ಕಾಂಗ್ರೆಸ್ಸಿಗರು ವಸ್ತುಸ್ಥಿತಿ ಅರಿತು ಮಾತನಾಡಲಿ
ಕೈ ಆಡಳಿತ -ಮೋದಿಯವರ ಅವಧಿಯಲ್ಲಾದ ಸುಧಾರಣೆ ತುಲನೆ ಮಾಡಿ ನೋಡಿ: ಜೋಶಿ
Team Udayavani, May 23, 2021, 6:21 PM IST
ಗದಗ: ಕಾಂಗ್ರೆಸ್ ನಾಯಕರು ದೇಶದ ವೈದ್ಯಕೀಯ ಸೇವೆ-ಸೌಲಭ್ಯಗಳ ಬಗ್ಗೆ ವಸ್ತುಸ್ಥಿತಿ ಯನ್ನರಿತು ಮಾತನಾಡಬೇಕು. ಕಾಂಗ್ರೆಸ್ ಹಾಗೂ ಮೋದಿಯವರ ಅವ ಧಿಯಲ್ಲಾದ ಸುಧಾರಣೆಯನ್ನು ತುಲನೆ ಮಾಡಬೇಕು. ಇಲ್ಲವಾದರೆ ವಿಪಕ್ಷ ಸ್ಥಾನವನ್ನೂ ಕಳೆದು ಕೊಂಡಿರುವ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಮತ್ತಷ್ಟು ಅವನತಿ ಕಾಣಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಆಡಳಿತದಲ್ಲಿ ಹಾಗೂ ಬಿಜೆಪಿ ಅ ಧಿಕಾರವ ಧಿಯಲ್ಲಾದ ಆಸ್ಪತ್ರೆಗಳ ಸುಧಾರಣೆಯನ್ನು ಕಾಂಗ್ರೆಸ್ ನಾಯಕರು ತುಲನಾತ್ಮಕವಾಗಿ ನೋಡಬೇಕು. ಅಲ್ಲದೇ ಲಸಿಕಾಕರಣಕ್ಕೆ ಶಾಸಕರ ನಿಧಿ ನೀಡಲಾಗುತ್ತಿದೆ. ಆದರೆ ಅದನ್ನೇ ಕಾಂಗ್ರೆಸ್ಸಿಗರು 100 ಕೋಟಿ ರೂ. ನೆರವು ನೀಡುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿರುವುದು ಹಾಸ್ಯಾಸ್ಪದ. ಒಂದೊಮ್ಮೆ ಸರಕಾರ ಶಾಸಕರು-ಸಂಸದರಿಗೆ ಈ ಬಾರಿ ಪ್ರದೇಶಾಭಿವೃದ್ಧಿ ನಿಧಿ ಇಲ್ಲವೆಂದೂ ಘೋಷಿಸಬಹುದು. ಆಗ ಎಲ್ಲಿಂದ ಹಣ ನೀಡುವರು? ಅವರ ಈ ಸ್ಥಿತಿಗೆ ಕನಿಕರ ಬರುತ್ತಿದೆ ಎಂದು ಲೇವಡಿ ಮಾಡಿದರು.
ಕೋವಿಡ್ ಲಸಿಕಾಕರಣಕ್ಕೆ ಆರಂಭದಲ್ಲಿ ಕಾಂಗ್ರೆಸ್ ಸಾಥ್ ನೀಡಿದ್ದರೆ ಈಗಾಗಲೇ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆ ಮುಕ್ತಾಯವಾಗಿರುತ್ತಿತ್ತು. ಕೋವಿಡ್ ಲಸಿಕೆ ನಾನಾ ರೀತಿಯ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಸಾರ್ವಜನಿಕರಲ್ಲಿ ಸಂಶಯ ಮೂಡಿಸಿದ್ದ ಕಾಂಗ್ರೆಸ್ ನಾಯಕರು, ಇದೀಗ ವ್ಯಾಕ್ಸಿನ್ ಹಾಕಿಸಿಕೊಂಡು ಫೋಟೋಗೆ ಫೋಸ್ ನೀಡುತ್ತಿದ್ದಾರೆ. ವಿರೋಧ ಪಕ್ಷಗಳೂ ಸ್ವಸ್ಥ, ಸದೃಢವಾಗಿರಬೇಕೆಂಬುದು ನಮ್ಮ ಆಶಯ. ಆದರೆ ಕಾಂಗ್ರೆಸ್ ತನ್ನ ತಪ್ಪು ಒಪ್ಪಿಕೊಳ್ಳುತ್ತಿಲ್ಲ. ಕಾಂಗ್ರೆಸ್ಸಿಗರಿಗೆ ಜನಸಾಮಾನ್ಯರಿಗಿಂತ ನಾಮದಾರ್ ಕುಟುಂಬದ ಬಗ್ಗೆ ಹೆಚ್ಚು ಕಳಕಳಿ ಎಂದು ಟಾಂಗ್ ನೀಡಿದರು.
ಕಾಂಗ್ರೆಸ್ ಅವಧಿಯಲ್ಲಿ ಕೇವಲ 381 ಮೆಡಿಕಲ್ ಕಾಲೇಜುಗಳಿದ್ದವು. ಈಗ 562 ಮೆಡಿಕಲ್ ಕಾಲೇಜುಗಳಾಗಿವೆ. ರಾಜ್ಯದಲ್ಲಿ ಹಾವೇರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಯಾದಗಿರಿ ಸೇರಿದಂತೆ ಹೊಸದಾಗಿ ಆರು ಮೆಡಿಕಲ್ ಕಾಲೇಜುಗಳು ತಲೆ ಎತ್ತುತ್ತಿವೆ. ಕಾಂಗ್ರೆಸ್ ಅವಧಿಯಲ್ಲಿ ಒಂದು ಏಮ್ಸ್ ಇತ್ತು. ಈಗ 21 ಏಮ್ಸ್ ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದೆ. ಮೆಡಿಕಲ್ ಕಾಲೇಜುಗಳ ಸೀಟುಗಳ ಸಂಖ್ಯೆ 54 ಸಾವಿರದಿಂದ 80 ಸಾವಿರಕ್ಕೇರಿದೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು. ಪಿಎಂ ಕೇರ್ ನಿ ಧಿಯಡಿ 50 ಸಾವಿರ ವೆಂಟಿಲೇಟರ್‌ಗಳನ್ನು ಖರೀದಿಸಲಾಗಿದೆ.
ಎಲ್ಲವೂ ಉತ್ಕೃಷ್ಟ ಗುಣಮಟ್ಟ ಹೊಂದಿವೆ. ಇದೇ ವೆಂಟಿಲೇಟರ್‌ಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ಆರ್ಮಿ ಆಸ್ಪತ್ರೆಗಳಲ್ಲಿ ಬಳಸಲಾಗುತ್ತಿದೆ. ಆದರೆ ಈ ಬಗ್ಗೆ ಪರಿಪೂರ್ಣ ಮಾಹಿತಿ ಇಲ್ಲದೇ ಕೆಲವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.