ್ಲಿ ಸೋಂಕಿಗೆ ತುತ್ತಾಗುವವರ ಪ್ರಮಾಣ ಕಡಿಮೆಯಾಗುತ್ತಿದ್ದು, ಸ್ಥಿರತೆ ಕಂಡುಬಂದಿದೆ. 7 ರಾಜ್ಯಗಳಲ್ಲಿ 10 ಸಾವಿರಕ್ಕಿಂತ ಹೆಚ್ಚು ಹೊಸ ಪ್ರಕರಣಗಳು ವರದಿಯಾಗುತ್ತಿದ್ದರೆ, 6 ರಾಜ್ಯಗಳಲ್ಲಿ 5 ಸಾವಿರಕ್ಕಿಂತ ಹೆಚ್ಚಿನ ಪ್ರಕರಣಗಳು ಪ್ರತಿನಿತ್ಯ ವರದಿಯಾಗುತ್ತಿದೆ. ಸುಮಾರು 93 ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಉಳ್ಳಾಲ ಕೋಡಿಯಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ ಅವಘಡ : 10 ಮಂದಿಯ ರಕ್ಷಣೆ
ತಮಿಳುನಾಡು, ಆಂದ್ರಪ್ರದೇಶ, ಕೇರಳ, ಕರ್ನಾಟಕ, ತೆಲಂಗಾಣ, ಉತ್ತರಪ್ರದೇಶ ಮುಂತಾದ ರಾಜ್ಯಗಳಲ್ಲಿ ಲಾಕ್ ಡೌನ್ ಮಾದರಿಯ ಕರ್ಫ್ಯೂ ಜಾರಿಗೊಳಿಸಿದ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ.
ಇದನ್ನು ಹೊರತುಪಡಿಸಿ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಉತ್ತರಪ್ರದೇಶ, ಪಂಜಾಬ್, ಡೆಲ್ಲಿಗಳಲ್ಲಿ ಮರಣ ಪ್ರಮಾಣ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವಾಲಯ ವರದಿಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಮೂರು ಮದುವೆ, ಒಂದು ಅಂತ್ಯಸಂಸ್ಕಾರ: ಈ ಗ್ರಾಮದಲ್ಲಿ ಒಂದೇ ದಿನ 95 ಜನರಿಗೆ ಕೋವಿಡ್ ಪಾಸಿಟಿವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.