ಜೂನ್ 7 ರವರೆಗೆ ನಿಷೇಧಾಜ್ಞೆ ಬೆಳಗಾವಿ ಹಿರೇಮಠ ಡಿಸಿ ಆದೇಶ
Team Udayavani, May 23, 2021, 5:32 PM IST
ಬೆಳಗಾವಿ : ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಜೂನ್ 7 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ.12ರ ರಾತ್ರಿ 9 ಗಂಟೆಯಿಂದ ಮೇ.24 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು.
ಇದನ್ನೂ ಓದಿ : ಸಾವಿನ ಓಟ..: ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ 21 ಓಟಗಾರರು ಪ್ರತಿಕೂಲ ಹವಾಮಾನಕ್ಕೆ ಬಲಿ!
ಆದರೆ ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ಮೇ.24 ರ ಬೆಳಿಗ್ಗೆ 6 ಗಂಟೆಯವರೆಗೆ ಇರುವ ನಿಷೇಧಾಜ್ಞೆಯನ್ನು ಜೂನ್ 7 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅವಶ್ಯಕ ಚಟುವಟಿಕೆಗಳು ಹಾಗೂ ತಾಲೂಕಾ ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು 0 ಪರ್ಸೆಂಟ್ ಅಭಿವೃದ್ಧಿ,100 ಪರ್ಸೆಂಟ್ ಭ್ರಷ್ಟಾಚಾರದ ಸರಕಾರ: ಸುನಿಲ್
ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ
Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್ ಆಸ್ಪತ್ರೆ: ಶರಣಪ್ರಕಾಶ್ ಪಾಟೀಲ್
Online Gaming: ಪ್ರತ್ಯೇಕ ಚರ್ಚೆಗೆ ಪಕ್ಷಾತೀತವಾಗಿ ಒತ್ತಾಯ
Almatti ಡ್ಯಾಂ ವಿಸ್ತರಣೆಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.