ಕೋವಿಡ್ ನಿಯಂತ್ರಣ ಮಾಡಲು ಪಂಚಾಯಿತಿ ಅಧ್ಯಕ್ಷರು-ಸದಸ್ಯರಿಗೆ ಈಶ್ವರಪ್ಪ ಸೂಚನೆ
Team Udayavani, May 24, 2021, 3:04 PM IST
ಶಿವಮೊಗ್ಗ : ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು-ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಗ್ರಾಮೀಣ ಜನರ ಸಹಕಾರ ಪಡೆದು ಕೊರೋನ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ ಮಾಡುವಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯಿತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ಅವರು ಇಂದು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮೈಸೂರು ಮತ್ತು ಬೆಂಗಳೂರು ವಿಭಾಗದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಯಾ ಜಿಲ್ಲೆಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.
ಕೋವಿಡ್ ನಿಯಂತ್ರಣದಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಪ್ರಮುಖವಾದುದ್ದಾಗಿದೆ. ಕೊರೋನ 2ನೇ ಅಲೆಯು ಅತ್ಯಂತ ಅಪಾಯಕಾರಿಯಾಗಿದ್ದು, ಅದರ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರೂ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾದ ಅಗತ್ಯವಿದೆ. ಈ ಹಿಂದೆ ರಚಿಸಲಾಗಿದ್ದ ಕಾರ್ಯಪಡೆಗಳು ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿದ್ದವು. ಈ ಕಾರ್ಯಪಡೆಗಳನ್ನು ಇನ್ನಷ್ಟು ಬಲಿಷ್ಠಗೊಳಿಸಿ ಹೆಚ್ಚಿನ ಜವಾಬ್ದಾರಿ ನೀಡಬೇಕಾದ ಅಗತ್ಯವಿದೆ. ಹಾಗಾದಾಗ ಸೋಂಕು ಹತೋಟಿಗೆ ಬರುವ ಸಾಧ್ಯತೆ ಇದೆ ಎಂದವರು ಅಭಿಪ್ರಾಯಪಟ್ಟರು.
ಗ್ರಾಮೀಣ ಪ್ರದೇಶದಲ್ಲಿನ ಮನೆಗಳಲ್ಲಿ ಈಗಲೂ ಒಟ್ಟು ಕುಟುಂಬ ಪದ್ಧತಿ ಇದೆ. ಇಂತಹ ಮನೆಗಳಲ್ಲಿ ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು ಅಸಾಧ್ಯವಾದುದರಿಂದ ಸೋಂಕು ಹೆಚ್ಚಾಗುವ ಸಂಭವವೆ ಜಾಸ್ತಿ. ಆದ್ದರಿಂದ ಸೋಂಕಿತರಿಗೆ ಮನೆಯಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ನೀಡದೆ, ಅವರಿಗಾಗಿ ಕಲ್ಪಿಸಿರುವ ಕೋವಿಡ್ ಆರೈಕೆ ಕೇಂದ್ರಗಳಿಗೆ ಕಳುಹಿಸಿ ಕೊಡಬೇಕು. ಸ್ಥಳೀಯ ಜನಪ್ರತಿನಿಧಿಗಳೂ ಕೂಡ ಸಹಕರಿಸುವ ಅಗತ್ಯವಿದೆ ಎಂದರು.
ಈ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯಿತಿ ಸಿಬ್ಬಂಧಿಗಳನ್ನೂ ಕೂಡ ಇತರೆ ಇಲಾಖೆಗಳ ಸಿಬ್ಬಂಧಿಗಳಂತೆ ಕೊರೋನ ವಾರಿಯರ್ಸ್ ಗಳಾಗಿ ಪರಿಗಣಿಸಿ, ಅವರಿಗೆ ಎಲ್ಲಾ ರೀತಿಯ ನೆರವು ಸಹಕಾರ ಒದಗಿಸಲಾಗುವುದು ಎಂದ ಅವರು ಸೋಂಕು ನಿಯಂತ್ರಣದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ರಾಜ್ಯದ ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯಿತಿಯನ್ನು ಉತ್ತಮ ಗ್ರಾಮ ಪಂಚಾಯಿತಿ ಹಾಗೂ ತಾಲೂಕಿನ ಮೂವರನ್ನು ಉತ್ತಮ ಸೇವಕ ಪ್ರಶಸ್ತಿಗೆ ಆಯ್ಕೆ ಮಾಡಿ, ಗೌರವಿಸಲಾಗುವುದು. ಅಲ್ಲದೆ ಪ್ರತಿ ಕೋವಿಡ್ ಉಸ್ತುವಾರಿ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದರು.
ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮದ ಸ್ವಚ್ಚತೆ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಅಗತ್ಯ ಸೌಲಭ್ಯ ಇರುವ ಬಗ್ಗೆ ಗಮನಹರಿಸಬೇಕೆಂದ ಅವರು ಸೋಂಕಿತರಿಗೆ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಳ್ಳಬೇಕು. ಸಂತೆ, ಜಾತ್ರೆ, ಸಭೆ-ಸಮಾರಂಭಗಳನ್ನು ಕಡ್ಡಾಯವಾಗಿ ನಿರ್ಬಂಧಿಸಬೇಕೆಂದವರು ಸೂಚಿಸಿದರು.
ಈ ಎಲ್ಲಾ ಚಟುವಟಿಕೆಗಳ ನಿರ್ವಹಣೆಗಾಗಿ 14ನೇ ಹಣಕಾಸಿನ ಅನುದಾನ, 15ನೇ ಹಣಕಾಸಿನ ನಿರ್ಬಂಧಿತ ಅನುದಾನ ಹಾಗೂ ಸರ್ಕಾರವು ಎಸ್ ಡಿ ಆರ್ ಎಫ್ ಯೋಜನೆಯಡಿ ಈಗಾಗಲೇ ಬಿಡುಗಡೆಗೊಳಿಸಿರುವ ರೂ.50000/- ಅನುದಾನವನ್ನು ಬಳಸಿಕೊಳ್ಳಬಹುದಾಗಿದೆ. ಅಲ್ಲದೆ ಅಗತ್ಯವಿದ್ದಲ್ಲಿ ಇನ್ನಷ್ಟು ಅನುದಾನವನ್ನು ಬಿಡುಗಡೆಗೊಳಿಸಲಾಗುವುದು ಎಂದರು.
ವಿಡಿಯೋ ಸಂವಾದದಲ್ಲಿ ಪಂಚಾಯಿತ್ ರಾಜ್ ಇಲಾಖೆಯ ಆಯುಕ್ತ ಅತೀಕ್ ಅಹ್ಮದ್, ಕಾರ್ಯದರ್ಶಿ ಶ್ರೀಮತಿ ಉಮಾ ಮಹದೇವನ್ ಸೇರಿದಂತೆ ಬೆಂಗಳೂರು ಮತ್ತು ಮೈಸೂರು ವಿಭಾಗಗಳ ವ್ಯಾಪ್ತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಪಿಡಿಒಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.