ಬ್ಲ್ಯಾಕ್‌ ಫಂಗಸ್‌ ಮೂಲ ಪತ್ತೆಗೆ ಸೂಚನೆ

Team Udayavani, May 24, 2021, 5:45 PM IST

Black fungus

ಬೆಂಗಳೂರು: ರಾಜ್ಯದಲ್ಲಿ ಕೊರೊನಾದಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವಅಪಾಯಕಾರಿ ಬ್ಲ್ಯಾಕ್‌ ಫಂಗಸ್‌ ಮೂಲ ಪತ್ತೆ ಹಚ್ಚಲು ವೈದ್ಯರು ಹಾಗೂ ಸೂಕ್ಷಾಣು ಜೀವಿ ತಜ್ಞರಿಗೆ ಕೊರೊನಾ ಕಾರ್ಯಪಡೆ ಅಧ್ಯಕ್ಷರೂ ಆದಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣಸೂಚನೆ ನೀಡಿದ್ದಾರೆ.

ಖ್ಯಾತ ತಜ್ಞ ವೈದ್ಯರು ಹಾಗೂ ಕೊರೊನಾ ಮತ್ತುಬ್ಲ್ಯಾಕ್‌ ಫಂಗಸ್‌ ಚಿಕಿತ್ಸಾ ಶಿಷ್ಟಾಚಾರ ಸಮಿತಿಗಳತಜ್ಞರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದಅವರು ಸೋಮವಾರದಿಂದಲೇ ಬ್ಲ್ಯಾಕ್‌ ಫಂಗಸ್‌ಕಾಣಿಸಿಕೊಂಡ ಮೂಲ ಹುಡುಕುವಂತೆ ನಿರ್ದೇಶನ ನೀಡಿ, ಚಿಕಿತ್ಸೆಗೆ ಹೊಸ ಮಾರ್ಗಸೂಚಿ ಸಿದ್ಧಪಡಿಸುವಂತೆಯೂ ನಿರ್ದೇಶನ ನೀಡಿದರು.

ಸಭೆಯ ನಂತರ ಮಾತನಾಡಿದ ಅಶ್ವಥ್‌ ನಾರಾಯಣ್‌, ಮಣಿಪಾಲ್‌ ಆಸ್ಪತ್ರೆಯ ಇ ಎನ್‌ಟಿತಜ್ಞಡಾ.ಸಂಪತ್‌ ಚಂದ್ರ ಪ್ರಸಾದ್‌ ರಾವ್‌ ಪ್ರಾತ್ಯಕ್ಷಿಕೆನೀಡಿ, ವಿಶ್ವದ ಯಾವ ದೇಶದಲ್ಲೂ ಕೊರೊನಾದಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳದಬ್ಲ್ಯಾಕ್‌ ಫಂಗಸ್‌ ಭಾರತದಲ್ಲಿ ಮಾತ್ರ ಏಕೆ ಕಾಣಿಸಿಕೊಳ್ಳುತ್ತಿದೆ ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ.

ಮೊದಲ ಅಲೆ ವೇಳೆ ಕಾಣಿಸಿಕೊಳ್ಳದ ಬ್ಲ್ಯಾಕ್‌ಫಂಗಸ್‌ ಈಗ ಕಾಣಿಸಿಕೊಳ್ಳಲು ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಪೂರೈಕೆ ಮಾಡಲಾಗುತ್ತಿರುವ ಆಮ್ಲಜನಕ ಮಾರ್ಗದ ಮೂಲಕ ಬರುತ್ತಿದೆಯಾ,ನಮ್ಮಲ್ಲಿನ ಲೋಪವೇನು ಎಂಬುದರ ಬಗ್ಗೆ ಪತ್ತೆಮಾಡುವ ಪ್ರಯತ್ನ ಮಾಡಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನಮ್ಮಲ್ಲಿ ಬಳಕೆಯಾಗುತ್ತಿರುವ ಆಮ್ಲಜನಕ ಶುದ್ಧವಾಗಿದೆಯಾ ಆಮ್ಲಜನಕ ಸಾಂದ್ರಕಗಳಿಗೆ ಡಿಸ್ಟಲರಿ ನೀರು ಬಳಕೆಯಾಗುತ್ತಿದೆಯಾ, ಐಸಿಯುಗಳ ಸ್ವತ್ಛತೆ, ಆಸ್ಪತ್ರೆಗಳ ಸ Ìತ್ಛತೆ ಹಾಗೂ ಆಮ್ಲಜನಕಸಿಲಿಂಡರ್‌ ಗಳ ಸ್ವತ್ಛತೆ ವೈದ್ಯಕೀಯ ಮಾರ್ಗಸೂಚಿಪ್ರಕಾರ ಮಾಡಲಾಗುತ್ತಿದೆಯಾ ಎಂಬೆಲ್ಲಾ ವಿಚಾರಪ್ರಸ್ತಾಪಿಸಿದ್ದು, ಯಾವ ಹಂತದಲ್ಲಿ ಸಮಸ್ಯೆಇರಬಹುದು ಈ ಎಲ್ಲ ಅಂಶಗಳ ಬಗ್ಗೆ ಅಧ್ಯಯನಮಾಡಬೇಕಿದೆ ಎಂದು ಹೇಳಿದರು.

