ಬ್ಲ್ಯಾಕ್‌ ಫಂಗಸ್‌ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್‌

ತುರ್ತು ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ

Team Udayavani, May 23, 2021, 6:40 PM IST

22hvr5

ಹಾವೇರಿ: ರೂಪಾಂತರಗೊಂಡಿರುವ ಕೊರೊನಾ ವೈರಸ್‌ನ ಎರಡನೇ ಅಲೆ ಸಂದರ್ಭದಲ್ಲಿ ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿರುವ ಬ್ಲ್ಯಾಕ್‌ ಫಂಗಸ್‌ ಸೋಂಕಿಗೆ ತುತ್ತಾಗಿರುವವರ ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್‌ ಸಿದ್ಧಪಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆಯಲ್ಲಿ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇತ್ತೀಚೆಗೆ ಬ್ಲಾಕ್‌ ಫಂಗಸ್‌ ಸೋಂಕು ಹೆಚ್ಚಾಗಿ ಕಾಣಿಸುತ್ತಿದೆ. ಈ ಸೋಂಕು ತಗುಲಿದ ವ್ಯಕ್ತಿಗಳ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್‌ ನಿರ್ಮಾಣ ಮಾಡಬೇಕು. ಈ ಸೋಂಕಿಗೆ ಚಿಕಿತ್ಸೆ ನೀಡಲು ಬೇಕಾದ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹ ಮಾಡಿಟ್ಟುಕೊಳ್ಳಬೇಕೆಂದು ಸೂಚನೆ ನೀಡಿದರು. ಮೂರನೇ ಅಲೆಯಲ್ಲಿ ಮಕ್ಕಳನ್ನು ರಕ್ಷಿಸಲು ವೈದ್ಯರು ಸನ್ನದ್ಧರಾಗಬೇಕು. ಮುಂದಿನ ದಿನಗಳಲ್ಲಿ ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಉಂಟು ಮಾಡುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ, ಮೂರನೇ ಅಲೆ ಎದುರಿಸಲು ಜಿಲ್ಲೆಯ ಆರೋಗ್ಯ ಇಲಾಖೆ ಸಿದ್ಧವಾಗಬೇಕು. ಮಕ್ಕಳ ವಾರ್ಡ್‌ಗಳನ್ನು ಪ್ರತ್ಯೇಕವಾಗಿ ನಿರ್ಮಾಣ ಮಾಡಬೇಕೆಂದರು.

ಮಕ್ಕಳ ವಾರ್ಡ್‌ನಲ್ಲಿ ಐಸಿಯು ಚಿಕಿತ್ಸಾ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಆ ಮೂಲಕ ಮಕ್ಕಳ ಚಿಕಿತ್ಸೆಗಾಗಿ ಸಕಲ ರೀತಿಯಲ್ಲಿ ಸಜ್ಜಾಗಿರಬೇಕು. ಜಿಲ್ಲೆಗೆ ಈಗಾಗಲೇ 1000 ಐಸಿಯು ಸಾಮರ್ಥ್ಯದ ಆಕ್ಸಿಜನ್‌ ಜನರೇಟರ್‌ ಮಂಜೂರಾಗಿದೆ. ಕಾಮಗಾರಿಯನ್ನು ಬೇಗ ಮುಗಿಸುವಂತೆ ಸೂಚಿಸಲಾಗಿದೆ. ಇದರ ಜತೆಗೆ ಹೆಚ್ಚುವರಿಯಾಗಿ ಇನ್ನೊಂದು 1000 ಸಾಮರ್ಥ್ಯದ ಆಕ್ಸಿಜನ್‌ ಜನರೇಟರ್‌ ಅನ್ನು ಜಿಲ್ಲೆಗೆ ತರಲು ಪ್ರಯತ್ನ ಮಾಡುತ್ತೇನೆ ಎಂದು ಸಚಿವ ಬೊಮ್ಮಾಯಿ ಹೇಳಿದರು.

ಸೋಂಕಿತರು ಗುಣಮುಖರಾದ ನಂತರ ಅವರ ಆರೋಗ್ಯದ ಮೇಲೆ ಸದಾ ನಿಗಾ ಇರಿಸಬೇಕು. ಅವರನ್ನು ಕಾಲಕಾಲಕ್ಕೆ ತಪಾಸಣೆ ಮಾಡುವ ವ್ಯವಸ್ಥೆ ಮಾಡಿ. ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡುವ ಸಂದರ್ಭದಲ್ಲಿಯೇ ಆ ವ್ಯಕ್ತಿಯ ಆರೋಗ್ಯದ ತೀವ್ರತೆ ಗುರುತಿಸಿ ಸೋಂಕಿತರನ್ನು ಯೋಜನಾಬದ್ಧವಾಗಿ ವಿಂಗಡಣೆ ಮಾಡಬೇಕು. ಆಕ್ಸಿಜನ್‌ ಅನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಎಲ್ಲಿಯೂ ಆಕ್ಸಿಜನ್‌ ವ್ಯಯ ಆಗದಂತೆ ನಿಗಾ ವಹಿಸಬೇಕೆಂದು ವೈದ್ಯರಿಗೆ ಕಿವಿಮಾತು ಹೇಳಿದರು.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿ ಕಾರಿ ಮಹಮ್ಮದ್‌ ರೋಷನ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|ಪಿ.ಆರ್‌.ಹಾವನೂರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ

5

Chocolate ಕೇವಲ ಸಸ್ಯಾಹಾರವೇ? ಸಸ್ಯಾಹಾರಿಗಳೇ ಗಮನಿಸಿ…

jairam ramesh

Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

11

Puttur: ಬಸ್‌ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

9

Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

4

Kasaragod: ಸ್ಕೂಟರ್‌ ಅಪಘಾತ; ಸವಾರನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.