ಅನುದಾನರಹಿತ ಶಾಲಾ ಶಿಕ್ಷಕರಿಗೆ ಪ್ಯಾಕೇಜ್‌ ಕೊಡಿ


Team Udayavani, May 23, 2021, 9:11 PM IST

23-16

ಚಿತ್ರದುರ್ಗ: ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕ-ಶಿಕ್ಷಕೇತರ ಸಮುದಾಯಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ ಹಾಗೂ ಚಿದಾನಂದ ಗೌಡ ಅವರು ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಕೋವಿಡ್‌ ಕಾರಣದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕ್ಷೇತ್ರಗಳಲ್ಲಿ ಶಿಕ್ಷಣ ಕ್ಷೇತ್ರವೂ ಪ್ರಧಾನವಾದ ಕ್ಷೇತ್ರವಾಗಿದೆ. ಸರ್ಕಾರ ವಿಧಿ ಸಿದ ಲಾಕ್‌ಡೌನ್‌ ರಾಜ್ಯಾದ್ಯಂತ ಇರುವ ಸಾವಿರಾರು ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಮೇಲೆ ಅವಲಂಬಿಸಿದ್ದ ಹಲವು ವರ್ಗಗಳ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಕಳೆದ ಸಾಲಿನಲ್ಲಿ ಭೌತಿಕ ತರಗತಿಗಳು ನಡೆಯದ ಕಾರಣ ಪೋಷಕರು ಮಕ್ಕಳ ಬೋಧನಾ ಶುಲ್ಕವನ್ನು ಪಾವತಿಸಲು ನಿರೀಕ್ಷಿತ ರೀತಿಯಲ್ಲಿ ಆಸಕ್ತಿ ತೋರಲಿಲ್ಲ. ಇದೂ ಕೂಡಾ ಬಹು ವಿಧದ ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಯಿತು ಎಂದಿದ್ದಾರೆ.

ಖಾಸಗಿ ಶಾಲೆಗಳಲ್ಲಿ, ವಿಶೇಷವಾಗಿ ಗ್ರಾಮಾಂತರ ಪ್ರದೇಶಗಳಲ್ಲಿರುವ ಬಜೆಟ್‌ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೋಧಕ, ಬೋಧಕೇತರ ಸಿಬ್ಬಂದಿ ಮುನ್ನೆಲೆಗೆ ಬಾರದ, ಅತಿಯಾದ ಸಮಸ್ಯೆಗೆ ಸಿಲುಕಿರುವ ಸಮುದಾಯವಾಗಿದ್ದಾರೆ. ಪೋಷಕ-ಶಾಲೆಗಳ ನಡುವಿನ ಸಮಸ್ಯೆಗಳ ನೇರ ಪರಿಣಾಮ ಈ ಸಮುದಾಯದ ಮೇಲಾಗಿದೆ. ಅಸಂಖ್ಯ ಶಿಕ್ಷಕರು, ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡಿದ್ದಾರೆ, ಹಣ್ಣು ತರಕಾರಿ ಮಾರಿದ್ದಾರೆ.

ಇದನ್ನು ನಾವು ಹಲವು ಮಾಧ್ಯಮಗಳಲ್ಲಿ ನೋಡಿದ್ದೇವೆ, ಕೇಳಿದ್ದೇವೆ. ಅವರ ನೆರವಿಗೆ ಧಾವಿಸುವುದೂ ಸಹ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

ಸರ್ಕಾರಿ ಶಿಕ್ಷಕರ ಬದುಕಿನಲ್ಲಿ ಅಷ್ಟೊಂದು ಪರಿಣಾಮ ಬೀರದಿದ್ದರೂ ಖಾಸಗಿ ಶಾಲೆಯ ಶಿಕ್ಷಕರ ಬದುಕು ದೇವರಿಗೆ ಪ್ರೀತಿ ಎನ್ನುವಂತಾಗಿದೆ. ಕೆಲವು ಶಾಲೆಗಳು ಅಲ್ಪ ಸ್ವಲ್ಪ ಸಂಬಳ ನೀಡುತ್ತಿದ್ದರೆ, ಕೆಲವು ಶಾಲೆಗಳು ಬಿಡಿಗಾಸನ್ನೂ ನೀಡುತ್ತಿಲ್ಲ, ಕಳೆದ ಎರಡು ವರ್ಷಗಳಿಂದ ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ಸಂಸಾರ ನಿರ್ವಹಣೆ ಸಾಧ್ಯವಾಗದೆ ಏನು ಮಾಡಬೇಕೆಂಬ ಚಿಂತೆ ಕಾಡುತ್ತಿದೆ. ಬೇರೆ ಉದ್ಯೋಗ ಗೊತ್ತಿಲ್ಲ, ಶಿಕ್ಷಕ ವೃತ್ತಿಯಲ್ಲಿ ಸಂಬಳ ಸಿಗುತ್ತಿಲ್ಲ. ಇದರಿಂದ ಖಾಸಗಿ ಶಾಲಾ ಶಿಕ್ಷಕ ಸ್ಥಿತಿ ಅತಂತ್ರವಾಗಿದೆ ಎಂದು ವಿವರಿಸಿದ್ದಾರೆ.

ಟಾಪ್ ನ್ಯೂಸ್

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

13

Kollywood: ಯೂಟ್ಯೂಬ್‌ ವಿಮರ್ಶೆ ಬ್ಯಾನ್‌ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

15

Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ… ‌

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.