ಈ ಎಲ್ಲಅಂಶಗಳ ಬಗ್ಗೆ ಉತ್ತರ ಹುಡುಕುವಂತೆ ತಜ್ಞವೈದ್ಯರಿಗೆ ಸೂಚನೆ ನೀಡಲಾಗಿದೆ ಎಂದುತಿಳಿಸಿದರು.ಕಳೆದ ಏಳು ದಿನಗಳಲ್ಲಿ ಏಳು ನೂರು ಬ್ಲ್ಯಾಕ್‌ಫಂಗಸ್‌ ಪೀಡಿತರು ರಾಜ್ಯದಲ್ಲಿ ಪತ್ತೆಯಾಗಿದ್ದಾರೆ.ಪ್ರಸ್ತುತ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆಪಡೆಯುತ್ತಿರುವ ಬಹುತೇಕ ರೋಗಿಗಳ ಸಣ್ಣಪುಟ್ಟಆಸ್ಪತ್ರೆಗಳಿಂದ ರೆಫರ್‌ ಆಗಿ ಬಂದಿದ್ದಾರೆ. ಇವರನ್ನುರೆಫರ್‌ ಮಾಡಿದ ಆಸ್ಪತ್ರೆಗಳ ವ್ಯವಸೆಯನ್ನು ಪರಿಶೀಲನೆ ಮಾಡುವಂತೆ ತಜ್ಞರಿಗೆ ತಿಳಿಸಲಾಗಿದೆಎಂದರು.

ರೋಗಿಗಳಿಗೆ ಆಸ್ಪತ್ರೆಗಳು ಎಷ್ಟು ಸುರಕ್ಷಿತ ಎಂಬಬಗ್ಗೆ ನಾವು ಖಾತರಿ ಮಾಡಿಕೊಳ್ಳಬೇಕಿದೆ. ಎಲ್ಲಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸಾ ಶಿಷ್ಟಾಚಾರವನ್ನು ಚಾಚೂ ತಪ್ಪದೆ ಪಾಲಿಸಲಾಗಿದೆಯಾ, ಬ್ಲ್ಯಾಕ್‌ಫಂಗಸ್‌ಪೀಡಿತರಿಗೆಗುಣಮಟ್ಟದಚಿಕಿತ್ಸೆ ಲಭ್ಯವಿದೆಯಾ, ಸರ್ಕಾರ ನೀಡುತ್ತಿರುವ ಸವಲತ್ತು ಪರಿಣಾಮಕಾರಿಯಾಗಿ ಬಳಕೆ ಆಗುತ್ತಿವೆಯಾ ಎಂಬ ಬಗ್ಗೆಪರಿಶೀಲಿಸಲು ತಿಳಿಸಲಾಗಿದೆ ಎಂದು ಹೇಳಿದÃು.‌ಸೋಮವಾರದಿಂದಲೇ ತಜ್ಞರ ತಂಡಗಳುಅಧ್ಯಯನ ನಡೆಸಿ ಅತಿ ಶೀಘ್ರದಲ್ಲಿಯೇ ವರದಿ ನೀಡಲಿವೆ.

ಇದು ಅತ್ಯಂತ ಗಂಭೀರ ಸಮಸ್ಯೆಯಾಗಿದ್ದು, ಉಪೇಕ್ಷೆ ಮಾಡುವ ಪ್ರಶ್ನೆ ಇಲ್ಲ ಎಂದು ಹೇಳಿದರು.ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವೇದ್‌ ಅಖ್ತರ್‌, ಕೋವಿಡ್‌ಚಿಕಿತ್ಸೆ ಶಿಷ್ಟಾಚಾರ ಸಮಿತಿ ಅಧ್ಯಕ್ಷಡಾ.ಸಚ್ಚಾದಾನಂದ, ಸದಸ್ಯರಾದ ಡಾ.ರವಿ,ಡಾ.ಶಶಿಭೂಷಣ, ಬ್ಲ್ಯಾಕ್‌ ಫಂಗಸ್‌ ಚಿಕಿತ್ಸೆಗೆ  ಶಿಷ್ಟಾಚಾರ ಸಮಿತಿ ಅಧ್ಯಕ್ಷೆ ಡಾ.ಅಂಬಿಕಾ, ಕ್ಯಾನ್ಸರ್‌ತಜ್ಞ ಡಾ.ವಿಶಾಲ್‌ ರಾವ್‌, ಆರೋಗ್ಯ ಇಲಾಖೆನಿರ್ದೇಶಕ ಡಾ.ಓಂಪ್ರಕಾಶ್‌ ಪಾಟೀಲ್‌ ಇದ್ದರು.

ಟಾಪ್ ನ್ಯೂಸ್

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.