ಹಳ್ಳಿ ಮತ್ತು ಪಟ್ಟಣಗಳಲ್ಲಿ ಪ್ರತಿ ಮನೆಗೂ ಭೇಟಿ ನೀಡಿ ಕೋವಿಡ್ ಪರೀಕ್ಷೆ : ಆರ್ ಅಶೋಕ
Team Udayavani, May 23, 2021, 6:14 PM IST
ಬೆಂಗಳೂರು : ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸೋಂಕಿನ ಲಕ್ಷಣವಿರುವವರನ್ನ ಪ್ರತಿ ಮನೆ, ಮನೆಗೂ ಹೋಗಿ ಪರೀಕ್ಷಿಸಲು ವಿಶೇಷ ತಂಡ ರಚಿಸಲಾಗುವುದು ಎಂದು ಕಂದಾಯ ಸಚಿವ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್ ಅಶೋಕ ತಿಳಿಸಿದ್ದಾರೆ.
ಈ ಕುರಿತಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಸೋಂಕು ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಅನುಸರಿಸುತ್ತಿದ್ದಾಗಲೂ ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಹರಡುವುದು ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗೆಯೇ ಜನರು ಕೂಡಾ ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹಾಗೆಯೇ ಪರೀಕ್ಷಾ ಕೇಂದ್ರಗಳ ಸಂಖ್ಯೆಯು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲ. ಹೀಗಾಗಿ ವೈದ್ಯರು, ಎಎನ್ಎಮ್ ಗಳು, ಅಂಗನವಾಡಿ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಪರೀಕ್ಷೆ ಕೈಗೊಳ್ಳಲಿದ್ದಾರೆ.
ಈ ತಂಡವು ಸೋಂಕಿತರನ್ನ ಗುರುತಿಸಿ ಸ್ಥಳದಲ್ಲೆ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕೈಗೊಳ್ಳಲಿದ್ದಾರೆ.ಹೀಗಾಗಿ ಸೋಂಕಿತರನ್ನ ಗುರುತಿಸುವುದಕ್ಕೆ ಅನುಕೂಲವಾಗಲಿದೆ. ವೈದ್ಯರು ಆ ವೇಳೆಯೇ ಸೋಂಕಿತರಿಗೆ ಮನೆಯಲ್ಲೇ ಕಾಳಜಿ ತೆಗೆದುಕೊಂಡರೇ ಸಾಕೇ ಅಥವಾ ಆಸ್ಪತ್ರೆಗೆ ದಾಖಲಾಗಬೇಕಾ ಎಂಬುದನ್ನ ನಿರ್ಧರಿಸುತ್ತಾರೆ. ಹಾಗೇ ಪ್ರಾಥಮಿಕ ಸೋಂಕಿತರನ್ನೂ ಗುರುತಿಸಿ ಚಿಕಿತ್ಸೆ ನೀಡಲಾಗುತ್ತದೆ. ಜೊತೆಗೆ ವೈದ್ಯಕೀಯ ಕಿಟ್ ಕೂಡಾ ನೀಡಲಾಗುತ್ತದೆ”, ಎಂದು ಹೇಳಿದರು.
“ಈಗಾಗಲೇ ಮೊಬೈಲ್ ಕ್ಲಿನಿಕ್ ಗ್ರಾಮಗಳಿಗೆ ಭೇಟಿ ನೀಡಿದ್ದು, ಅಂತಿಮ ವರ್ಷದಲ್ಲಿರುವ ವೈದ್ಯಕೀಯ, ಬಿಎಸ್ಸಿ ನರ್ಸಿಂಗ್, ಬಿಡಿಎಸ್ ವಿದ್ಯಾರ್ಥಿಗಳನ್ನ ಇದಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ” ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.